CLAT Exam 2023 Registration : ಕ್ಲಾಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆಗೆ (CLAT 2023) ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳಿಂದ ಈ ಮುಂಚೆ ಆಗಸ್ಟ್ 8,2022 ರಿಂದ ನವೆಂಬರ್ 13,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ತದನಂತರ ಅರ್ಜಿ ಸಲ್ಲಿಕೆಯ ಅವಧಿಯನ್ನು ನವೆಂಬರ್ 18,2022ರ ವರೆಗೆ ವಿಸ್ತರಿಸಲಾಗಿದ್ದು, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿರುತ್ತದೆ.

CLAT 2023 ಪರೀಕ್ಷೆಯನ್ನು ಡಿಸೆಂಬರ್ 18,2022 ರಂದು ನಡೆಸಲು ನಿರ್ಧರಿಸಲಾಗಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಹತೆಗಳೇನಿರಬೇಕು, ಅರ್ಜಿ ಶುಲ್ಕ ಎಷ್ಟು? ಮತ್ತು ಪ್ರಮುಖ ದಿನಾಂಕಗಳ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

ಕ್ಲ್ಯಾಟ್ 2023 ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

CLAT 2023 ಪರೀಕ್ಷೆ:

ಭಾರತದ ಉನ್ನತ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಮತ್ತು ಹಲವಾರು ಅಂಗಸಂಸ್ಥೆ ಕಾಲೇಜುಗಳಲ್ಲಿ UG ಮತ್ತು PG ಕಾನೂನು ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯಲು CLAT ಪರೀಕ್ಷೆಯನ್ನು ನಡೆಸಲಾಗುತ್ತದೆ. ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (CLAT) 2022 ಅನ್ನು NLU ಗಳ ಒಕ್ಕೂಟವು ಡಿಸೆಂಬರ್ 18,2022ರಂದು ನಡೆಸುತ್ತದೆ.

ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (CLAT)ಯಲ್ಲಿ ಪಡೆದ ಅಂಕಗಳು 5-ವರ್ಷದ LLB ಮತ್ತು LLM ಕೋರ್ಸ್ ಗಳಿಗೆ ಉನ್ನತ NLU ಗಳಿಗೆ ಪ್ರವೇಶ ಪಡೆಯಲು ಸಹಾಯವಾಗಲಿದೆ.

CLAT 2023 ಅರ್ಹತೆ :

UG CLAT ಗಾಗಿ 12ನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 45 ಅಂಕಗಳು (SC, ST ಅಭ್ಯರ್ಥಿಗಳ ಸಂದರ್ಭದಲ್ಲಿ 40 ಶೇಕಡಾ) ಅಥವಾ ತತ್ಸಮಾನ ಗ್ರೇಡ್ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

CLAT PG ಗಾಗಿ ಅಭ್ಯರ್ಥಿಗಳು ಕನಿಷ್ಠ 50 ಪ್ರತಿಶತ ಅಂಕಗಳೊಂದಿಗೆ LLB ಅಥವಾ ತತ್ಸಮಾನ ಪದವಿ ಅಥವಾ ಅದರ ಸಮಾನ ದರ್ಜೆಯನ್ನು ಹೊಂದಿರಬೇಕು. ಎಸ್‌ಸಿ ಮತ್ತು ಎಸ್‌ಟಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಶೇಕಡಾ 45 ಅಂಕಗಳನ್ನು ಪಡೆದಿರಬೇಕು.

CLAT 2023 ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಆಗಸ್ಟ್ 8,2022

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : ನವೆಂಬರ್ 18,2022

ಪರೀಕ್ಷೆಯ ದಿನಾಂಕ : ಡಿಸೆಂಬರ್ 18,2022

CLAT 2023 ಅರ್ಜಿ ಶುಲ್ಕ :

CLAT 2023 ಪರೀಕ್ಷೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ/ಅಂಗವಿಕಲ ಅಭ್ಯರ್ಥಿಗಳು 4000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಬಿಪಿಎಲ್ ಕಾರ್ಡ್ ಹೊಂದಿರುವ ಅಭ್ಯರ್ಥಿಗಳು 3,500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೋಡ್ ಬಳಸಿ ಮಾತ್ರ ಪಾವತಿಸಬೇಕಿರುತ್ತದೆ.

CLAT 2023 ಅರ್ಜಿ ಸಲ್ಲಿಕೆ :

ಆಕಾಂಕ್ಷಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ CLAT 2023ರ ಆನ್‌ಲೈನ್ ಅರ್ಜಿ ನಮೂನೆಯ ಬಗ್ಗೆ ಪರಿಶೀಲಿಸಬಹುದು. ತದನಂತರ ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೋಂದಣಿ ಮಾಡುವಾಗ ಅಭ್ಯರ್ಥಿಗಳು ತಮ್ಮ ಮಾನ್ಯ ಇಮೇಲ್ ಐಡಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು. ಒಮ್ಮೆ ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳಿಗೆ ಅರ್ಜಿ ತಿದ್ದುಪಡಿಗೆ ಕೂಡ ಅವಕಾಶ ನೀಡಲಾಗುತ್ತದೆ. ಆಗ ಅಭ್ಯರ್ಥಿಗಳು ಅರ್ಜಿಯಲ್ಲಿ ಏನಾದರು ತಪ್ಪು ಮಾಹಿತಿ ತುಂಬಿದ್ದಲ್ಲಿ ಅಥವಾ ಮಾಹಿತಿಯಲ್ಲಿ ಬದಲಾವಣೆಗಳಲ್ಲಿ ಮಾಡಬಹುದು. ಅಭ್ಯರ್ಥಿಗಳು ಗಮನದಲ್ಲಿಡಬೇಕಾದ ಅಂಶವೆಂದರೆ ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳುವುದು.

ಅರ್ಜಿ ಸಲ್ಲಿಸುವುದು ಹೇಗೆ ? :

ಸ್ಟೆಪ್ 1 : CLAT- consortiumofnlus.ac.in ನ ಅಧಿಕೃತ ಸೈಟ್‌ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ ಮತ್ತು ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅನ್ನು ನಮೂದಿಸಿ.
ಸ್ಟೆಪ್ 3 : ನಂತರ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4 : ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ
ಸ್ಟೆಪ್ 5 : ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಕ್ರೆಡಿಟ್, ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
ಸ್ಟೆಪ್ 6 : ಅಭ್ಯರ್ಥಿಗಳು ನಂತರ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
CLAT Exam 2023 : Registration dates ends today. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X