ಕಾಮೆಡ್ ಕೆ ಯುಜಿಸಿ ಮೇ 12 ರಂದು ಪರೀಕ್ಷೆ ನಡೆಯಲಿದೆ

ಕರ್ನಾಟಕದಲ್ಲಿರುವ ಖಾಸಗಿ ಕಾಲೇಜುಗಳಲ್ಲಿ ವೃತ್ತಿಪರ ಶಿಕ್ಷಣ ತೆಗೆದುಕೊಳ್ಳುವವರಿಗಾಗಿ ನಡೆಸುವ ಕಾಮೆಡ್ ಕೆ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಿತ್ತು. ಈಗಾಗಲೇ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದು, ಇದೀಗ ಪ್ರವೇಶ ಪತ್ರ ಪಡೆಯುವುದು ಬಾಕಿ ಇದೆ.

ಪರೀಕ್ಷೆಯು ಮೇ 12,2019 ರಂದು ನಡೆಯಲಿದ್ದು, ವಿದ್ಯಾರ್ಥಿಗಳು ಮೇ 3,2019 ರಿಂದ ಮೇ 11,2019 ರೊಳಗೆ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕಾಮೆಡ್ ಕೆ  ಮೇ 12 ರಂದು ಪ್ರವೇಶ ಪರೀಕ್ಷೆ

ಕಾಮೆಡ್ ಕೆ ಅಂದರೆ:

ಕಾಮೆಡ್ ಕೆ ಎಂದರೆ ಕರ್ನಾಟಕ ಖಾಸಗಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಎಂಜಿನಿಯರ್‌ ಕಾಲೇಜುಗಳ ಸಂಘ (ಕಾಮೆಡ್‌-ಕೆ), ರಾಜ್ಯದಲ್ಲಿರುವ 181 ಕ್ಕೂ ಹೆಚ್ಚಿನ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಕರ್ನಾಟಕ ಖಾಸಗಿ ವೈದ್ಯಕೀಯ, ದಂತವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಸಂಘ (ಕಾಮೆಡ್-ಕೆ) ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸುತ್ತದೆ.

ಈ ಹಿಂದೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗೂ ಇದೇ ಸಂದರ್ಭದಲ್ಲಿ ಪ್ರವೇಶ ಪರೀಕ್ಷೆ ನಡೆಯುತ್ತಿತ್ತು. ಆದರೆ, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ) ಕಡ್ಡಾಯ ಮಾಡಿರುವುದರಿಂದ ಕಾಮೆಡ್‌-ಕೆ ಪರೀಕ್ಷೆ ನಡೆಸುತ್ತಿಲ್ಲ. ಕಾಮೆಡ್‌-ಕೆ ಪರೀಕ್ಷೆ ಸಂಪೂರ್ಣ ಕಂಪ್ಯೂಟರೀಕೃತವಾಗಿ ನಡೆಯುತ್ತದೆ. ದೇಶದಾದ್ಯಂತ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಆಯಾ ರಾಜ್ಯದ ವಿದ್ಯಾರ್ಥಿಗಳು ಅಲ್ಲಿಯೇ ಪರೀಕ್ಷೆ ಬರೆಯಬಹುದು.

ಕರ್ನಾಟಕದಲ್ಲಿರುವ ಖಾಸಗಿ ಕಾಲೇಜುಗಳಲ್ಲಿ ವೃತ್ತಿಪರ ಶಿಕ್ಷಣ ತೆಗೆದುಕೊಳ್ಳುವವರಿಗಾಗಿ ಕಾಮೆಡ್ ಕೆ ಪ್ರವೇಶ ಪರೀಕ್ಷೆ ನಡೆಸಲಾಗುವುದು. 181 ಕಾಲೇಜುಗಳ 20,000 ಸೀಟುಗಳನ್ನು ಮೆರಿಟ್ ಆಧಾರದ ಮೇಲೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ https://www.comedk.org/ ವೀಕ್ಷಿಸಿ

For Quick Alerts
ALLOW NOTIFICATIONS  
For Daily Alerts

English summary
Comedk examination 2019 will be held on may 12th
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X