Coronavirus: ಏ.14 ರ ನಂತರ SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ, 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಮೋಷನ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿಯನ್ನು ಏಪ್ರಿಲ್ 14 ರ ನಂತರ ಸಿದ್ಧಪಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವರಾದ ಎಸ್.ಸುರೇಶ್ ಕುಮಾರ್ ರವರು ತಿಳಿಸಿದ್ದಾರೆ.

ಕೋವಿಡ್-19: ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಏ.14ರ ಬಳಿಕ ಪ್ರಕಟ

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ದೇಶದೆಲ್ಲೆಡೆ ಹೆಚ್ಚಿತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ, ಈ ಹಿಂದೆಯೇ 1-6ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಪರೀಕ್ಷೆ ರಹಿತ ಪಾಸ್ ಮಾಡಲು ಆದೇಶ ನೀಡಿತ್ತು. ಇಂದು 7 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೂ ಯಾವುದೇ ಪರೀಕ್ಷೆ ನಡೆಸದೆಯೇ ಮುಂದಿನ ತರಗತಿಗೆ ಪ್ರಮೋಷನ್ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ವರ್ಷ 7 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಮಾಡಲು ಉದ್ದೇಶಿಸಲಾಗಿತ್ತು. ಆದರೆ ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚುತ್ತಿರುವ ಕಾರಣ, ಏಳನೇ ತರಗತಿ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆಗೊಳಪಡಿಸದೆ ಪಾಸ್ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

9 ತರಗತಿ ವಿದ್ಯಾರ್ಥಿಗಳಿಗೆ ಫಾರ್ಮೆಟಿವ್ ಮತ್ತು ಸಮ್ಮೇಟಿವ್ ಟೆಸ್ಟ್ಗಳ ಆಧಾರಿತವಾಗಿ ಮುಂದಿನ ತರಗತಿಗೆ ಪ್ರಮೋಟ್ ಮಾಡಲು ಉದ್ದೇಶಿಸಲಾಗಿದೆ. ಈ ಪರೀಕ್ಷೆಗಳಲ್ಲಿ ಪಾಸ್ ಆಗದ ವಿದ್ಯಾರ್ಥಿಗಳನ್ನು, ರಜೆಯ ಸಮಯದಲ್ಲಿ ಕಲಿಕೆಯಲ್ಲಿ ಉತ್ತಮಗೊಳಿಸಿ, ಅವರಿಗೆ ನಂತರ ಪರೀಕ್ಷೆ ನೀಡಿ ಪಾಸ್ ಮಾಡಲು ಶಾಲೆಗಳೇ ನಿರ್ಧಾರ ಕೈಗೊಳ್ಳಲು ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿರುತ್ತಾರೆ.

ರಾಜ್ಯದಲ್ಲಿ ದ್ವಿತೀಯ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ಬಾಕಿ ಉಳಿದಿದ್ದು, ಈ ವಿಷಯದ ಪರೀಕ್ಷೆಯನ್ನು ನಡೆಸುವ ದಿನಾಂಕವನ್ನು ಏಪ್ರಿಲ್ 14 ರ ನಂತರವೇ ನಿರ್ಧಾರ ತೆಗೆದುಕೊಳ್ಳುವುದಾಗಿ ಶಿಕ್ಷಣ ಸಚಿವರ ಸುರೇಶ್ ಕುಮಾರ್ ಹೇಳಿದ್ದಾರೆ.

ಆದರೆ ಪ್ರಮುಖವಾಗಿ ವಿದ್ಯಾರ್ಥಿಗಳು ಪರೀಕ್ಷೆಗಳಿಲ್ಲ ಎಂಬ ಕಾರಣಕ್ಕಾಗಿ ಬೀದಿಗೆ ಬರಬಾರದು. ಪೋಷಕರು ಮಕ್ಕಳ ಬಗ್ಗೆ ಜಾಗೃತಿ ವಹಿಸಿ ಅವರು ಹೊರಬರದಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Coronavirus: sslc exam timetable will release after 14th April. Without exam 7 to 9 class students are promoted to next class said by minister s. suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+