ಸಿಎಸ್ಐಆರ್ ಯುಜಿಸಿ ಎನ್ಇಟಿ ಡಿಸೆಂಬರ್-2017 ಅರ್ಜಿ ಸಲ್ಲಿಕೆ ಪ್ರಾರಂಭ

Posted By:

ಡಿಸೆಂಬರ್ 2017ರ ಸಿಎಸ್ಐಆರ್ ಎನ್ಇಟಿ ಯ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದೆ. ಇಂದಿನಿಂದ ಅಭ್ಯರ್ಥಿಗಳಿಗೆ ನೋಂದಾಯಿಸಿಕೊಳ್ಳಲು ಅವಕಾಸ ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಭೌತಶಾಸ್ತ್ರ, ಜೀವಶಾಸ್ತ್ರ, ಮ್ಯಾಥಮೆಟಿಕಲ್ ಸೈನ್ಸ್ ವಿಷಯ ಸೇರಿದಂತೆ ವಿವಿಧ ವಿಷಯಗಳಿಗೆ ಸಿ‌ಎಸ್‌ಐ‌ಆರ್-ದಿ ಕೌನ್ಸಿಲ್ ಆಫ್ ಸೈನ್‌ಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರೀಸರ್ಚ್ ಹಾಗೂ ಯುಜಿಸಿ ಜಂಟಿಯಾಗಿ ಎನ್‌ಇಟಿ ಪರೀಕ್ಷೆಯನ್ನು ನಡೆಸುತ್ತದೆ.

ಸಿಎಸ್ಐಆರ್ ಯುಜಿಸಿ ಎನ್ಇಟಿ

ವಿದ್ಯಾರ್ಹತೆ

ಸಿಎಸ್ಐಆರ್ ಎನ್ಇಟಿ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳು ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರಬೇಕು ಅಥವಾ ಬಿಇ/ಬಿ.ಟೆಕ್/ಬಿ.ಫಾರ್ಮ/ಎಂಬಿಬಿಎಸ್/ಇಂಟೆಗ್ರೇಟೆಡ್ ಬಿಎಸ್-ಎಂಎಸ್ ಪೂರ್ಣಗೊಳಿಸಿರಬೇಕು.

ವಯೋಮಿತಿ

ಜೆಆರ್ ಎಫ್ ಬಯಸುವವರಿಗೆ ಗರಿಷ್ಠ ವಯೋಮಿತಿ 28 ವರ್ಷ
ಎನ್ಇಟಿ (ಪ್ರಾಧ್ಯಾಪಕ) ಬಯಸುವವರಿಗೆ ವಯೋಮಿತಿ ಇಲ್ಲ.

ಪ್ರಮುಖ ದಿನಾಂಕಗಳು

ಆನ್-ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 23-08-2017
ಅರ್ಜಿ ಶುಲ್ಕ ಪಾವತಿಸುವ ದಿನಾಂಕ:15-09-2017
ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-09-2017
ಪರೀಕ್ಷೆ ನಡೆಯುವ ದಿನಾಂಕ: 17-12-2017 (ತಾತ್ಕಾಲಿಕ)

ಅರ್ಜಿ ಶುಲ್ಕ

  • ಸಾಮಾನ್ಯ ಅಭ್ಯರ್ಥಿಗಳಿಗೆ ರೂ.1000/-
  • ಒಬಿಸಿ ಅಭ್ಯರ್ಥಿಗಳಿಗೆ ರೂ.500/-
  • ಎಸ್.ಸಿ/ಎಸ್.ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ರೂ.250/-

ಪರೀಕ್ಷಾ ವಿಧಾನ

ಪರೀಕ್ಷೆಯು 200 ಅಂಕಗಳಿಗೆ ನಡೆಯಲಿದ್ದು, ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪ್ರತಿ ಪ್ರಶ್ನೆಗೆ ಉತ್ತರಿಸಲು ಮೂರು ಗಂಟೆಯ ಅವಧಿ ನೀಡಲಾಗಿರುತ್ತದೆ.

ಪರೀಕ್ಷಾ ವಿಷಯಗಳು

ಲೈಫ್ ಸೈನ್ಸ್, ಅರ್ಥ್ ಸೈನ್ಸ್, ಅಟ್ಮಾಸ್ಪೆರಿಕ್, ಓಷನ್, ಪ್ಲಾನೆಟರಿ, ಮ್ಯಾಥಮೆಟಿಕಲ್ ಸೈನ್ಸ್, ಕೆಮಿಕಲ್ ಸೈನ್ಸ್, ಫಿಸಿಕಲ್ ಸೈನ್ಸ್.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಸ್ಐಆರ್ ಯುಜಿಸಿ ಎನ್ಇಟಿ

ಸಿ‌ಎಸ್‌ಐ‌ಆರ್-ದಿ ಕೌನ್ಸಿಲ್ ಆಫ್ ಸೈನ್‌ಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರೀಸರ್ಚ್ ಹಾಗೂ ಯುಜಿಸಿ ಜಂಟಿಯಾಗಿ ಎನ್‌ಇಟಿ ಪರೀಕ್ಷೆಯನ್ನು ನಡೆಸುತ್ತದೆ. ಈ ಮೂಲಕ ಪ್ರಾಧ್ಯಪಕ ವೃತ್ತಿ ಸ್ವೀಕರಿಸುವವರಿಗೆ ಹಾಗೂ ಸಂಶೋಧನೆ ಮಾಡುವವರಿಗೆ ಅರ್ಹತಾ ಪತ್ರ ನೀಡಲಾಗುತ್ತದೆ.

English summary
The official notification for Joint CSIR UGC NET December 2017 has been released by The Council of Scientific And Industrial Research (CSIR), Human Resource Development Group. The registration procedure will begin from today.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia