ಸಿಎಸ್ಐಆರ್ ಎನ್ಇಟಿಯ ಜೂನ್ 2020ರ ಪರೀಕ್ಷೆಯ ಅಧಿಸೂಚನೆ ಪ್ರಕಟಗೊಂಡಿದ್ದು, ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಪರೀಕ್ಷೆಯ ಬಗೆಗಿನ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಭೌತಶಾಸ್ತ್ರ, ಜೀವಶಾಸ್ತ್ರ, ಮ್ಯಾಥಮೆಟಿಕಲ್ ಸೈನ್ಸ್ ವಿಷಯ ಸೇರಿದಂತೆ ವಿವಿಧ ವಿಷಯಗಳಿಗೆ ಸಿಎಸ್ಐಆರ್-ದಿ ಕೌನ್ಸಿಲ್ ಆಫ್ ಸೈನ್ಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರೀಸರ್ಚ್ ಹಾಗೂ ಯುಜಿಸಿ ಜಂಟಿಯಾಗಿ ಎನ್ಇಟಿ ಪರೀಕ್ಷೆಯನ್ನು ನಡೆಸುತ್ತದೆ.
ವಿದ್ಯಾರ್ಹತೆ:
ಸಿಎಸ್ಐಆರ್ ಎನ್ಇಟಿ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳು ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರಬೇಕು ಅಥವಾ ಬಿಇ/ಬಿ.ಟೆಕ್/ಬಿ.ಫಾರ್ಮ/ಎಂಬಿಬಿಎಸ್/ಇಂಟೆಗ್ರೇಟೆಡ್ ಬಿಎಸ್-ಎಂಎಸ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಜೂನಿಯರ್ ರಿಸರ್ಚ್ ಫೆಲೋಶಿಪ್ ಬಯಸುವವರಿಗೆ ಗರಿಷ್ಠ ವಯೋಮಿತಿ 28 ವರ್ಷ. ಸಹಾಯಕ ಪ್ರಾಧ್ಯಾಪಕ ಬಯಸುವವರಿಗೆ ವಯೋಮಿತಿ ಇಲ್ಲ.
ಅರ್ಜಿ ಶುಲ್ಕ:
ಸಾಮಾನ್ಯ /ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 1000/-ರೂ
ಓಬಿಸಿ ಅಭ್ಯರ್ಥಿಗಳಿಗೆ ರೂ.500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ ರೂ.250/-ರೂ ಇರುತ್ತದೆ.
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಏಪ್ರಿಲ್ 16,2020ರೊಳಗೆ ಪಾವತಿಸಬಹುದಾಗಿರುತ್ತುದೆ.
ಪರೀಕ್ಷೆಯ ವಿವರ:
ಪರೀಕ್ಷಾ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ
ಪರೀಕ್ಷೆಯ ಅಂಕಗಳು: ಒಟ್ಟು 200
ಪತ್ರಿಕೆ: 2 ಪ್ರಶ್ನೆ ಪತ್ರಿಕೆಗಳು
ಸಮಯ: ಒಟ್ಟು 3 ಗಂಟೆಗಳ ಅವಧಿ
ಸಿಎಸ್ಐಆರ್ ಎನ್ಇಟಿ (ನೆಟ್) 2020 ಪರೀಕ್ಷೆಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಮಾರ್ಚ್ 16,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 15,2020
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಏಪ್ರಿಲ್ 16,2020 (ರಾತ್ರಿ 11:50ರೊಳಗೆ)
ಪ್ರವೇಶ ಪತ್ರ ಡೌನ್ಲೋಡ್ ದಿನಾಂಕ : ಮೇ 15,2020
ಪರೀಕ್ಷೆ ದಿನಾಂಕ : ಜೂನ್ 21,2020
ಫಲಿತಾಂಶ ದಿನಾಂಕ : ಜುಲೈ,2020
ಎನ್ಇಟಿ (ನೆಟ್) 2020 : ಅರ್ಜಿ ಸಲ್ಲಿಸುವುದು ಹೇಗೆ?
ಈ ಕೆಳಗಿನ ಸ್ಟೆಪ್ಸ್ ಮೂಲಕ ಎನ್ಇಟಿ 2020 ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.
ಸ್ಟೆಪ್ 1: ಯುಜಿಸಿ ಎನ್ಟಿಎ ಅಧಿಕೃತ ವೆಬ್ಸೈಟ್ https://csirnet.nta.nic.in/webinfo/public/home.aspx ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ನಲ್ಲಿ ಆನ್ಲೈನ್ ಅರ್ಜಿ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ
ಸ್ಟೆಪ್ 4: ನಂತರ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 5: ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











