CSIR UGC NET June 2021 : ಜೂನ್ ಪರೀಕ್ಷೆಗೆ ಅರ್ಜಿ ಆಹ್ವಾನ..ಅರ್ಜಿ ಸಲ್ಲಿಸಲು ಜ.2 ಕೊನೆಯ ದಿನ

ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ (CSIR) ಎನ್ಇಟಿ ಜೂನ್ 202೧ರ ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟ ಮಾಡಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಡಿಸೆಂಬರ್ 3,2021 ರಿಂದ ಜನವರಿ 2,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಪರೀಕ್ಷೆಯ ಬಗೆಗಿನ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಭೌತಶಾಸ್ತ್ರ, ಜೀವಶಾಸ್ತ್ರ, ಮ್ಯಾಥಮೆಟಿಕಲ್ ಸೈನ್ಸ್ ವಿಷಯ ಸೇರಿದಂತೆ ವಿವಿಧ ವಿಷಯಗಳಿಗೆ ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ಹಾಗೂ ಯುಜಿಸಿ ಜಂಟಿಯಾಗಿ ಎನ್ಇಟಿ ಪರೀಕ್ಷೆಯನ್ನು ನಡೆಸುತ್ತದೆ.

ಸಿಎಸ್ಐಆರ್ ಯುಜಿಸಿ ಎನ್ಇಟಿ ಪರೀಕ್ಷೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ಯುಜಿಸಿ ಎನ್ಇಟಿ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳು ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರಬೇಕು ಅಥವಾ ಬಿಇ/ಬಿ.ಟೆಕ್/ಬಿ.ಫಾರ್ಮ/ಎಂಬಿಬಿಎಸ್/ಇಂಟೆಗ್ರೇಟೆಡ್ ಬಿಎಸ್-ಎಂಎಸ್ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಜೂನಿಯರ್ ರಿಸರ್ಚ್ ಫೆಲೋಶಿಪ್ ಬಯಸುವವರಿಗೆ ಗರಿಷ್ಠ ವಯೋಮಿತಿ 28 ವರ್ಷ. ಸಹಾಯಕ ಪ್ರಾಧ್ಯಾಪಕ ಬಯಸುವವರಿಗೆ ಗರಿಷ್ಟ ವಯೋಮಿತಿ ಇರುವುದಿಲ್ಲ.

ಪರೀಕ್ಷೆಯ ವಿವರ:

ಪರೀಕ್ಷಾ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಪರೀಕ್ಷೆಯ
ಅಂಕಗಳು: ಒಟ್ಟು 200
ಪತ್ರಿಕೆ: 2 ಪ್ರಶ್ನೆ ಪತ್ರಿಕೆಗಳು
ಸಮಯ: ಒಟ್ಟು 3 ಗಂಟೆಗಳ ಅವಧಿ

ಸಿಎಸ್ಐಆರ್ ಎನ್ಇಟಿ (ನೆಟ್) 2021 ಪರೀಕ್ಷೆಯ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಡಿಸೆಂಬರ್ 3,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 2,2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಜನವರಿ 3,2022 (ರಾತ್ರಿ 11:50ರೊಳಗೆ)

ಪ್ರವೇಶ ಪತ್ರ ಡೌನ್ಲೋಡ್ ದಿನಾಂಕ : ಅತೀ ಶೀಘ್ರದಲ್ಲಿ ತಿಳಿಸಲಾಗುವುದು
ಪರೀಕ್ಷೆ ದಿನಾಂಕ : ಜನವರಿ 29 ಮತ್ತು ಫೆಬ್ರವರಿ 5 ಮತ್ತು 6,2022

ಫಲಿತಾಂಶ ದಿನಾಂಕ : ಶೀಘ್ರದಲ್ಲಿ ತಿಳಿಸಲಾಗುವುದು

ಅರ್ಜಿ ಶುಲ್ಕ:

ಸಾಮಾನ್ಯ /ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 1000/-ರೂ
ಓಬಿಸಿ ಅಭ್ಯರ್ಥಿಗಳಿಗೆ ರೂ.500/-ರೂ ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ/ಟ್ರಾನ್ಸ್‌ಜೆಂಡರ್ ಅಭ್ಯರ್ಥಿಗಳು 250/-ರೂ ಅನ್ನು
ಆನ್‌ಲೈನ್ ಮೂಲಕ ಜನವರಿ 3,2022ರೊಳಗೆ ಪಾವತಿಸಬೇಕಿರುತ್ತದೆ. ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಿಎಸ್‌ಐಆರ್ ಯುಜಿಸಿ ಎನ್‌ಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://csirnet.nta.nic.in/webinfo/public/home.aspx ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ ನಲ್ಲಿ ಆನ್ಲೈನ್ ಅರ್ಜಿ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ

ಸ್ಟೆಪ್ 4: ನಂತರ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 5: ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
CSIR UGC NET june 2021 exam notification has been released, Candidates can apply through online before january 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X