CUET 2022 Registration : ಪರೀಕ್ಷೆಗೆ ನೊಂದಾಯಿಸಿಕೊಳ್ಳಲು ಇಂದು ಕೊನೆಯ ದಿನ

ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (NTA) ಸಾಮಾನ್ಯ ವಿಶ್ವವಿದ್ಯಾನಿಲಯದ ಪ್ರವೇಶ ಪರೀಕ್ಷೆ ಅಥವಾ CUET 2022 ರ ನೋಂದಣಿ ಪ್ರಕ್ರಿಯೆಯನ್ನು ಇಂದು ಮುಕ್ತಾಯಗೊಳಿಸುತ್ತಿದೆ. CUET 2022 ಕ್ಕೆ ಹಾಜರಾಗಲು ಸಿದ್ಧರಿರುವ ಅಭ್ಯರ್ಥಿಗಳು ಈ ಕೂಡಲೇ ಪರೀಕ್ಷೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಸಿಯುಇಟಿ 2022 ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಇಂದು ಕೊನೆಯ ದಿನ

ಆಸಕ್ತರು ಅಧಿಕೃತ ವೆಬ್‌ಸೈಟ್‌- cuet.samarth.ac.in. ಗೆ ಭೇಟಿ ನೀಡುವ ಮೂಲಕ ಸಂಜೆ 5:00 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು ಮತ್ತು ಶುಲ್ಕವನ್ನು ಇಂದು ರಾತ್ರಿ 11:50 ರೊಳಗೆ ಪಾವತಿಸಲು ಅವಕಾಶವಿರುತ್ತದೆ.

CUET 2022 ಅರ್ಜಿ ತಿದ್ದುಪಡಿ ಪ್ರಕ್ರಿಯೆಯು ಮೇ 25, 2022 ರಂದು ಪ್ರಾರಂಭವಾಗುತ್ತದೆ ಮತ್ತು ಮೇ 31, 2022 ರಂದು ಕೊನೆಗೊಳ್ಳಲಿದೆ. ಈ ಹಿಂದೆ CUET 2022 ನೋಂದಣಿಯನ್ನು ಮೇ 6, 2022 ರಂದು ಮುಕ್ತಾಯಗೊಳಿಸಲು ನಿರ್ಧರಿಸಲಾಗಿತ್ತು, ಆದಾಗ್ಯೂ CUET 2022 ಅರ್ಜಿಯ ಗಡುವನ್ನು ಪ್ರಾಧಿಕಾರವು ಮೇ 22, 2022 ರವರೆಗೆ ಮುಂದೂಡಿದೆ.

ಸಿಯುಇಟಿ 2022 ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಇಂದು ಕೊನೆಯ ದಿನ

CUET 2022 ಅರ್ಜಿ ಸಲ್ಲಿಸುವುದು ಹೇಗೆ ?:

ಸ್ಟೆಪ್ 1: ಅಧಿಕೃತ ವೆಬ್‌ಸೈಟ್‌ cuet.samarth.ac.in ಗೆ ಭೇಟಿ ನೀಡಿ
ಸ್ಟೆಪ್ 2: ಮುಖಪುಟದಲ್ಲಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡುವ ಮೂಲಕ ನೋಂದಾಯಿಸಿ
ಸ್ಟೆಪ್ 3:ಅಲ್ಲಿ ಕೇಳಲಾಗಿರುವ ಪ್ರತಿಯೊಂದು ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಿ
ಸ್ಟೆಪ್ 5: ಅಭ್ಯರ್ಥಿಗಳು ಸಂಪೂರ್ಣವಾಗಿ ಅರ್ಜಿಯನ್ನು ಸಬ್‌ಮಿಟ್ ಮಾಡಿ

ಭವಿಷ್ಯದ ಉಲ್ಲೇಖಕ್ಕಾಗಿ ದೃಢೀಕರಣ ಪುಟವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ.

CUET 2022ಗೆ ಮೇ 11 ರವರೆಗೆ 9,81,406 ನೋಂದಣಿಗಳು ಮತ್ತು 7,39,027 ಅರ್ಜಿ ಸಲ್ಲಿಕೆಗಳನ್ನು ಮಾಡಲಾಗಿದೆ. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ (UGC) ಅಧ್ಯಕ್ಷರಾದ ಮಮಿದಾಳ ಜಗದೇಶ್ ಕುಮಾರ್ ಅವರು ಈ ಹಿಂದೆ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ "ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ (CUET) ಪದವಿಪೂರ್ವ ಪ್ರವೇಶಕ್ಕಾಗಿ, ಒಟ್ಟು ನೋಂದಣಿಗಳು 9,81,406 ಮತ್ತು 7,39,027 ಸಲ್ಲಿಸಿದ ಅರ್ಜಿಗಳು" ಎಂದು ಟ್ವೀಟ್ ಮಾಡಿದ್ದರು.

CUET ಯುಜಿ ಪರೀಕ್ಷೆಯನ್ನು ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಸೇರಿದಂತೆ 13 ಭಾಷೆಗಳಲ್ಲಿ ನಡೆಸಲಾಗುತ್ತದೆ. ಸಾಮಾನ್ಯ ಪ್ರವೇಶ ಪರೀಕ್ಷೆಯು ಭಾರತದ 547 ನಗರಗಳಲ್ಲಿ ಮತ್ತು ಭಾರತದ ಹೊರಗಿನ 13 ನಗರಗಳಲ್ಲಿ ನಡೆಯಲಿದೆ.

ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
CUET 2022 registration process ends today, Here is the details how to apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X