ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ: ಲಿಖಿತ ಪರೀಕ್ಷೆ ದಿನಾಂಕ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯ ರಾಜ್ಯ ಗುಪ್ತ ವಾರ್ತೆ ವಿಭಾಗದಲ್ಲಿ ಖಾಲಿ ಇರುವ 41 ಸಬ್ ಇನ್ಸ್ಪೆಕ್ಟರ್ ಹಾಗೂ ಡಿಟೆಕ್ಟಿವ್ ವಿಭಾಗದಲ್ಲಿನ 12 ಸಬ್ಇನ್ಸ್ಪೆಕ್ಟರ್ ನೇಮಕಕ್ಕೆ ಸಂಬಂಧಿಸಿದಂತೆ ನಡೆಸಲಾಗುವ ಲಿಖಿತ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ.

ರಾಜ್ಯ ಪೊಲೀಸ್ ಇಲಾಖೆಯ ರಾಜ್ಯ ಗುಪ್ತ ವಾರ್ತೆ ವಿಭಾಗದಲ್ಲಿ ಖಾಲಿ ಇರುವ 41 ಸಬ್ ಇನ್ಸ್ಪೆಕ್ಟರ್ ಹಾಗೂ ಡಿಟೆಕ್ಟಿವ್ ವಿಭಾಗದಲ್ಲಿನ 12 ಸಬ್ಇನ್ಸ್ಪೆಕ್ಟರ್ ನೇಮಕಕ್ಕೆ ಸಂಬಂಧಿಸಿದಂತೆ ನಡೆಸಲಾಗುವ ಲಿಖಿತ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ.
ಗುಪ್ತ ವಾರ್ತೆ ವಿಭಾಗದಲ್ಲಿನ ಹುದ್ದೆಗಳಿಗೆ ಮಾರ್ಚ್ 19, 2017 ಮತ್ತು ಡಿಡೆಕ್ಟಿವ್ ವಿಭಾಗದಲ್ಲಿನ ಹುದ್ದೆಗಳಿಗೆ ಮಾರ್ಚ್ 26, 2017ರಂದು ಲಿಖಿತ ಪರೀಕ್ಷೆ ನಡೆಯಲಿವೆ.

ತರಬೇತಿ, ಖಾಯಂಪೂರ್ವ ಅವಧಿ ಮತ್ತು ವೇತನ ಶ್ರೇಣಿ

ತರಬೇತಿ

  • ಆಯ್ಕೆಯಾದ ಅಭ್ಯರ್ಥಿಗಳು ಡಿಜಿ ಮತ್ತು ಐಜಿಪಿಯವರು ಕಾಲಕಾಲಕ್ಕೆ ನಿಗದಿಪಡಿಸುವ ತರಬೇತಿಗೆ ಒಳಪಡತಕ್ಕದ್ದು ಮತ್ತು ನಿರ್ದಿಷ್ಟಪಡಿಸಿದ ಪರೀಕ್ಷೆಗಳಲ್ಲಿ ಉತ್ತೀರ್ಣವಾಗತಕ್ಕದ್ದು.
  • ನಿರ್ದಿಷ್ಟ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದೆ ಇರುವ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರದ ಮೂಲಕ ಸೇವೆಯಿಂದ ಬಿಡುಗಡೆಯಾಗಲು ಹೊಣೆಗಾರರಾಗಿರತಕ್ಕದ್ದು.
  • ಅಭ್ಯರ್ಥಿಗಳು ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷಕರು ನಿರ್ದಿಷ್ಟಪಡಿಸಿದಂತೆ ಯಾವುದೇ ಜಿಲ್ಲೆ/ಆಯುಕ್ತ ಕಾರ್ಯಲಯದಲ್ಲಿ ಆರು ತಿಂಗಳ ಮತ್ತೊಂದು ಅವಧಿಗೆ ಸೈಬರ್ ಅಪರಾಧಗಳ ಸಂಬಂಧ ವಿಶೇಷ ಮಹತ್ವದೊಂದಿಗೆ ಪ್ರಾಯೋಗಿಕ ತರಬೇತಿಗೆ ಸಹ ಒಳಗಾಗತಕ್ಕದ್ದು. ಮುಂದಿನ ಆರು ತಿಂಗಳು ಎಂದರೆ, ಕೇಂದ್ರ ಪತ್ತೇದಾರಿ ತರಬೇತಿ ಎಂದರೆ, ಕೇಂದ್ರ ಪತ್ತೇದಾರಿ ತರಬೇತಿ ಸಂಸ್ಥೆ, ಕೇಂದ್ರ ತನಿಖಾ ಬ್ಯೂರೋ ಮತ್ತು ರಾಷ್ಟ್ರೀಯ ತನಿಖಾ ಏಜೆನ್ಸಿಯಲ್ಲಿ ತಲಾ ಎರಡು ತಿಂಗಳ ತರಬೇತಿ.

ಖಾಯಂಪೂರ್ವ ಅವಧಿ

ಕರ್ನಾಟಕ ಸಿವಿಲ್ ಸೇವಾ (ಪ್ರೋಬೇಷನ್) ನಿಯಮಗಳು 1977 ರಲ್ಲಿ ಎನೇ ಒಳಗೊಂಡಿದ್ದಾಗ್ಯೂ ನೇಮಕಗೊಂಡ ಅಭ್ಯರ್ಥಿಗಳ ಪ್ರೊಬೇಷನ್ ಅವಧಿ, ತರಬೇತಿಯ ಅವಧಿಯು ಒಳಗೊಂಡಂತೆ ಎರಡು ವರ್ಷ ಆರು ತಿಂಗಳಾಗಿರುತ್ತದೆ.

ವೇತನ ಶ್ರೇಣಿ

21600-600-24600-700-28800-800-33600-900-39000-1050-40050

ಪಿಂಚಣೆ ಸೌಲಭ್ಯ

ಸರ್ಕಾರದ ಆದೇಶ ಸಂಖ್ಯೆ: ಎಫ್‍ಡಿ(ಎಸ್‍ಪಿಎಲ್) 04 ಪಿಇಟಿ 2005, ದಿನಾಂಕ:31.03.2006 ರಂತೆ ನೂತನ ಅಂಶದಾಯಿ ಪಿಂಚಣಿ ಸೌಲಭ್ಯ ಅನ್ವಯವಾಗುವುದು.

ಲಿಖಿತ ಪರೀಕ್ಷೆ ದಿನಾಂಕ ಪ್ರಕಟ

ಲಿಖಿತ ಪರೀಕ್ಷೆ

  • ಅಭ್ಯರ್ಥಿಯು ಸಹಿಷ್ಣುತೆ ಹಾಗೂ ದೈಹಿಕ ಸಾಮಥ್ರ್ಯ ಪರೀಕ್ಷೆಗಳಲ್ಲಿ ಉತ್ತೀರ್ಣರಾದರೆ ಮಾತ್ರ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ಆಯ್ಕೆ ಸಮಿತಿಯು ನಿಗದಿಪಡಿಸುವ ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು. ಆಯ್ಕೆ ಸಮಿತಿಯು ಯಾವುದೇ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸುವ ಅಥವಾ ಹೊಸದಾಗಿ ಸೇರಿಸುವ ಹಕ್ಕನ್ನು ಕಾಯ್ದಿರಿಸಿಕೊಂಡಿರುತ್ತದೆ.
  • ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ದಿನಾಂಕ, ಸಮಯ ಮತ್ತು ಸ್ಥಳದ ಮಾಹಿತಿಯನ್ನು ಹೊಂದಿರುವ ಕರೆಪತ್ರವನ್ನು ಈ ಕಛೇರಿಯ ಅಧಿಕೃತ ವೆಬ್‍ಸೈಟ್ http://www.ksp.gov.in/index.aspx ನಿಂದ ಕಡ್ಡಾಯವಾಗಿ ಪಡೆದುಕೊಳ್ಳತಕ್ಕದ್ದು. ಖುದ್ದಾಗಿ ಯಾವುದೇ ಅಭ್ಯರ್ಥಿಗಳಿಗೆ ಕರೆ ಪತ್ರಗಳನ್ನು ಕಳುಹಿಸಲಾಗುವುದಿಲ್ಲ. ಈ ಸಂಬಂಧ ಅಭ್ಯರ್ಥಿಗಳು ಮುಖ್ಯವಾಗಿ ಈ ಕಛೇರಿಯ ಅಧಿಕೃತ ವೆಬ್‍ಸೈಟ್ http://www.ksp.gov.in/index.aspx ನ್ನು ಮೇಲಿಂದ ಮೇಲೆ ಗಮನಿಸುತ್ತಿರುವುದು ಸೂಕ್ತ. ಲಿಖಿತ ಪರೀಕ್ಷೆಯು ನಡೆಯುವ ವೇಳೆ ಮತ್ತು ಸ್ಥಳವನ್ನು ಸಂಬಂಧಪಟ್ಟ ಲಿಖಿತ ಪರೀಕ್ಷೆಯ ಕೇಂದ್ರದ ಸೂಚನಾ ಫಲಕದಲ್ಲಿಯೂ ಸಹ ಪ್ರಕಟಿಸಲಾಗುವುದು. ಕರೆಪತ್ರವನ್ನು ಪಡೆಯದೆ ಪರೀಕ್ಷೆಗೆ ಹಾಜರಾದಲ್ಲಿ ಅಂತಹವರಿಗೆ ಲಿಖಿತ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ.

ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಹಾಜರಾಗುವಾಗ ಕರೆಪತ್ರದ ಜೊತೆಗೆ ಈ ಕೆಳಕಂಡ ಯಾವುದಾದರೊಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು.

i) ಪಾಸ್‍ಪೋರ್ಟ್
ii) ಚಾಲನಾ ಪರವಾನಗಿ ಪತ್ರ
iii) ಪ್ಯಾನ್ ಕಾರ್ಡ್
iv) ರಾಜ್ಯ ಸರ್ಕಾರ/ ಕೇಂದ್ರ ಸರ್ಕಾರ / ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗೀ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ
v) ಸಾರ್ವಜನಿಕ ಬ್ಯಾಂಕುಗಳು / ಅಂಚೆ ಕಛೇರಿಗಳು ವಿತರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕ
vi) ಭಾವಚಿತ್ರ ಸಮೇತ ನೋಂದಣಿಯಾಗಿರುವ ಸ್ವತ್ತಿನ ದಾಖಲೆಪತ್ರ ಅಥವಾ ಪಟ್ಟಾ ಪುಸ್ತಕ
vii) ಭಾವಚಿತ್ರ ಸಮೇತ ಸಂಬಂಧಪಟ್ಟ ಪ್ರಾಧಿಕಾರಿಯವರು ವಿತರಿಸಿರುವ ಜಾತಿ ಪ್ರಮಾಣ ಪತ್ರ
viii) ಎನ್.ಆರ್.ಇ.ಜಿ.ಎಸ್.ಯಿಂದ ನೀಡಿದ ಭಾವಚಿತ್ರವಿರುವ ಉದ್ಯೋಗ ಚೀಟಿ.
ix) ಎಲೆಕ್ಟೋರಲ್ ಪೋಟೋ ಗುರುತಿನ ಚೀಟಿ
x) ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್.

ಲಿಖಿತ ಪರೀಕ್ಷೆಗೆ ತರಬೇಕಾದ ದಾಖಲಾತಿಗಳು

i) ಲಿಖಿತ ಪರೀಕ್ಷೆಯ ಕರೆಪತ್ರ,
ii) ಸಹಿಷ್ಣುತೆ ಮತ್ತು ದೈಹಿಕ ಸಾಮಥ್ರ್ಯ ಪರೀಕ್ಷೆಯ ಫಲಿತಾಂಶ ಹಾಳೆ,
iii) ಗುರುತಿನ ಚೀಟಿ,
iv) ಆನ್ಲೈನ್ ಅರ್ಜಿಯ ಜೆರಾಕ್ಸ್ ಪ್ರತಿ ತರತಕ್ಕದ್ದು.ತಪ್ಪಿದ್ದಲ್ಲಿ ಲಿಖಿತ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ.

ಲಿಖಿತ ಪರೀಕ್ಷೆ ಪ್ರಶ್ನೆ ಪತ್ರಿಕೆ

ಪತ್ರಿಕೆ-1 : ಈ ಪ್ರಶ್ನೆಪತ್ರಿಕೆಯಲ್ಲಿ ಪ್ರಬಂಧ ಬರಹ, ಸಾರಾಂಶ ಬರಹ, ಭಾಷಾಂತರ ಪ್ರಶ್ನೆಗಳು ಇರುತ್ತವೆ. ಪ್ರಬಂಧ ಬರಹದಲ್ಲಿ 600 ಶಬ್ದಗಳ ಮಿತಿಯನ್ನು ಮೀರಬಾರದು. ಈ ಪರೀಕ್ಷೆಯ ಅವಧಿ ಒಂದು ಗಂಟೆ ಮೂವತ್ತು ನಿಮಿಷಗಳಾಗಿದ್ದು, 50 ಅಂಕಗಳನ್ನು ಹೊಂದಿರುತ್ತದೆ. ಇದರಲ್ಲಿ ಕನಿಷ್ಟ ಅಂಕಗಳು ಇರುವುದಿಲ್ಲ.
ಪತ್ರಿಕೆ-2 : ಈ ಪ್ರಶ್ನೆಪತ್ರಿಕೆಯು ಕನ್ನಡ ಮತ್ತು ಇಂಗ್ಲೀಷ್ ಮಾಧ್ಯದಲ್ಲಿದ್ದು, 150 ಅಂಕಗಳಿಗೆ ವಸ್ತುನಿಷ್ಟ (ಆಬ್ಜೆಕ್ಟೀವ್) ಮಾದರಿಯದಾಗಿದ್ದು, ಬಹುವಿಧ ಆಯ್ಕೆ ಉತ್ತರಗಳ ಲಿಖಿತ ಪರೀಕ್ಷೆ ಇರುತ್ತದೆ. ಇವುಗಳನ್ನು ಉತ್ತರಿಸಲು ಒಂದು ಗಂಟೆ ಮೂವತ್ತು ನಿಮಿಷ ಸಮಯ ನೀಡಲಾಗುತ್ತದೆ. ಈ ಪ್ರಶ್ನೆ ಪತ್ರಿಕೆಯು ಸಾಮಾನ್ಯ ಜ್ಞಾನ, ಪ್ರಚಲಿತ ವಿದ್ಯಮಾನಗಳು, ವಿಜ್ಞಾನ, ಭೂಗೋಳ ಶಾಸ್ತ್ರ, ಇತಿಹಾಸ, ಭಾರತೀಯ ಸಂವಿಧಾನ, ರಾಷ್ಟ್ರೀಯ ಸ್ವಾತಂತ್ರ್ಯಚಳುವಳಿ, ಸಾಮಾನ್ಯ ಮಾನಸಿಕ ಸಾಮಥ್ರ್ಯ, ಆಧುನಿಕ ಕಂಪ್ಯೂಟರ್ ಜ್ಞಾನ ಮತ್ತು ನೈತಿಕ ಶಿಕ್ಷಣವು ಒಳಗೊಂಡ ಸಾಮಾನ್ಯ ಅಧ್ಯಯನಗಳ ಮೇಲಿನ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ಋಣಾತ್ಮಕ ಅಂಕಗಳಿರುವವು. ಅಭ್ಯರ್ಥಿಗಳು ಎರಡು ಪತ್ರಿಕೆಗಳಿಗೂ ಹಾಜರಾಗುವುದು ಕಡ್ಡಾಯವಾಗಿರುತ್ತದೆ.

For Quick Alerts
ALLOW NOTIFICATIONS  
For Daily Alerts

English summary
detective sub-inspector written examination dates announced
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X