ಐಬಿಪಿಎಸ್: ಆಗಸ್ಟ್ 16 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭ

ಸುಮಾರು ಮೂರುವರೆ ಸಾವಿರ ಹುದ್ದೆಗೆಳ ನೇಮಕಾತಿ ನಡೆಯುತ್ತಿದ್ದು, ಐಬಿಪಿಎಸ್ ತನ್ನ ವೆಬ್ಸೈಟ್ ನಲ್ಲಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 16 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ.

2017 ನೇ ಸಾಲಿನ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ಅಧಿಸೂಚನೆ ಹೊರಡಿಸಿದೆ.

ಸುಮಾರು ಮೂರುವರೆ ಸಾವಿರ ಹುದ್ದೆಗೆಳ ನೇಮಕಾತಿ ನಡೆಯುತ್ತಿದ್ದು, ಐಬಿಪಿಎಸ್ ತನ್ನ ವೆಬ್ಸೈಟ್ ನಲ್ಲಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 16 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 5 ರವರೆಗೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಕ್ಟೋಬರ್ ತಿಂಗಳಲ್ಲಿ ಪೂರ್ವಭಾವಿ ಪರೀಕ್ಷೆಗಳು ನಡೆಯಲಿದ್ದು, ಪ್ರವೇಶ ಪತ್ರಗಳನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಐಬಿಪಿಎಸ್ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಐಬಿಪಿಎಸ್ ಅರ್ಜಿ ಸಲ್ಲಿಕೆ

ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕುಗಳ ಪ್ರೊಬೆಷನರಿ ಆಫೀಸರ್ ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಎರಡು ಹಂತದ ಪರೀಕ್ಷೆ.

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಎರಡು ಹಂತದ ಪರೀಕ್ಷಾ ವಿಧಾನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುವುದು.

ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್ ಮಾಡಿ

ಪೂರ್ವಭಾವಿ ಪರೀಕ್ಷೆಯನ್ನು ಕೇವಲ ಅರ್ಹತಾ ಪರೀಕ್ಷೆಯಾಗಿ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಕೇವಲ ನೂರು ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪ್ರತಿ ಪ್ರಶ್ನೆಗೂ ಒಂದೊಂದು ಅಂಕ ನಿಗದಿಪಡಿಸಿದ್ದು, ಉತ್ತರಿಸಲು ಒಂದು ಗಂಟೆ ಕಾಲಾವಕಾಶ ನೀಡಲಾಗಿರುತ್ತದೆ. ಅಂದರೆ ನೂರು ಪ್ರಶ್ನೆಗಳಿಗೆ ಉತ್ತರಿಸಲು ಕೇವಲ 60 ನಿಮಿಷ ಸಿಗಲಿದೆ.

ಪೂರ್ವಭಾವಿ ಪರೀಕ್ಷೆಯಲ್ಲಿ ಮೂರು ವಿಭಾಗಗಳಿರಲಿವೆ. ಇಂಗ್ಲಿಷ್ ಭಾಷೆಗೆ ಸಂಬಂಧಿಸಿದ 30 ಪ್ರಶ್ನೆಗಳಿದ್ದರೆ, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್‌ನ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ. ಈ ಪರೀಕ್ಷೆಯಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅರ್ಹತೆ ಅಂಕ ಗಳಿಸಿದವರು ಮಾತ್ರ ಮುಖ್ಯ ಪರೀಕ್ಷೆ ಬರೆಯಲು ಅರ್ಹರಾಗುತ್ತಾರೆ.

ಐಬಿಪಿಎಸ್ ಅರ್ಜಿ ಸಲ್ಲಿಕೆ

ಮುಖ್ಯ ಪರೀಕ್ಷೆಯು ಒಟ್ಟು 200 ಅಂಕಗಳಿಗೆ ನಡೆಯಲಿದ್ದು, ಎರಡು ಗಂಟೆ ಕಾಲಾವಕಾಶ ನಿಡಲಾಗಿರುತ್ತದೆ. ಈ ಪರೀಕ್ಷೆಯಲ್ಲಿ ಒಟ್ಟು ಐದು ವಿಭಾಗಗಳಿರಲಿವೆ. ರೀಸನಿಂಗ್ ಪೇಪರ್‌ಗೆ -50, ಇಂಗ್ಲಿಷ್ ಭಾಷೆಗೆ- 40, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್‌ಗೆ-50, ಜನರಲ್ ಅವೇರ್‌ನೆಸ್‌ಗೆ-40 ಹಾಗೂ ಕಂಪ್ಯೂಟರ್ ನಾಲೆಡ್ಜ್‌ಗೆ-20 ಅಂಕ ನಿಗದಿಪಡಿಸಲಾಗಿರುತ್ತದೆ. ಜನರಲ್ ಅವೇರ್‌ನೆಸ್‌ನಲ್ಲಿ ಮುಖ್ಯವಾಗಿ ಬ್ಯಾಂಕ್ ಉದ್ಯಮ ಮತ್ತು ಆರ್ಥಿಕತೆಗೆ ಸಂಬಂಧಿಸಿದ ಪ್ರಶ್ನೆಗಳನ್ನೇ ಕೇಳಲಾಗುತ್ತದೆ. ಈ ಪರೀಕ್ಷೆಯಲ್ಲಿ 200 ಪ್ರಶ್ನೆಗಳಿಗೆ ಉತ್ತರಿಸಲು 120 ನಿಮಿಷ ಕಾಲಾವಕಾಶ ದೊರೆಯಲಿದೆ.

ಇಂಗ್ಲಿಷ್ ಭಾಷೆ ಒಂದನ್ನು ಹೊರತು ಪಡಿಸಿ ಮತ್ತೆಲ್ಲಾ ಪ್ರಶ್ನೆ ಪತ್ರಿಕೆಗಳನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಒದಗಿಸಲಾಗುತ್ತದೆ. ಸರಿಯುತ್ತರಕ್ಕೆ ಅಂಕ ನೀಡಿದಂತೆಯೇ ತಪ್ಪು ಉತ್ತರಕ್ಕೆ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. (ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕ ಕಡಿತ ಮಾಡಲಾಗುತ್ತದೆ). ಒಂದು ವೇಳೆ ಉತ್ತರ ಗೊತ್ತಿಲ್ಲದೆ, ಹಾಗೆಯೇ ಬಿಟ್ಟಿದ್ದಲ್ಲಿ, ಯಾವುದೇ ಅಂಕವನ್ನು ಕಳೆಯಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಕೈಪಿಡಿಯಲ್ಲಿ ಮಾಹಿತಿ ಪರೀಕ್ಷೆಯ ಬಗ್ಗೆ, ಸಿಲಬಸ್‌ನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಒಳಗೊಂಡ ಮಾರ್ಗದರ್ಶಿ ಕೈಪಿಡಿಯನ್ನು ಐಬಿಪಿಎಸ್ ವೆಬ್ಸೈಟ್ ನಲ್ಲಿ ಲಭ್ಯವಿದೆ. ಅಗತ್ಯವಿದ್ದವರು ಕೈಪಿಡಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಪರೀಕ್ಷಾ ಕೇಂದ್ರದಲ್ಲಿ ಪೂರ್ವಭಾವಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಸುಮಾರು 2 ಗಂಟೆ ಹಾಗೂ ಮುಖ್ಯ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಸುಮಾರು 3 ಗಂಟೆ ಇರಬೇಕಾಗುತ್ತದೆ. ಪರೀಕ್ಷಾ ಕೇಂದ್ರಕ್ಕೆ ಗುರುತು ಪತ್ರ ತಂದಿರಬೇಕು.

ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ಒಟ್ಟು 100 ಅಂಕ ನಿಗದಿಯಾಗಿದ್ದು, ಇದರಲ್ಲಿ ಶೇ.40ಕ್ಕಿಂತ (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ. 35) ಹೆಚ್ಚು ಅಂಕ ಪಡೆಯಬೇಕು.

ಹೆಚ್ಚಿನ ಮಾಹಿತಿಗಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
The online examination (Preliminary and Main) for the next Common Recruitment Process for selection of personnel for Probationary Officer/ Management Trainee posts in the Participating Organizations is tentatively scheduled in October / November 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X