ಇಂಡಿಯನ್ ಇನ್‌ಸ್ಟಿಟ್ಯೂಟ್ ಅಫ್ ಟೆಕ್ನಾಲಜಿ, ಐಐಟಿ ದೆಹಲಿಯು ಜೆಇಇ ಅಡ್ವಾನ್ಸ್ಡ್ 2020 ಪರೀಕ್ಷೆಯ ಅಧಿಸೂಚನೆ ಪ್ರಕಟ ಮಾಡಿದೆ. ಜೆಇಇ ಅಡ್ವಾನ್ಸ್ಡ್ ಪರೀಕ್ಷೆಗೆ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 11, 2020 ರಿಂದ ಸೆ.16ರೊಳಗೆ ಅರ್ಜಿ ಸಲ್ಲಿಸಬಹುದು.

ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-09-2020
ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 16-09-2020
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 17-09-2020
ಪ್ರವೇಶ ಪತ್ರ ಬಿಡುಗಡೆ ದಿನಾಂಕ: ಸೆ.21 ರಿಂದ ಸೆ.27,2020
ಪರೀಕ್ಷೆ ನಡೆಯುವ ದಿನಾಂಕ: 27-09-2020
ಪರೀಕ್ಷೆಯ ವಿವರ:
ಜೆಇಇ ಅಡ್ವಾನ್ಡ್ ಪರೀಕ್ಷೆಯು ಎರಡು ಪ್ರಶ್ನೆ ಪತ್ರಿಕೆಗಳನ್ನು ಹೊಂದಿದ್ದು, ಪೇಪರ್-1 ಬೆಳಿಗ್ಗೆ 9 ರಿಂದ 12 ರವರೆಗೆ ನಡೆಸಲಾಗುತ್ತದೆ. ಪೇಪರ್-2 ಪರೀಕ್ಷೆಯನ್ನು ಮಧ್ಯಾಹ್ನ 02-30 ರಿಂದ 05-30 ರವರಗೆ ನಡೆಸಲಾಗುತ್ತದೆ.
ಜೆಇಇ ಅಡ್ವಾನ್ಸ್ಡ್ ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://jeeadv.ac.in/ ಗೆ ಭೇಟಿ ನೀಡಿ.
ಸ್ಟೆಪ್ 2: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 3: ನಂತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ
ಸ್ಟೆಪ್ 4: ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 5: ಎಲ್ಲವೂ ಪೂರ್ಣಗೊಂಡ ಬಳಿಕ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ


Click it and Unblock the Notifications











