JEE Advanced 2021 : ಸೆ.11 ರಿಂದ ಅರ್ಜಿ ಸಲ್ಲಿಕೆ ಆರಂಭ

ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಶನ್ ಅಡ್ವಾನ್ಸ್ಡ್ (ಜೆಇಇ ಅಡ್ವಾನ್ಸ್ಡ್ 2021) 2021 ಪರೀಕ್ಷೆಗೆ ಸೆಪ್ಟೆಂಬರ್ 11 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳಲ್ಲಿ ಸಲ್ಲಿಸಬಹುದು.

ಜೆಇಇ  ಅಡ್ವಾನ್ಸ್ಡ್ ಪರೀಕ್ಷೆ 2021ಗೆ ಸೆ.11 ರಿಂದ ಅರ್ಜಿ ಸಲ್ಲಿಕೆ ಆರಂಭ

ಜೆಇಇ ಅಡ್ವಾನ್ಸ್ಡ್ 2021 ಪರೀಕ್ಷೆಯನ್ನು ಅಕ್ಟೋಬರ್ 3,2021ರಂದು ನಿಗದಿಪಡಿಸಲಾಗಿದೆ. ಈ ಭಾರಿ ಇಂಡಿಯನ್‌ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕಾರಗ್‌ಪುರ್ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯನ್ನು ಆಯೋಜಿಸುತ್ತಿದೆ. ಅರ್ಜಿ ಪ್ರಕ್ರಿಯೆ ಪ್ರಾರಂಭವಾದ ಬಳಿಕ ಪರೀಕ್ಷೆಗೆ ಅರ್ಜಿ ಸಲ್ಲಿಸುವವರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಹಾಕಬಹುದು.

ಜೆಇಇ ಅಡ್ವಾನ್ಸ್ಡ್ 2021 ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಸೆಪ್ಟೆಂಬರ್ 11,2021 ರಿಂದ ಸೆಪ್ಟೆಂಬರ್ 16,2021ರ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ಸೆಪ್ಟೆಂಬರ್ 17,2021 ಕೊನೆಯ ದಿನವಾಗಿರುತ್ತದೆ.

ಈ ಭಾರಿ ಜೆಇಇ ಅಡ್ವಾನ್ಸ್ಡ್ 2021 ಪರೀಕ್ಷೆಯು ಅಕ್ಟೋಬರ್ 3,2021ರಂದು ನಡೆಯಲಿದೆ. ಪರೀಕ್ಷೆಯು ಎರಡು ಶಿಫ್ಟ್ ಗಳಲ್ಲಿ ನಡೆಯಲಿದ್ದು, ಮೊದಲ ಪೇಪರ್ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆವರೆಗೆ ನಡೆಯಲಿದೆ ಮತ್ತು ಪೇಪರ್-II ಮಧ್ಯಾಹ್ನ 2:30 ರಿಂದ ಪ್ರಾರಂಭವಾಗಿ 5:30ರ ವರೆಗೆ ನಡೆಯಲಿದೆ.

ಜೆಇಇ ಅಡ್ವಾನ್ಸ್ಡ್ 2021 ಪರೀಕ್ಷೆಯ ಪ್ರವೇಶ ಪತ್ರವನ್ನು ಸೆಪ್ಟೆಂಬರ್ 25,2021ರಂದು ಬೆಳಿಗ್ಗೆ 10 ಘಂಟೆಗೆ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅಕ್ಟೋಬರ್ 3,2021ರ ವರೆಗೆ ಅವಕಾಶ ನೀಡಲಾಗಿರುತ್ತದೆ. ಅಭ್ಯರ್ಥಿಗಳು ವೆಬ್‌ಸೈಟ್ ಗೆ ಭೇಟಿ ನೀಡಿ ತಮ್ಮ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರದ ಜೊತೆಗೆ ಅಗತ್ಯ ದಾಖಲೆಗಳನ್ನು ಕಡ್ಡಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ಅಲ್ಲದೇ ಪ್ರವೇಶ ಪತ್ರದಲ್ಲಿ ಪ್ರಕಟಿಸಲಾಗಿರುವ ಕೋವಿಡ್ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಬೇಕಿರುತ್ತದೆ.

ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಕುರಿತು ಪ್ರಕಟಿಸಲಾದ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಪರೀಕ್ಷೆ ಮುಗಿದ ಬಳಿಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳು ಅಕ್ಟೋಬರ್ 5,2021ರಂದು ಜೆಇಇ ಅಡ್ವಾನ್ಸ್ಡ್ ವೆಬ್‌ಸೈಟ್‌ ನಲ್ಲಿ ಲಭ್ಯವಿರಲಿದೆ. ನಂತರ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಕೀ ಉತ್ತರಗಳನ್ನು ಅಕ್ಟೋಬರ್ 10,2021ರಂದು ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗುವುದಾಗಿ ತಿಳಿಸಲಾಗಿದೆ.

ದೇಶಾದ್ಯಂತ ಹಬ್ಬಿರುವ 23 ಐಐಟಿಗಳಲ್ಲಿ ಬ್ಯಾಚುಲರ್, ಇಂಟಿಗ್ರೇಟೆಡ್ ಸ್ನಾತಕೋತ್ತರ ಮತ್ತು ಡ್ಯುಯಲ್ ಡಿಗ್ರಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲು ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಅಭ್ಯರ್ಥಿಗಳು ಪರೀಕ್ಷೆಯ ಪ್ರಮುಖ ದಿನಾಂಕಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Registration for jee advanced 2021 will begin from september 11. Students can apply through online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X