JEE Advanced 2021 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿ ತಿಳಿಯಿರಿ

ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಶನ್ ಅಡ್ವಾನ್ಸ್ಡ್ (ಜೆಇಇ ಅಡ್ವಾನ್ಸ್ಡ್ 2021) 2021 ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಯಿರಿ.

ಜೆಇಇ  ಅಡ್ವಾನ್ಸ್ಡ್ ಪರೀಕ್ಷೆ 2021ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಾರಂಭ

ಭಾರತೀಯ ತಂತ್ರಜ್ಞಾನ ಸಂಸ್ಥೆಗಳಲ್ಲಿ (ಐಐಟಿ) ವಿವಿಧ ಎಂಜಿನಿಯರಿಂಗ್, ವಿಜ್ಞಾನ ಮತ್ತು ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಜೆಇಇ ಅಡ್ವಾನ್ಸ್ಡ್ 2020ಗೆ ಅರ್ಹತೆ ಪಡೆದಿದ್ದರೂ ಕೋವಿಡ್ ಅಥವಾ ಅದಕ್ಕೆ ಸಂಬಂಧಿತ ಕಾರಣಗಳಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಜೆಇಇ ಮುಖ್ಯ 2021 ಪರೀಕ್ಷೆಯನ್ನು ತೆಗೆದುಕೊಳ್ಳದೆ ಇದ್ದರೂ ನೇರವಾಗಿ ಜೆಇಇ ಅಡ್ವಾನ್ಸ್ಡ್ 2021 ಗೆ ಹಾಜರಾಗಲು ಅವಕಾಶ ನೀಡಲಾಗಿರುತ್ತದೆ.

ಜೆಇಇ ಅಡ್ವಾನ್ಸ್ಡ್ 2021 ಪರೀಕ್ಷೆಯನ್ನು ಅಕ್ಟೋಬರ್ 3,2021ರಂದು ನಿಗದಿಪಡಿಸಲಾಗಿದೆ. ಈ ಭಾರಿ ಇಂಡಿಯನ್‌ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಖರಗ್‌ಪುರ್ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯನ್ನು ಆಯೋಜಿಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಹಾಕಬಹುದು.

ಜೆಇಇ ಅಡ್ವಾನ್ಸ್ಡ್ 2021 ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಸೆಪ್ಟೆಂಬರ್ 13,2021 ರಿಂದ ಸೆಪ್ಟೆಂಬರ್ 19,2021ರ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ಸೆಪ್ಟೆಂಬರ್ ೨೦,2021 ಕೊನೆಯ ದಿನವಾಗಿರುತ್ತದೆ.

ಈ ಭಾರಿ ಜೆಇಇ ಅಡ್ವಾನ್ಸ್ಡ್ 2021 ಪರೀಕ್ಷೆಯು ಅಕ್ಟೋಬರ್ 3,2021ರಂದು ನಡೆಯಲಿದೆ. ಪರೀಕ್ಷೆಯು ಎರಡು ಶಿಫ್ಟ್ ಗಳಲ್ಲಿ ನಡೆಯಲಿದ್ದು, ಮೊದಲ ಪೇಪರ್ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆವರೆಗೆ ನಡೆಯಲಿದೆ ಮತ್ತು ಪೇಪರ್-II ಮಧ್ಯಾಹ್ನ 2:30 ರಿಂದ ಪ್ರಾರಂಭವಾಗಿ 5:30ರ ವರೆಗೆ ನಡೆಯಲಿದೆ.

ಜೆಇಇ ಅಡ್ವಾನ್ಸ್ಡ್ 2021 ಪರೀಕ್ಷೆಯ ಪ್ರವೇಶ ಪತ್ರವನ್ನು ಸೆಪ್ಟೆಂಬರ್ 25,2021ರಂದು ಬೆಳಿಗ್ಗೆ 10 ಘಂಟೆಗೆ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅಕ್ಟೋಬರ್ 3,2021ರ ವರೆಗೆ ಅವಕಾಶ ನೀಡಲಾಗಿರುತ್ತದೆ. ಅಭ್ಯರ್ಥಿಗಳು ವೆಬ್‌ಸೈಟ್ ಗೆ ಭೇಟಿ ನೀಡಿ ತಮ್ಮ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರದ ಜೊತೆಗೆ ಅಗತ್ಯ ದಾಖಲೆಗಳನ್ನು ಕಡ್ಡಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ಅಲ್ಲದೇ ಪ್ರವೇಶ ಪತ್ರದಲ್ಲಿ ಪ್ರಕಟಿಸಲಾಗಿರುವ ಕೋವಿಡ್ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಬೇಕಿರುತ್ತದೆ.

ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಕುರಿತು ಪ್ರಕಟಿಸಲಾದ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಪರೀಕ್ಷೆ ಮುಗಿದ ಬಳಿಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳು ಅಕ್ಟೋಬರ್ 5,2021ರಂದು ಜೆಇಇ ಅಡ್ವಾನ್ಸ್ಡ್ ವೆಬ್‌ಸೈಟ್‌ ನಲ್ಲಿ ಲಭ್ಯವಿರಲಿದೆ. ನಂತರ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಕೀ ಉತ್ತರಗಳನ್ನು ಅಕ್ಟೋಬರ್ 10,2021ರಂದು ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗುವುದಾಗಿ ತಿಳಿಸಲಾಗಿದೆ.
ದೇಶಾದ್ಯಂತ ಹಬ್ಬಿರುವ 23 ಐಐಟಿಗಳಲ್ಲಿ ಬ್ಯಾಚುಲರ್, ಇಂಟಿಗ್ರೇಟೆಡ್ ಸ್ನಾತಕೋತ್ತರ ಮತ್ತು ಡ್ಯುಯಲ್ ಡಿಗ್ರಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲು ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಜೆಇಇ ಅಡ್ವಾನ್ಸ್ಡ್ 2021ಗೆ ಅರ್ಜಿ ಸಲ್ಲಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಜೆಇಇ ಅಡ್ವಾನ್ಸ್ಡ್ ಅಧಿಕೃತ ವೆಬ್‌ಸೈಟ್ http://jeeadv.ac.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ರಿಜಿಸ್ಟರ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ
ಸ್ಟೆಪ್ 4: ನಂತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ
ಸ್ಟೆಪ್ 5: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 6: ಅಂತಿಮವಾಗಿ ಸಬ್‌ಮಿಟ್ ಮಾಡಿ ಜೊತೆಗೆ ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

More News  

For Quick Alerts
ALLOW NOTIFICATIONS  
For Daily Alerts

English summary
Registration for jee advanced 2021 will begin from today. how to apply read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+