ಜೆಇಇ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಲಭ್ಯ

Posted By:

ಜೆ ಇ ಇ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರಗಳು ಬಿಡುಗಡೆಯಾಗಿವೆ. ಜೆ ಇ ಇ ಪರೀಕ್ಷಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ವಿಳಾಸದಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಬಾರಿಯ ಐದನೇ ಮುಖ್ಯ ಪರೀಕ್ಷೆಯು ಇದಾಗಿದ್ದು ಏಪ್ರಿಲ್ ತಿಂಗಳಿನಲ್ಲಿ ನಡೆಯಲಿವೆ.
ಏಪ್ರಿಲ್ 02 , 2017 ರಂದು ಲಿಖಿತ ಪರೀಕ್ಷೆ
ಏಪ್ರಿಲ್ 08 , 2017 ಆನ್-ಲೈನ್ ಪರೀಕ್ಷೆ

ಜೆ ಇ ಇ ಪರೀಕ್ಷೆಗಳು

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ ಮತ್ತು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿ ಬಿ ಎಸ್ ಇ ), ನವದೆಹಲಿ, ಸಹಯೋಗದೊಂದಿಗೆ ಆಯೋಜಿಸುವ ಜಂಟಿ ಪ್ರವೇಶ ಪರೀಕ್ಷೆ. ವೃತ್ತಿಪರ ಕೋರ್ಸುಗಳಿಗೆ ಸೇರುವ ವಿದ್ಯಾರ್ಥಿಗಳಲ್ಲಿ ಒತ್ತಡ ಕಡಿಮೆಮಾಡಲು ಹಾಗು ತಾಂತ್ರಿಕ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಾಧನೆ ಮಾಡಲು ಬಯಸುವವರಿಗೆ ಜೆ ಇ ಇ ಪರೀಕ್ಷೆಗಳು ಸಹಕಾರಿಯಾಗಿವೆ.

ಜೆಇಇ ಪ್ರವೇಶ ಪತ್ರಗಳು ಲಭ್ಯ

ಜೆ.ಇ.ಇ. ಪರೀಕ್ಷೆಗಳು ರಾಷ್ಟ್ರ ಮಟ್ಟದ ತಾಂತ್ರಿಕ ವಿದ್ಯಾಸಂಸ್ಥೆಗಳಿಗೆ ಪ್ರವೇಶವನ್ನು ಪಡೆಯಲು ತೆಗೆದುಕೊಳ್ಳಬೇಕಾದಂಥವು. ಐ.ಐ.ಟಿ., ಎನ್.ಐ.ಟಿ., ಐ.ಎಸ್.ಇ.ಆರ್., ಮುಂತಾದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಶುದ್ಧ ವಿಜ್ಞಾನವನ್ನೋ ಅಥವಾ ಅನ್ವಯ ವಿಜ್ಞಾನವನ್ನೋ ಅಧ್ಯಯನ ಮಾಡಲು ಜೆ.ಇ.ಇ. ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆಯಬೇಕು. ಜೆ.ಇ.ಇ. ಆಯ್ಕೆ ಪರೀಕ್ಷೆಗಳು ತಮ್ಮದೇ ಆದ ಪಠ್ಯವನ್ನು ಆಧರಿಸಿರುತ್ತವೆ.

ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ

  • ಜೆಇಇ ಅಧಿಕೃತ ವೆಬ್-ಸೈಟ್ ವಿಳಾಸಕ್ಕೆ ಬೇಟಿ ನೀಡಬೇಕು http://jeemain.nic.in/
  • "Download Admit Card of JEE (Main)-2017 " ಬಟನ್ ಮೇಲೆ ಕ್ಲಿಕ್ ಮಾಡಿ
  • ಕೇಳಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಪ್ಪಿಲ್ಲದಂತೆ ಭರ್ತಿ ಮಾಡಿ
  • "SUBMIT" ಬಟನ್ ಕ್ಲಿಕ್ ಮಾಡಿ
  • ಪ್ರವೇಶ ಪತ್ರ ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ

ಸೂಚನೆ

  • ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ಇರುವ ಮಾಹಿತಿ ಸರಿಯಾಗಿದೆಯೇ ಎಂದು ಪರಿಶೀಲಿಸಿಕೊಳ್ಳತಕ್ಕದ್ದು.
  • ಪ್ರವೇಶ ಪತ್ರದಲ್ಲಿ ಏನಾದರು ತಪ್ಪುಗಳು ಕಂಡು ಬಂದಲ್ಲಿ ಕೂಡಲೇ JEE -M ಕಾರ್ಯದರ್ಶಿಗಳ ಗಮನಕ್ಕೆ ತರುವುದು.
  • ಅಭ್ಯರ್ಥಿಗಳು ಪರೀಕ್ಷೆಗೆ ನಿಗದಿ ಪಡಿಸಿದ ಅವಧಿಗೂ ಎರಡುವರೆ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪತಕ್ಕದ್ದು.

ಅಭ್ಯರ್ಥಿಗಳ ಆಯ್ಕೆ

ಜೆಇಇ ಅಭ್ಯರ್ಥಿಗಳಿಗೆ ಎರಡು ಮಾದರಿಯ ಪರೀಕ್ಷೆಗಳನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಯನ್ನು ಮುಂದಿನ ಹಂತದ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗುವುದು.
ಮುಖ್ಯ ಪರೀಕ್ಷೆಯು ಆನ್ಲೈನ್ ಮತ್ತು ಆಫ್ಲೈನ್ ಎರಡೂ ವಿಧಗಳಲ್ಲಿ ನಡೆಯುವುದು. ಆನ್ಲೈನ್ ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿರುತ್ತದೆ.

ಪ್ರಮುಖ ದಿನಾಂಕಗಳು

ಆಫ್-ಲೈನ್ ಮುಖ್ಯ ಪರೀಕ್ಷೆ ನಡೆಯುವ ದಿನಾಂಕ: 02-04-2017
ಆನ್-ಲೈನ್ ಮುಖ್ಯ ಪರೀಕ್ಷೆ ನಡೆಯುವ ದಿನಾಂಕ: 08-04-2017 , 09-04-2017
ಫಲಿತಾಂಶ ನಿರೀಕ್ಷೆ : 27-04-2017 (ತಾತ್ಕಾಲಿಕ)

ಇದನ್ನು ಗಮನಿಸಿ: ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಷನ್ (ಜೆಇಇ)

English summary
The JEE (Mains) 2017 admit cards are released at its official website.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia