JEE Main 2020: ಏಪ್ರಿಲ್ ನಲ್ಲಿ ನಡೆಯುವ ಪ್ರಮುಖ ಪರೀಕ್ಷೆಗೆ ಇಂಜಿನಿಂದ ಅರ್ಜಿ ಸಲ್ಲಿಕೆ ಆರಂಭ

ಪ್ರತೀ ವರ್ಷ ಇಂಜಿನೀಯರ್ ಆಗಬೇಕೆಂದು ಕನಸು ಕಾಣುತ್ತಿರುವ ವಿದ್ಯಾರ್ಥಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಜಾಯಿಂಟ್ ಎಂಟ್ರೇಂಸ್ ಎಕ್ಸಾಮಿನೇಶನ್ (ಜೆಇಇ) ಗಾಗಿ ಕಾಯುತ್ತಾ ಇರುತ್ತಾರೆ. ಅಂತಹ ಅಭ್ಯರ್ಥಿಗಳು ಇದೀಗ ಪರೀಕ್ಷೆಗೆ ಅರ್ಜಿಯನ್ನು ಹಾಕಬಹುದು.

ಜೆಇಇ ಏಪ್ರಿಲ್ ಪ್ರಮುಖ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಾರಂಭ

ಈ ಪರೀಕ್ಷೆಯನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ವರ್ಷಕ್ಕೆ ಎರಡು ಬಾರಿ ನಡೆಸುತ್ತದೆ. ದಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಜೆಇಇ ಏಪ್ರಿಲ್ ಪ್ರಮುಖ ಪರೀಕ್ಷೆಯ ದಿನಾಂಕ ನಿಗಧಿಪಡಿಸಿದ್ದು, ಅರ್ಜಿ ಸಲ್ಲಿಕೆಗೆ ಮಾರ್ಚ್ 7,2020 ಕೊನೆಯ ದಿನವಾಗಿರುತ್ತದೆ.

ಜನವರಿ ತಿಂಗಳಿನಲ್ಲಿ ಜೆಇಇ ಪ್ರಮುಖ 1 ಪರೀಕ್ಷೆಯು ನಡೆದಿದ್ದು, ಇದೀಗ ಏಪ್ರಿಲ್ ನಲ್ಲಿ ನಡೆಯುವ ಮುಖ್ಯ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಭರ್ತಿ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಲಿದೆ. ಆಸಕ್ತ ವಿದ್ಯಾರ್ಥಿಗಳು ಈ ಬಾರಿ ಮತ್ತೆ ತಮ್ಮ ಲಕ್ ಚೆಕ್ ಮಾಡಿಕೊಳ್ಳಬಹುದಾಗಿದೆ. ರಿಜಿಸ್ಟ್ರೇಶನ್ ಪ್ರಕ್ರಿಯೆ ಬಗ್ಗೆ ಕೆರಿಯರ್ ಇಂಡಿಯಾ ನಿಮಗೆ ಸಲಹೆ ನೀಡುತ್ತಿದೆ ಮುಂದಕ್ಕೆ ಓದಿ.

ಜೆಇಇ ಏಪ್ರಿಲ್ ಪ್ರಮುಖ ಪರೀಕ್ಷೆಯ ಪ್ರಮುಖ ದಿನಾಂಕಗಳು:

ಪರೀಕ್ಷೆ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ
ರಿಜಿಸ್ಟ್ರೇಶನ್ ದಿನಾಂಕ: ಫೆಬ್ರವರಿ 7 ರಿಂದ ಮಾರ್ಚ್ 7, 2020
ಪ್ರವೇಶ ಪತ್ರ ಡೌನ್‌ಲೋಡ್: ಮಾರ್ಚ್ 16, 2020
ಪರೀಕ್ಷೆ ದಿನಾಂಕ: ಎಪ್ರಿಲ್ 3 ರಿಂದ 9,2020
ಫಲಿತಾಂಶ ದಿನಾಂಕ: ಎಪ್ರಿಲ್ 30,2020

ಜೆಇಇ ಏಪ್ರಿಲ್ ಪ್ರಮುಖ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಾರಂಭ

ಜೆಇಇ ಏಪ್ರಿಲ್ ಪ್ರಮುಖ ಪರೀಕ್ಷೆಗೆ ರಿಜಿಸ್ಟ್ರೇಶನ್ ಮಾಡುವುದು ಹೇಗೆ:

ಸ್ಟೆಪ್ 1: ಜೆಇಇ ಅಧಿಕೃತ ವೆಬ್‌ಸೈಟ್‌ https://jeemain.nta.nic.in/WebInfo/Public/View.aspx?page=1 ಗೆ ವಿಸಿಟ್ ಮಾಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Application Form for JEE (Main) April-2020 ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನೀವು ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸುತ್ತಿದ್ದಲ್ಲಿ Fresh registration only ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 5: ಫೋಟೋಗ್ರಾಫ್ ಮತ್ತು ಸಹಿಯನ್ನ ಅಪ್‌ಲೋಡ್ ಮಾಡಿ
ಸ್ಟೆಪ್ 6: ಅರ್ಜಿ ಶುಲ್ಕ ಪಾವತಿಸಿ
ಸ್ಟೆಪ್ 7: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 8: ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
JEE Main april 2020 registration process started from today. Candidates can apply through online before 7th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X