ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ವೇಲಾಪಟ್ಟಿಯನ್ನು ವೀಕ್ಷಿಸಬಹುದು.

ಈ ಮುಂಚೆ ಫೆಬ್ರವರಿ 8,2022 ರಂದು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಆದರೆ ಇದೀಗ ಕೆಲವು ವಿಷಯಗಳ ದಿನಾಂಕಗಳನ್ನು ಮಾರ್ಪಡಿಸಿ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಮುಂಚೆ ಪ್ರಕಟವಾದ ಅಂತಿಮ ವೇಳಾಪಟ್ಟಿಯಲ್ಲಿ ಏಪ್ರಿಲ್ 21,2022ರಂದು ನಡೆಯಬೇಕಿದ್ದ ಭಾಷಾ ವಿಷಯಗಳಲ್ಲಿ ಉರ್ದು ಮತ್ತು ಅರೇಬಿಕ್ ವಿಷಯಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿದ್ದು, ಒಂದೇ ವೇಳೆಯಲ್ಲಿ ಒಂದೇ ದಿನ ಎರಡು ವಿಷಯಗಳನ್ನು ಬರೆಯಲು ಸಾಧ್ಯವಾಗುವುದಿಲ್ಲವಾದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರೇಬಿಕ್ ವಿಷಯದ ಪರೀಕ್ಷೆಯನ್ನು ಮಾತ್ರ ದಿನಾಂಕ 29-04-2022ಕ್ಕೆ ನಿಗದಿಪಡಿಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಮಾಡಿದೆ.
ದ್ವಿತೀಯ ಪಿಯುಸಿ ಪರಿಷ್ಕೃತ ಅಂತಿಮ ವೇಳಾಪಟ್ಟಿ ಹೀಗಿದೆ :
ಏಪ್ರಿಲ್ 16,2022 ಗಣಿತ, ಶಿಕ್ಷಣ, ಬೇಸಿಕ್ ಗಣಿತ
ಏಪ್ರಿಲ್ 18,2022 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏಪ್ರಿಲ್ 19,2022 ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್ ಏಪ್ರಿಲ್ 20,2022 ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 21,2022 ತಮಿಳು, ಮರಾಠಿ, ತೆಲಗು, ಮಲಯಾಳಂ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 22,2022 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏಪ್ರಿಲ್ 23,2022 ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ
ಏಪ್ರಿಲ್ 25,2022 ಅರ್ಥಶಾಸ್ತ್ರ
ಏಪ್ರಿಲ್ 26,2022 ಹಿಂದಿ
ಏಪ್ರಿಲ್ 28,2022 ಕನ್ನಡ
ಏಪ್ರಿಲ್ 29,2022 ಅರೇಬಿಕ್
ಏಪ್ರಿಲ್ 30,2022 ಸಮಾಜಶಾಸ್ತ್, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ
ಮೇ 2,2022 ಭೋಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4,2022 ಇಂಗ್ಲೀಷ್
ಮೇ 6,2022 ಲೆಕ್ಕಶಾಸ್ತ್ರ, ಐಚ್ಚಿಕ ಕನ್ನಡ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
2021-22ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆಪತ್ರಿಕೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇಕಡ.30 ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಿದ್ದು, ಶೇಕಡ.70ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುವುದು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇಕಡ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುವುದು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವಾಗ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸುವ ಅವಕಾಶ ಕಲ್ಪಿಸಲಾಗಿದೆ.


Click it and Unblock the Notifications











