Karnataka CET 2020: ಪರೀಕ್ಷಾ ವೇಳಾಪಟ್ಟಿ ಪ್ರಕಟ

ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಕಾಮನ್ ಎಂಟ್ರೆನ್ಸ್ ಟೆಸ್ಟ್(ಸಿಇಟಿ) 2020 ಪರೀಕ್ಷಾ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಜುಲೈ 30 ಮತ್ತು ಜುಲೈ 31ರಂದು ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಇಲಾಖೆ ತಿಳಿಸಿದೆ.

ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಕೊರೊನಾವೈರಸ್ ಸೋಂಕು ಹರಡದಂತೆ ವಿಧಿಸಲಾದ ಲಾಕ್ ಡೌನ್ ನಿಂದಾಗಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೆ ಇಂದು ಹೊಸ ವೇಳಾಪಟ್ಟಿ ಪ್ರಕಟವಾಗಿದ್ದು, ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಒಟ್ಟು 75 ಸ್ಥಳಗಳನ್ನು ಹೊಸ ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್‌ ನಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು.

ಸಿಇಟಿ ಪರೀಕ್ಷೆ 2020 ವೇಳಾಪಟ್ಟಿ:

30/7/2020(ಗುರುವಾರ) -ಬೆಳಗ್ಗೆ 10.30 ರಿಂದ 11.50 ಜೀವಶಾಸ್ತ್ರ (60 ಅಂಕ), ಮಧ್ಯಾಹ್ನ 2.30ರಿಂದ 3.50ರ ತನಕ ಗಣಿತ (60 ಅಂಕ)
31/7/2020 ಶುಕ್ರವಾರ ಬೆಳಗ್ಗೆ 10.30ರಿಂದ 11.50 ತನಕ ಭೌತಶಾಸ್ತ್ರ (60 ಅಂಕ), ಮಧ್ಯಾಹ್ನ 2.30ರಿಂದ 3.50ರ ತನಕ ರಸಾಯನ ಶಾಸ್ತ್ರ (60 ಅಂಕಗಳು)
1/8/2020 ಶನಿವಾರ ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ತನಕ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ (50 ಅಂಕಗಳು)

ವಿದ್ಯಾರ್ಥಿಗಳು ತಾವು ಮೊದಲು ನಿಗದಿಪಡಿಸಿಕೊಂಡ ಪರೀಕ್ಷಾ ಕೇಂದ್ರವನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಮೊದಲ ವರ್ಷ/ಸೆಮಿಸ್ಟರ್ ಇಂಜಿನಿಯರ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ ಕೋರ್ಸ್, ಬಿ ಫಾರ್ಮಾ, ಫಾರ್ಮಾ ಡಿ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ ನಡೆಸಲಾಗುತ್ತದೆ.

ಅಭ್ಯರ್ಥಿಗಳು ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka cet 2020 exam time table released. exam will be conducted on july 30 and 31st.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X