Karnataka CET 2021 : ಶೇ.95ರಷ್ಟು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರ್

ಸಿಇಟಿ ಎರಡನೇ ದಿನದ ಪರೀಕ್ಷೆ ಸಕ್ಸಸ್

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2021ರ ಎರಡನೇ ದಿನದ ಪರೀಕ್ಷೆ ಇಂದು ಯಶಸ್ವಿಯಾಗಿ ನಡೆದಿದೆ.

ಸಿಇಟಿ ಪರೀಕ್ಷೆಯು ಬೆಂಗಳೂರಿನ 86 ಕೇಂದ್ರಗಳು ಸೇರಿದಂತೆ ರಾಜ್ಯದ 530 ಕೇಂದ್ರಗಳಲ್ಲಿ ನಡೆದಿದೆ. ಪರೀಕ್ಷೆಗೆ ಒಟ್ಟಾರೆ ನೋಂದಣಿ ಮಾಡಿಕೊಂಡಿದ್ದ 2,01,834 ಅಭ್ಯರ್ಥಿಗಳಲ್ಲಿ, 1,93,588 (95.91%) ಅಭ್ಯರ್ಥಿಗಳು ಭೌತಶಾಸ್ತ್ರ ವಿಷಯಕ್ಕೆ ಮತ್ತು 1,93,522 (95.88%) ಅಭ್ಯರ್ಥಿಗಳು ರಸಾಯನಶಾಸ್ತ್ರ ವಿಷಯಕ್ಕೆ ಹಾಜರಾಗಿದ್ದರು. ಈ ಪೈಕಿ 12 ಕೋವಿಡ್ ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಪರೀಕ್ಷೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಹಾಗೂ ಪರೀಕ್ಷೆಯನ್ನು ಕೋವಿಡ್ ಮಾರ್ಗಸೂಚಿ ಪಾಲಿಸಿಸುವ ಮೂಲಕ ಉತ್ತಮವಾಗಿ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಸಿಇಟಿ ಪರೀಕ್ಷೆಯ ಎರಡನೇ ದಿನವಾದ ಇಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಯು ಬೆಳಿಗ್ಗೆ 10:30 ರಿಂದ 11:50ರ ವರೆಗೆ ಮತ್ತು ಮಧ್ಯಾಹ್ನ 2:30 ರಿಂದ 3:50 ರವರೆಗೆ ನಡೆದಿದೆ. ನಾಳೆ ಅಂದರೆ ಆಗಸ್ಟ್ ೩೦ರಂದು ಗಡಿನಾಡು ಮತ್ತು ಹೊರನಾಡು ಕನ್ನಡಿಗರಿಗೆ ಭಾಷಾ ಪರೀಕ್ಷೆ ನಡೆಯಲಿದೆ.

ಸಿಇಟಿ ಪರೀಕ್ಷೆಗೆ ಒಟ್ಟು 530 ವೀಕ್ಷಕರು, 1,060 ವಿಶೇಷ ನಿಗಾ ದಳದ ಸದಸ್ಯರು, 530 ಉಸ್ತುವಾರಿಗಳು, ಸುಮಾರು 8,409 ಇನ್‌ವಿಜಿಲೇಟರ್‌ಗಳು ಮತ್ತು 20,415 ಅಧಿಕಾರಿಗಳನ್ನು ಪರೀಕ್ಷಾ ಕರ್ತವ್ಯಗಳನ್ನು ನಿರ್ವಹಿಸಲು ನಿಯೋಜಿಸಲಾಗಿದೆ.

ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Karnataka CET 2021 second day exam which scheduled on august 29 done successfully.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+