2020ನೇ ಸಾಲಿನ 2ನೇ ವರ್ಷದ ಅಥವಾ ಮೂರನೇ ಸೆಮಿಸ್ಟರ್ ಲ್ಯಾಟರಲ್ ಎಂಜಿನಿಯರಿಂಗ್ ಪ್ರವೇಶಾತಿಗಾಗಿ ನಡೆಸುವ 'ಡಿಸಿಇಟಿ-2020' ಪರೀಕ್ಷೆ ಅಕ್ಟೋಬರ್ 7,2020ರಂದು ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಕೂಡ ಇದೀಗ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
ಡಿಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14-08-2020
ಡಿಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-08-2020
ಡಿಸಿಇಟಿ ಪರೀಕ್ಷೆಗೆ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 21-08-2020
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಆದರೆ ಇಲ್ಲಿಯವರೆಗೆ ಶುಲ್ಕ ಪಾವತಿಸದೇ ಇರುವ ಅಭ್ಯರ್ಥಿಗಳೂ ಸಹ ಶುಲ್ಕವನ್ನು ಆಗಸ್ಟ್ 21,2020ರೊಳಗೆಪಾವತಿಸಬಹುದು.
ಡಿಸಿಇಟಿ ಪರೀಕ್ಷೆ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
For Daily Alerts