Karnataka DCET 2021: ಕರ್ನಾಟಕ ಡಿಸಿಇಟಿ 2021 ಪರೀಕ್ಷೆಗೆ ಅರ್ಜಿ ಆಹ್ವಾನ

ಡಿಪ್ಲೋಮ ಅಭ್ಯರ್ಥಿಗಳಿಗೆ ಲ್ಯಾಟರಲ್ ಪ್ರವೇಶ ಯೋಜನೆಯಡಿಯಲ್ಲಿ 2021-22ನೇ ಸಾಲಿನ ಹಗಲು ಮತ್ತು ಸಂಜೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ನ ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶ ಹಾಗೂ ಆರ್ಕಿಟೆಕ್ಚರ್ ಕೋರ್ಸ್ ಗೆ ಮೊದಲನೇ ವರ್ಷದ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಡಿಸಿಇಟಿ 2021 ಪರೀಕ್ಷೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಡಿಸಿಇಟಿ 2021 ಪರೀಕ್ಷೆಗೆ ಅರ್ಜಿ ಆಹ್ವಾನ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 31,2021 ರಿಂದ ಸೆಪ್ಟೆಂಬರ್ 13,2021ರ ಸಂಜೆ 5:30ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಪಾವತಿಸಲು ಸೆಪ್ಟೆಂಬರ್ 14,2021 ಕೊನೆಯ ದಿನವಾಗಿರುತ್ತದೆ. ಅರ್ಜಿ ತಿದ್ದುಪಡಿಗೆ ಸೆಪ್ಟೆಂಬರ್ 15,2021 ರಿಂದ ಸೆಪ್ಟೆಂಬರ್ 17,2021ರ ವರೆಗೆ ಅವಕಾಶ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅಕ್ಟೋಬರ್ 11,2021ರಂದು ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗುವುದು. ಡಿಸಿಇಟಿ 2021 ಪರೀಕ್ಷೆಯನ್ನು ಅಕ್ಟೋಬರ್ 23,2021ರಂದು ನಡೆಸಲಾಗುವುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ನಿಗದಿತ ಶುಲ್ಕವನ್ನು ಪಾವತಿಸಿ ನಂತರ ಅರ್ಜಿಯನ್ನು ಮುದ್ರಿಸಿಟ್ಟುಕೊಂಡಲ್ಲಿ ಮಾತ್ರ ಡಿಸಿಇಟಿ-2021ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಅಂತಹ ಅಭ್ಯರ್ಥಿಗಳು ಮಾತ್ರ ಡಿಪ್ಲೋಮಾ ಸಾಮಾನ್ಯ ಪ್ರವೇಶ ಪರೀಕ್ಷೆ-2021ಗೆ ಅರ್ಹತೆಯನ್ನು ಪಡೆಯುತ್ತಾರೆ.

ಡಿಸಿಇಟಿ 2021 ಅರ್ಜಿ ಸಲ್ಲಿಸುವುದು ಹೇಗೆ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್ ನಲ್ಲಿ ಲಭ್ಯವಿರುವು "ಡಿಸಿಇಟಿ-2021 ಆನ್‌ಲೈನ್ ಅರ್ಜಿ" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅರ್ಜಿಯನ್ನು ಸಬ್‌ಮಿಟ್ ಮಾಡಿ
ಸ್ಟೆಪ್ 5: ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ಡಿಸಿಇಟಿ 2021ರ ಅಧಿಕೃತ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KEA invited online application for DCET 2021. Interested candidates can apply before september 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+