ಕರ್ನಾಟಕ ಅರಣ್ಯ ಇಲಾಖೆಯು ಅರಣ್ಯ ರಕ್ಷಕ ಹುದ್ದೆಗಳ ದೈಹಿಕ ಪರೀಕ್ಷೆಗಳ ದಿನಾಂಕವನ್ನು ಪ್ರಕಟ ಮಾಡಿದೆ. ಈ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪರೀಕ್ಷಾ ದಿನಾಂಕಗಳನ್ನು ವೀಕ್ಷಿಸಬಹುದು.

ಕರ್ನಾಟಕ ಅರಣ್ಯ ಇಲಾಖೆಯು 339 ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 15,2020ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವಿವಿಧ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಿದ್ದು, ದೇಹಧಾರ್ಢ್ಯತೆ, ದೈಹಿಕ ತಾಳಲ್ವಿಕೆ ಹಾಗೂ ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆಗೆ ಮೆರಿಟ್ ಹಾಗೂ ರೋಸ್ಟರ್ ಬಿಂದುಗಳ ಅನುಸಾರ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ವೃತ್ತವಾರು 1:20 ಅಂತಿಮ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ.
ಅಂತಿಮ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆಯನ್ನು ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1,2021ರ ವರೆಗೆ ಆಯಾ ವೃತ್ತಗಳ ವ್ಯಾಪ್ತಿಯಲ್ಲಿ ನಡೆಸಲು ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ. ದೈಹಿಕ ಪರೀಕ್ಷೆಗೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ದಿನಾಂಕ ಹಾಗೂ ದೈಹಿಕ ಪರೀಕ್ಷಾ ಕೇಂದ್ರದ ವಿವರವನ್ನೊಳಗೊಂಡ ಪ್ರವೇಶ ಪತ್ರವನ್ನು ಮುಂದಿನ ದಿನಗಳಲ್ಲಿ ಇಲಾಖೆಯ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











