ಕರ್ನಾಟಕ ರಾಜ್ಯದ ಎಸ್‌ಎಸ್‌ಎಲ್‌ಸಿ ಮತ್ತು ಬಾಕಿ ಉಳಿದ ದ್ವಿತೀಯ ಪಿಯುಸಿಯ ಪರೀಕ್ಷಾ ದಿನಾಂಕಗಳನ್ನು ಘೋಷಣೆ ಮಾಡಲಾಗಿದೆ.
ಜೂನ್ 25 ರಿಂದ ಜುಲೈ 4ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತು ಉಳಿದ ಪಿಯುಸಿ ಇಂಗ್ಲೀಷ್ ಭಾಷಾ ಪರೀಕ್ಷೆಯನ್ನು ಜೂನ್ 18ರಂದು ನಡೆಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.

ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೋವಿಡ್-19 ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಪರೀಕ್ಷೆಗಳ ಹೊಸ ದಿನಾಂಕಗಳನ್ನು ಘೋಷಣೆ ಮಾಡಿದ ಅವರು ಎಸ್‌ಎಸ್‌ಎಲ್‌ಸಿ ಇಂಗ್ಲೀಷವ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರವಿದೆ. ಒಟ್ಟಾರೆ ಎಲ್ಲಾ ಪರೀಕ್ಷೆಗಳು 10 ದಿನಗಳಲ್ಲಿ ಮುಗಿಯಲಿವೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 2879 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಿಸಲಾಗುತ್ತಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಪರೀಕ್ಷಾ ವೇಳಾಪಟ್ಟಿಯನ್ನು ಅತೀ ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.


Click it and Unblock the Notifications











