ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟ

2018ರ ಮಾರ್ಚ್ 1 ರಿಂದ 16 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 23ರಿಂದ ಏಪ್ರಿಲ್ 4ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆಗಳು ನಡೆಯಲಿವೆ

2017-18 ಸಾಲಿನ ಎಸ್‌ಎಸ್‌ಎಲ್ಸಿ (10 ನೇ ತರಗತಿ) ಹಾಗೂ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ.

2018ರ ಮಾರ್ಚ್ 1 ರಿಂದ 16 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 23ರಿಂದ ಏಪ್ರಿಲ್ 4ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ತನ್ವೀರ್ ಸೇಠ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

ಈ ಬಾರಿ ಸುಮಾರು 9.60 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯಲಿದ್ದು, ಪ್ರಶ್ನೆ ಪತ್ರಿಕೆ ಮೌಲ್ಯ ಮಾಪನಕ್ಕೆ 60 ಸಾವಿರ ಶಿಕ್ಷಕರ ಅಗತ್ಯವಿದೆ. ಇನ್ನು 7 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಏಪ್ರಿಲ್ 30ರೊಳಗೆ ಪಿಯುಸಿ ಮತ್ತು ಎಸ್‌ಎಸ್‌ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಸೇಠ್ ಹೇಳಿದರು.

ವಿಧಾನಸಭಾ ಚುನಾವಣೆ ಕಾರಣದಿಂದಾಗಿ ಎರಡೂ ಪರೀಕ್ಷೆಗಳು ಸುಮಾರು ಒಂದು ವಾರ ಮುಂಚಿತವಾಗಿ ಆರಂಭವಾಗುತ್ತಿವೆ. ದ್ವಿತೀಯ ಪಿಯು ಪರೀಕ್ಷೆ ಕಳೆದ ಮಾರ್ಚ್‌ 9ರಿಂದ 27ರವರೆಗೆ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 30ರಿಂದ ಏಪ್ರಿಲ್ 12ರವರೆಗೆ ನಡೆದಿತ್ತು.

ವೇಳಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್‌ 24ರೊಳಗೆ ಸಲ್ಲಿಸಬೇಕು. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ

ಪಿಯು ಪರೀಕ್ಷೆಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಸಲ್ಲಿಸುವ ವಿಳಾಸ:
ಜಂಟಿ ನಿರ್ದೇಶಕರು (ಪರೀಕ್ಷೆ),
ಪದವಿ ಪೂರ್ವ ಶಿಕ್ಷಣ ಇಲಾಖೆ,
18ನೇ ಅಡ್ಡರಸ್ತೆ, ಮಲ್ಲೇಶ್ವರ,
ಬೆಂಗಳೂರು- 560012

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

ಪರೀಕ್ಷೆಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಸಲ್ಲಿಸುವ ವಿಳಾಸ:
ನಿರ್ದೇಶಕರು (ಪರೀಕ್ಷೆಗಳು),
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 6ನೇ ಅಡ್ಡರಸ್ತೆ,
ಮಲ್ಲೇಶ್ವರ, ಬೆಂಗಳೂರು- 560003

More News  

For Quick Alerts
ALLOW NOTIFICATIONS  
For Daily Alerts

English summary
2017-18 Karnataka SSLC and PUC temporary Exam Schedule announced by education board on October 26. The SSLC exam held from March 23 to April 4, 2018 and Second PUC exam held from March 01 to March 16, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+