Karnataka SSLC Supplementary Exam 2021 Timetable : ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಘೋಷಣೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ 2021ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಶಾಲಾ ಅಭ್ಯರ್ಥಿ, ಪುನರಾವರ್ತಿತ ಶಾಲಾ ಅಭ್ಯರ್ಥಿ, ಖಾಸಗಿ ಪುನರಾವರ್ತಿತ ಅಭ್ಯರ್ಥಿ, ಎನ್‌ಎಸ್‌ಆರ್, ಎನ್‌ಎಸ್‌ಪಿಆರ್ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬಹುದಾಗಿದ್ದು, ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಇದೀಗ ವೇಳಾಪಟ್ಟಿಯನ್ನು ವೀಕ್ಷಿಸಬಹುದು.

 

ಈ ಭಾರಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯನ್ನು ಸೆಪ್ಟೆಂಬರ್ 27 ಮತ್ತು ಸೆಪ್ಟೆಂಬರ್ 29 ರಂದು ಎರಡು ಶಿಫ್ಟ್ ಗಳಲ್ಲಿ ನಡೆಸಲಾಗುತ್ತಿದೆ.

ಮೊದಲ ದಿನದಂದು ಮೊದಲ ಶಿಫ್ಟ್ ಬೆಳಿಗ್ಗೆ 10:30 ರಿಂದ 1:30ರ ವರೆಗೆ ಪರೀಕ್ಷೆ ನಡೆಯಲಿದ್ದು, ಕೋರ್ ವಿಷಯಗಳಿಗೆ (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ಮತ್ತು ಸಮಾಜಶಾಸ್ತ್ರ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ/ಕರ್ನಾಟಕ ಸಂಗೀತ ಪರೀಕ್ಷೆಗಳು ನಡೆಯಲಿವೆ.

ಎರಡನೇ ಶಿಫ್ಟ್ ನಲ್ಲಿ ಕಿರಿಯ ತಾಂತ್ರಿಕ ವಿಷಯಗಳ ಪರೀಕ್ಷೆ ನಡೆಯಲಿದ್ದು, ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ.

ಸೆಪ್ಟೆಂಬರ್ 28,2021ರಂದು ಯಾವುದೇ ಪರೀಕ್ಷೆ ಇರುವುದಿಲ್ಲ ಎಂದು ವಿದ್ಯಾರ್ಥಿಗಳು ಗಮನದಲ್ಲಿಡಬೇಕು. ಭಾಷಾ ವಿಷಯಗಳ ಪರೀಕ್ಷೆಯು ಸೆಪ್ಟೆಂಬರ್ 29,2021ರ ಬುಧವಾರದಂದು ನಡೆಯಲಿದೆ.

ಜೆಟಿಎಸ್ ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳನ್ನು ಸೆಪ್ಟೆಂಬರ್ 30, 2021 ರಂದು ಆಯಾ ಶಾಲೆಗಳಲ್ಲಿ ನಡೆಸಲಾಗುತ್ತದೆ.

ಹಿಂದುಸ್ತಾನಿ ಸಂಗೀತ/ ಕರ್ನಾಟಕ ಸಂಗೀತ ಪ್ರಾಯೋಗಿಕ ಪರೀಕ್ಷೆಯನ್ನು ಸೆಪ್ಟೆಂಬರ್ 27 ರಂದು ಮಧ್ಯಾಹ್ನ 2.30 ರಿಂದ ಸಂಜೆ 4 ರವರೆಗೆ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಅಂಧ,ಕಿವುಡ ಮತ್ತು ಮೂಗ ಹಾಗೂ ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ, ಪರೀಕ್ಷೆ ಬರೆಯಲು ನಿಗದಿಪಡಿಸಿರುವ ಸಮಯದ ಜೊತೆಗೆ ೧೫ ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗುತ್ತದೆ.

 

ಅಭ್ಯರ್ಥಿಗಳು ಅಧಿಕೃತ ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ಭಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜುಲೈ 19 ಹಾಗೂ 22ರಂದು ನಡೆಸಲಾಗಿತ್ತು. ಒಂದು ದಿನದಲ್ಲಿ ಮೂರು ಪರೀಕ್ಷೆಗಳಂತೆ ಎರಡು ದಿನಗಳಲ್ಲಿ ಆರು ವಿಷಯಗಳ ಪರೀಕ್ಷೆಯನ್ನು ನಡೆಸಲಾಗಿತ್ತು. ಬಹು ಆಯ್ಕೆ ಪ್ರಶ್ನೆಗಳನ್ನೊಳಗೊಂಡ ಪರೀಕ್ಷೆ ಇದಾಗಿದ್ದು, ಪ್ರತಿ ವಿಷಯಕ್ಕೆ 40 ಅಂಕಗಳ ಪ್ರಶ್ನೆಗಳನ್ನು ನೀಡಲಾಗಿತ್ತು. ಪರೀಕ್ಷೆಗೆ ಶೇ 99.65ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. 4,885 ಪರೀಕ್ಷಾ ಕೇಂದ್ರ, 73, 064 ಪರೀಕ್ಷಾ ಕೊಠಡಿಯಲ್ಲಿ ಕೋವಿಡ್ 19 ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು.

ಆಗಸ್ಟ್ 9,2021ರ ಮಧ್ಯಾಹ್ನ 3:30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದ್ದು, ಶೇ 99.09% ರಷ್ಟು ಫಲಿತಾಂಶ ಕಂಡುಬಂದಿದೆ. ಮೊದಲ ಬಾರಿ 8.74 ಲಕ್ಷ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. 4.70 ಲಕ್ಷ ವಿದ್ಯಾರ್ಥಿಗಳು ಪಾಸ್ ಆಗಿದ್ದು, 4.1 ಲಕ್ಷ ವಿದ್ಯಾರ್ಥಿನಿಯರು ಎಸ್ಎಸ್ಎಲ್ ಸಿ ಉತ್ತೀರ್ಣರಾಗಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Karnataka Secondary Education Examination Board, KSEEB has released the Karnataka SSLC Supplementary Exam 2021 Timetable. Check out the dates here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X