Karnataka SSLC Supplementary Exam 2022 : ಜೂನ್ 27 ರಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ : ಶಿಕ್ಷಣ ಸಚಿವ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯನ್ನು ಜೂನ್ 27 ರಿಂದ ನಡೆಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಿಸಿದ್ದಾರೆ. ಈ ಕುರಿತು ಅಧಿಸೂಚನೆಯನ್ನು ಕೂಡ ಪ್ರಕಟ ಮಾಡಲಾಗಿದೆ.

 
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ದಿನಾಂಕ ಪ್ರಕಟ

2021-22ನೇ ಸಾಲಿನಲ್ಲಿ ಪರೀಕ್ಷೆಗೆ ನೊಂದಣಿ ಮಾಡಿಕೊಂಡು ಹಾಜರಾಗದ ಮತ್ತು ಗೈರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2002-03 ರಿಂದ 2021-22ರ ಮುಖ್ಯ ಪರೀಕ್ಷೆವರೆಗೆ ಮತ್ತು 2002-03ಕ್ಕೂ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಈ ಪೂರಕ ಪರೀಕ್ಷೆಗೆ ನೊಂದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ.

ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಪಾವತಿಸಬೇಕಾದ ಪರೀಕ್ಷಾ ಶುಲ್ಕಗಳ ವಿವರ :

ಒಂದು ವಿಷಯಕ್ಕೆ 370/-ರೂ
ಎರಡು ವಿಷಯಕ್ಕೆ 461/-ರೂ
ಮೂರು ಅಥವಾ ಮೂರಕ್ಕಿಂತ ಮೇಲ್ಪಟ್ಟು 620/-ರೂ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಮಾತ್ರ ಪೂರಕ ಪರೀಕ್ಷೆಯ ಪರೀಕ್ಷಾ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ದಿನಾಂಕ ಪ್ರಕಟ

ಆನ್‌ಲೈನ್ ಪರೀಕ್ಷಾ ಅರ್ಜಿ ಹಾಗೂ ಎನ್‌ಇಎಫ್‌ಟಿ ಮೂಲಕ ಪರೀಕ್ಷಾ ಶುಲ್ಕ ಪಾವತಿಗೆ ದಿನಾಂಕಗಳು :

ಆನ್‌ಲೈನ್ ಮೂಲಕ ಮಾಹಿತಿ ಭರ್ತಿ ಮಾಡಲು ಆರಂಭ ದಿನಾಂಕ : ಮೇ 20,2022
ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : ಮೇ 30,2022
ಆನ್‌ಲೈನ್ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ನಿಗದಿಪಡಿಸಿದ ದಿನಾಂಕ : ಮೇ 31 ರಿಂದ ಜೂನ್ 2,2022
ಬ್ಯಾಂಕ್ ಗೆ ಜಮೆ ಮಾಡಲು ನಿಗದಿಪಡಿಸಿದ ದಿನಾಂಕ : ಮೇ 31 ರಿಂದ ಜೂನ್ 3
೨೦೦೨ ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ನೆಫ್ಟ್ ಚಲನ್ ಮೂಲಕ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಾವತಿಸಲು ಅಂತಿಮ ದಿನಾಂಕ : ಜೂನ್ 3,2022
ದಾಖಲೆಗಳನ್ನು ಮಂಡಳಿಗೆ ಸಲ್ಲಿಸಲು ನಿಗಧಿಪಡಿಸಿದ ಅಂತಿಮ ದಿನಾಂಕ : ಜೂನ್ 8,2022

 

ಖಾಸಗಿ ಅಭ್ಯರ್ಥಿಗಳು ಪ್ರಥಮ ಬಾರಿಗೆ ಈ ಪರೀಕ್ಷೆ ತೆಗೆದುಕೊಳ್ಳಲು ಅರ್ಹರಲ್ಲ. ಮಾರ್ಚ್/ಏಪ್ರಿಲ್-2022ರ ಪರೀಕ್ಷೆಗೆ ಶುಲ್ಕ ಪಾವತಿಸಿ ಪ್ರವೇಶ ಪತ್ರ ಪಡೆದು ಅನಾರೋಗ್ಯ, ಅಪಘಾತದಿಂದ ಆಸ್ಪತ್ರೆಗೆ ಚಿಕಿತ್ಸೆಗೊಳಗಾಗಿ ದಾಖಲಾದ ಪ್ರಕರಣಗಳಲ್ಲಿ ಮತ್ತು ಇನ್ನಿತರೆ ಕಾರಣಗಳಿಂದ ಆ ಪರೀಕ್ಷೆಯನ್ನು ತೆಗೆದುಕೊಳ್ಳದ ವಿದ್ಯಾರ್ಥಿಗಳು ಜೂನ್ 2022ರ ಪೂರಕ ಪರೀಕ್ಷೆಗೆ ನಿಗಧಿತ ಪರೀಕ್ಷಾ ಶುಲ್ಕ ಪಾವತಿಸಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.

ವಿದ್ಯಾರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka sslc supplementary exam will conduct from june 27. Students who missed and failed in the exam, they can take exam now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X