ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2023ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ವೇಳಾಪಟ್ಟಿಯ ಪ್ರಕಾರ ಪರೀಕ್ಷೆಯು ಏಪ್ರಿಲ್ 1 ರಿಂದ ಏಪ್ರಿಲ್ 15ರ ವರೆಗೆ ನಡೆಯಲಿದೆ.
ವೇಳಾಪಟ್ಟಿಯ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಪೋಷಕರು ಅಕ್ಟೋಬರ್ 29 ರಿಂದ ನವೆಂಬರ್ 28,2022ರೊಳಗೆ ಆಕ್ಷೇಪಣೆ ಸಲ್ಲಿಸಬಹುದು. ಆಕ್ಷೇಪಣೆಗಳನ್ನು [email protected] ಅಥವಾ [email protected] ವಿಳಾಸಕ್ಕೆ ಮೇಲ್ ಮುಖಾಂತರ ಅಥವಾ ನಿರ್ದೇಶಕರಿಗೆ ಅಂಚೆ ಮೂಲಕ ಸಲ್ಲಿಸಬಹುದು.

ಎಸ್‌ಎಸ್‌ಎಲ್‌ಸಿ 2023 ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ :
ಏಪ್ರಿಲ್ 1,2023 - ಪ್ರಥಮ ಭಾಷೆ
ಏಪ್ರಿಲ್ 4,2023 - ಗಣಿತ, ಸಮಾಜ ಶಾಸ್ತ್ರ
ಏಪ್ರಿಲ್ 6,2023 - ದ್ವಿತೀಯ ಭಾಷೆ
ಏಪ್ರಿಲ್ 8,2023 - ಕೋರ್ ಸಬ್ಜೆಕ್ಟ್, ಅರ್ಥಶಾಸ್ತ್ರ
ಏಪ್ರಿಲ್ 10,2023 - ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ,
ಏಪ್ರಿಲ್ 12,2023 - ತೃತೀಯ ಭಾಷೆ ಮತ್ತು ಎನ್.ಎಸ್.ಕ್ಯೂ.ಎಫ್ ಪರೀಕ್ಷಾ ವಿಷಯಗಳು
ಏಪ್ರಿಲ್ 15,2023 - ಸಮಾಜ ವಿಜ್ಞಾನ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಎರಡು ಸ್ಲಾಟ್‌ಗಳಲ್ಲಿ ನಡೆಯಲಿದ್ದು, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ಮತ್ತು ಮಧ್ಯಾಹ್ನ 2 ರಿಂದ 5.15 ರವರೆಗೆ ನಡೆಯಲಿದೆ. ಪ್ರತಿ ವಿಷಯಕ್ಕೂ ಪ್ರಶ್ನಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.
ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











