KARTET 2022 : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

2022ರ ಸಾಲಿಗೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ಪ್ರಕಟಣೆಯನ್ನು ಓದಿದ ಬಳಿಕ ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್ ನಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 1,2022 ರಿಂದ ಸೆಪ್ಟೆಂಬರ್ 30,2022ರ ವರೆಗೆ ಅವಕಾಶ ನೀಡಲಾಗಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಮತ್ತು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ಸಂಪೂರ್ಣವಾಗಿ ಇಲ್ಲಿ ತಿಳಿಯಿರಿ.

2022ನೇ ಸಾಲಿಗೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ :

ಪತ್ರಿಕೆ-1 : 1 ರಿಂದ 5ನೇ ತರಗತಿಗಳಿಗೆ - ಪಿ.ಯು.ಸಿ/ಸೀನಿಯರ್ ಸೆಕೆಂಡರಿ (ತತ್ಸಮಾನ) ಪರೀಕ್ಷೆಯಲ್ಲಿ ಶೇ.50ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ ಡಿ.ಇಐ,ಎಡ್. ಕೋರ್ಸಿನ ದ್ವಿತೀಯ ವರ್ಷದಲ್ಲಿ ತೇರ್ಗಡೆ ಹೊಂದಿದವವರು ಅಥವಾ ದ್ವಿತೀಯ ವರ್ಷದ ಅಂತಿಮ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು

ಅಥವಾ
ಪಿಯುಸಿ/ಸೀನಿಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ನಾಲ್ಕು ವರ್ಷಗಳ ಎಲಿಮೆಂಟರಿ ಎಜುಕೇಶನ್ ನಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಅಂತಿಮ ವರ್ಷದ/ಅಂತಿಮ ಸೆಮಿಸ್ಟರ್ ನ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು

ಅಥವಾ
ಸೀನಿಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ ಡಿಪ್ಲೋಮಾ ಇನ್ ಎಜುಕೇಶನ್ ತೇರ್ಗಡೆ ಹೊಂದಿರುವವರು ಅಥವಾ ದ್ವಿತೀಯ ವರ್ಷದ, ವಾರ್ಷಿಕ ಪರೀಕ್ಷೆ/ಅಂತಿಮ ಸೆಮಿಸ್ಟರ್ ನ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು

ಪತ್ರಿಕೆ-2 : 6 ರಿಂದ 8ನೇ ತರಗತಿಗಳಿಗೆ - ಪದವಿಯಲ್ಲಿ ಒಟ್ಟಾರೆ ಶೇ.50 ಅಂಕಗಳೊಂದಿಗೆ ಉತ್ತೀರ್ಣ ಹಾಗೂ
2 ಡಿ.ಇಐ.ಇಡಿ ಕೋರ್ಸ್ ದ್ವಿತೀಯ ವರ್ಷದಲ್ಲಿ ತೇರ್ಗಡೆ ಹೊಂದಿರುವವರು ಅಥವಾ ದ್ವಿತೀಯ ವರ್ಷದ ಅಂತಿಮ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು

ಅಥವಾ
ಪದವಿಯಲ್ಲಿ ಕನಿಷ್ಟ ಶೇ.೫೦ ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಬಿ.ಇಡಿ ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಅಂತಿಮ ಸೆಮಿಸ್ಟರ್ ನ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು

ಅಥವಾ
ಪಿ.ಯು.ಸಿ/ಸೀನಿಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ನಾಲ್ಕು ವರ್ಷಗಳ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್ ನಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಅಂತಿಮ ವರ್ಷದ/ಸೆಮಿಸ್ಟರ್ ನ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು.

ಅಥವಾ
ಪಿ.ಯು.ಸಿ/ಸೀನಿಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ನಾಲ್ಕು ವರ್ಷಗಳ ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಅಂತಿಮ ವರ್ಷದ, ವಾರ್ಷಿಕ ಪರೀಕ್ಷೆ/ಅಂತಿಮ ಸೆಮಿಸ್ಟರ್ ನ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು.

ಅಥವಾ
ಪದವಿಯಲ್ಲಿ ಕನಿಷ್ಟ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷದ ಬಿ.ಇಡಿ ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಅಂತಿಮ ವರ್ಷದ/ಅಂತಿಮ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು.

ಆಯ್ಕೆ ಪ್ರಕ್ರಿಯೆ :

ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗೆ ಅಭ್ಯರ್ಥಿಗಳನ್ನು ನವೆಂಬರ್ 6,2022 ರಂದು ನಡೆಯುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು :

ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 30,2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30,2022
ಪ್ರವೇಶ ಪತ್ರ ಡೌನ್‌ಲೋಡ್ ದಿನಾಂಕ : ಅಕ್ಟೋಬರ್ 21 ರಿಂದ ಪರೀಕ್ಷಾ ದಿನಾಂಕದವರೆಗೆ
ಪರೀಕ್ಷಾ ದಿನಾಂಕ : ನವೆಂಬರ್ 6,2022

ಅರ್ಜಿ ಶುಲ್ಕ :

ಸಾಮಾನ್ಯ್ ವರ್ಗ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು ಪತ್ರಿಕೆ 1 ಅಥವಾ ಪತ್ರಿಕೆ-2 ಮಾತ್ರ 700/-ರೂ ಮತ್ತು ಪತ್ರಿಕೆ-1 ಹಾಗೂ ಪತ್ರಿಕೆ-2 ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1000/-ರೂ ಮತ್ತು ಪ.ಜಾ/ಪ.ವರ್ಗ/ಪ್ರವರ್ಗ-1 ಅಭ್ಯರ್ಥಿಗಳು ಪತ್ರಿಕೆ 1 ಅಥವಾ ಪತ್ರಿಕೆ-2ಗೆ 350/-ರೂ ಮತ್ತು ಪತ್ರಿಕೆ 1 ಹಾಗೂ ಪತ್ರಿಕೆ 2 ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ವಿಶೇಷ ಅಗತ್ಯತೆಯುಳ್ಳ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಲದಿಂದ ವಿನಾಯಿತಿ ಇರುತ್ತದೆ.

ಆನ್‌ಲೈನ್ ಅರ್ಜಿ ಸಲ್ಲಿಸುವುದು ಹೇಗೆ ? :

ಸ್ಟೆಪ್ 1 : ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.schooleducation.kar.nic.in/index.html ಗೆ ಭೇಟಿ ನೀಡಿ.
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4 : ಪರೀಕ್ಷಾ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ
ಸ್ಟೆಪ್ 5 : ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಅರ್ಜಿಯನ್ನು ಸಬ್‌ಮಿಟ್ ಮಾಡಿ

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
karnataka department of public instruction invited application for karnataka teacher eligibility test 2022.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+