KCET 2022 Application Window Reopens : ಅರ್ಜಿ ಸಲ್ಲಿಕೆಗೆ ಮತ್ತೊಮ್ಮೆ ಅವಕಾಶ...ಜೂ.13ರೊಳಗೆ ಅರ್ಜಿ ಹಾಕಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಅಥವಾ KCET 2022ರ ಅರ್ಜಿ ಪ್ರಕ್ರಿಯೆಯನ್ನು ಪುನಃ ಪ್ರಾರಂಭ ಮಾಡಿದೆ. ಈವರೆಗೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಅರ್ಜಿ ಹಾಕಲು ಇದು ಕೊನೆಯ ಅವಕಾಶವಾಗಿರುತ್ತದೆ. ಅಭ್ಯರ್ಥಿಗಳಿಗೆ ಅರ್ಜಿ ತಿದ್ದುಪಡಿ ಮಾಡಲು ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಲು ಕೂಡ ಅವಕಾಶ ನೀಡಲಾಗಿರುತ್ತದೆ. ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ಜೂನ್ 13ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಮೊದಲು KCET 2022 ಅರ್ಜಿ ಪ್ರಕ್ರಿಯೆಯನ್ನು ಮೇ 12, 2022 ರಂದು ಮುಕ್ತಾಯಗೊಳಿಸಲಾಯಿತು. ಆದಾಗ್ಯೂ ಪರೀಕ್ಷಾ ಪ್ರಾಧಿಕಾರವು ಅರ್ಜಿ ಪ್ರಕ್ರಿಯೆಯನ್ನು ಪುನಃ ತೆರೆಯಲು ನಿರ್ಧರಿಸಿತು ಮತ್ತು KCET 2022ಗೆ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶವನ್ನು ಒದಗಿಸಿತ್ತು. ಇದೀಗ ಮತ್ತೊಮ್ಮೆ ಜೂನ್ 13ರ ವರೆಗೆ ಅವಕಾಶ ನೀಡಿದೆ.

ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ

KCET 2022 ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ ? :

ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ kea.kar.nic.in. ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ "ಕರ್ನಾಟಕ CET ಅಪ್ಲಿಕೇಶನ್" ಲಿಂಕ್ ಅನ್ನು ಕ್ಲಿಕ್ ಮಾಡಿ.
ಸ್ಟೆಪ್ 3: ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡುವ ಮೂಲಕ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ.
ಸ್ಟೆಪ್ 4: ನಂತರ ಕೇಳಲಾಗಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಸ್ಟೆಪ್ 5: ನೋಂದಣಿ ಶುಲ್ಕವನ್ನು ಪಾವತಿಸಿ ಮತ್ತು KCET ಅರ್ಜಿ ನಮೂನೆಯನ್ನು ಸಲ್ಲಿಸಿ.
ಸ್ಟೆಪ್ 6: ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ

KCET 2022 ಪರೀಕ್ಷೆ ನೊಂದಣಿಗೆ ಅಗತ್ಯವಿರುವ ದಾಖಲೆಗಳ ಪಟ್ಟಿ :

* ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ವಿವರಗಳು
* 10ನೇ ತರಗತಿ ಅಂಕಪಟ್ಟಿ
* ಸಹಿಯ ಸ್ಕ್ಯಾನ್ ಮಾಡಿದ ಚಿತ್ರಗಳು, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
* ಜಾತಿ ಪ್ರಮಾಣಪತ್ರ (ಅನ್ವಯಿಸಿದರೆ)
* ಆಧಾರ್ ಕಾರ್ಡ್
* ಪೋಷಕರ ಸಹಿ/ಎಡ ಹೆಬ್ಬೆರಳಿನ ಗುರುತು

ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ
KCET 2022 ಪರೀಕ್ಷೆಯ ದಿನಾಂಕ :

ಕರ್ನಾಟಕದಲ್ಲಿ ಎಂಜಿನಿಯರಿಂಗ್, ಕೃಷಿ, ವೈದ್ಯಕೀಯ, ಫಾರ್ಮಸಿಯಂತಹ ಪದವಿಪೂರ್ವ ಕಾರ್ಯಕ್ರಮಗಳಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯಿದಾಗಿದೆ. ಕೆಸಿಇಟಿ 2022 ಪರೀಕ್ಷೆಗಳು ಜೂನ್ 16, 17 ಮತ್ತು 18ರಂದು ನಿಗದಿಪಡಿಸಲಾಗಿದೆ. ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ ಪರೀಕ್ಷೆ ನಡೆಯಲಿದ್ದರೆ, ಜೂ.17ರಂದು ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಇನ್ನು ಜೂ.18ರಂದು ಹೊರನಾಡು ಗಡಿನಾಡು ಕನ್ನಡಿಗರಿಗೆ ಪರೀಕ್ಷೆಗಳು ನಡೆಯಲಿವೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಜೂನ್ 2ರಂದು ಪ್ರಕಟ ಮಾಡಲಾಗಿದೆ. ಪ್ರವೇಶ ಪತ್ರ ಪಡೆದ ಅಭ್ಯರ್ಥಿಗಳು ಅದರಲ್ಲಿನ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
KCET 2022 application window reopens again for applicants. Here is how to apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X