ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಸಿಇಟಿ ಅಥವಾ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಕೆಇಎ ಪ್ರಕಟ ಮಾಡಿರುವುದಿಲ್ಲ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಇದೀಗ ಅರ್ಜಿ ಸಲ್ಲಿಸಬಹುದಾಗಿದೆ. ಸಿಇಟಿ 2022 ಪರೀಕ್ಷೆಯನ್ನು ಜೂನ್ 16 ರಿಂದ 18ರ ವರೆಗೆ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
KCET 2022 ಪರೀಕ್ಷೆ ನೊಂದಣಿಗೆ ಅಗತ್ಯವಿರುವ ದಾಖಲೆಗಳ ಪಟ್ಟಿ :
* ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ವಿವರಗಳು * 10ನೇ ತರಗತಿ ಅಂಕಪಟ್ಟಿ * ಸಹಿಯ ಸ್ಕ್ಯಾನ್ ಮಾಡಿದ ಚಿತ್ರಗಳು, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ * ಜಾತಿ ಪ್ರಮಾಣಪತ್ರ (ಅನ್ವಯಿಸಿದರೆ) * ಆಧಾರ್ ಕಾರ್ಡ್ * ಪೋಷಕರ ಸಹಿ/ಎಡ ಹೆಬ್ಬೆರಳಿನ ಗುರುತು

KCET 2022 ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ ? :
ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ kea.kar.nic.in. ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ "ಕರ್ನಾಟಕ CET ಅಪ್ಲಿಕೇಶನ್" ಲಿಂಕ್ ಅನ್ನು ಕ್ಲಿಕ್ ಮಾಡಿ.
ಸ್ಟೆಪ್ 3: ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡುವ ಮೂಲಕ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ.
ಸ್ಟೆಪ್ 4: ನಂತರ ಕೇಳಲಾಗಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಸ್ಟೆಪ್ 5: ನೋಂದಣಿ ಶುಲ್ಕವನ್ನು ಪಾವತಿಸಿ ಮತ್ತು KCET ಅರ್ಜಿ ನಮೂನೆಯನ್ನು ಸಲ್ಲಿಸಿ.
ಸ್ಟೆಪ್ 6: ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ