KCET 2022 Registration Begins : ಸಿಇಟಿ 2022 ಪರೀಕ್ಷೆಗೆ ನೊಂದಣಿ ಪ್ರಕ್ರಿಯೆ ಇಂದಿನಿಂದ ಆರಂಭ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಸಿಇಟಿ ಅಥವಾ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಇಂದಿನಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 20,2022ರೊಳಗೆ ಅರ್ಜಿಯನ್ನು ಹಾಕಬಹುದು.

ಇಂದಿನಿಂದ ಸಿಇಟಿ ಪರೀಕ್ಷೆಗೆ ನೊಂದಣಿ ಪ್ರಕ್ರಿಯೆ ಆರಂಭ

ಕರ್ನಾಟಕದಲ್ಲಿ ಎಂಜಿನಿಯರಿಂಗ್, ಕೃಷಿ, ವೈದ್ಯಕೀಯ, ಫಾರ್ಮಸಿಯಂತಹ ಪದವಿಪೂರ್ವ ಕಾರ್ಯಕ್ರಮಗಳಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯಿದಾಗಿದೆ. ಕೆಸಿಇಟಿ 2022 ಪರೀಕ್ಷೆಗಳು ಜೂನ್ 16, 17 ಮತ್ತು 18ರಂದು ನಿಗದಿಪಡಿಸಲಾಗಿದೆ. ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ ಪರೀಕ್ಷೆ ನಡೆಯಲಿದ್ದರೆ, ಜೂ.17ರಂದು ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಇನ್ನು ಜೂ.18ರಂದು ಹೊರನಾಡು ಗಡಿನಾಡು ಕನ್ನಡಿಗರಿಗೆ ಪರೀಕ್ಷೆಗಳು ನಡೆಯಲಿವೆ.

ಈ ಅರ್ಹತಾ ಪರೀಕ್ಷೆಗೆ ನೊಂದಣಿ ಮಾಡಿಕೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳು, ಅರ್ಜಿ ಶುಲ್ಕದ ವಿವರ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

KCET 2022 ಪರೀಕ್ಷೆ ನೊಂದಣಿಗೆ ಅಗತ್ಯವಿರುವ ದಾಖಲೆಗಳ ಪಟ್ಟಿ :

KCET 2022 ಪರೀಕ್ಷೆ ನೊಂದಣಿಗೆ ಅಗತ್ಯವಿರುವ ದಾಖಲೆಗಳ ಪಟ್ಟಿ :

* ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ವಿವರಗಳು
* 10ನೇ ತರಗತಿ ಅಂಕಪಟ್ಟಿ
* ಸಹಿಯ ಸ್ಕ್ಯಾನ್ ಮಾಡಿದ ಚಿತ್ರಗಳು, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
* ಜಾತಿ ಪ್ರಮಾಣಪತ್ರ (ಅನ್ವಯಿಸಿದರೆ)
* ಆಧಾರ್ ಕಾರ್ಡ್
* ಪೋಷಕರ ಸಹಿ/ಎಡ ಹೆಬ್ಬೆರಳಿನ ಗುರುತು

KCET 2022 ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳು :

KCET 2022 ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳು :

ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ: 05-04-2022
ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 20-04-2022ರ ಸಂಜೆ 05-30 ರವರೆಗೆ.
ಆನ್‌ಲೈನ್‌ ಮೂಲಕ ಶುಲ್ಕವನ್ನು ಪಾವತಿ ಮಾಡಲು ಕೊನೆ ದಿನಾಂಕ: 22-04-2022
ಆನ್‌ಲೈನ್‌ ಮೂಲಕ ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿಗೆ ದಿನಾಂಕ: 02-05-2022 ರ ಬೆ.11 ಗಂಟೆಯಿಂದ 08-05-2022 ರ ಸಂಜೆ 05-30 ರವರೆಗೆ.
ಸಿಇಟಿ 2022 ಕ್ಕೆ ಪ್ರವೇಶ ಪತ್ರ ಬಿಡುಗಡೆ ದಿನಾಂಕ: 30-05-2022 ರ ಬೆಳಿಗ್ಗೆ 11-00 ಗಂಟೆಗೆ

KCET 2022 ಅರ್ಜಿ ಶುಲ್ಕದ ವಿವರ :
 

KCET 2022 ಅರ್ಜಿ ಶುಲ್ಕದ ವಿವರ :

ಸಾಮಾನ್ಯ ಮತ್ತು ಒಬಿಸಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 500/- ರೂ ಪಾವತಿಸಬೇಕಾಗುತ್ತದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ್ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಮತ್ತು ಮಹಿಳೆಯರು 250/- ರೂ ಪಾವತಿಸಬೇಕಿರುತ್ತದೆ.

ಕರ್ನಾಟಕ ರಾಜ್ಯದ ಹೊರಗೆ ವಾಸಿಸುವವರು 750/- ರೂ ಭಾರತದ ಹೊರಗಿನ ಅಭ್ಯರ್ಥಿಗಳು 5000/-ರೂ ಅರ್ಜಿ ಶುಲ್ಕವನ್ನು ಇ-ಚಲನ್ ನಿರ್ದಿಷ್ಟಪಡಿಸಿದ ಬ್ಯಾಂಕ್‌ಗಳು/ಡಿಡಿ ಮೂಲಕ ಪಾವತಿಸಬಹುದು.

KCET 2022 ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ ? :

KCET 2022 ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ ? :

ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ kea.kar.nic.in. ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ "ಕರ್ನಾಟಕ CET ಅಪ್ಲಿಕೇಶನ್" ಲಿಂಕ್ ಅನ್ನು ಕ್ಲಿಕ್ ಮಾಡಿ.
ಸ್ಟೆಪ್ 3: ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡುವ ಮೂಲಕ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ.
ಸ್ಟೆಪ್  4: ನಂತರ ಕೇಳಲಾಗಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಸ್ಟೆಪ್ 5: ನೋಂದಣಿ ಶುಲ್ಕವನ್ನು ಪಾವತಿಸಿ ಮತ್ತು KCET ಅರ್ಜಿ ನಮೂನೆಯನ್ನು ಸಲ್ಲಿಸಿ.
ಸ್ಟೆಪ್ 6: ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
KCET 2022 registration begins from today. Here we are giving information about important dates, documents required, application fee and how to apply in kannada.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X