KCET Exam Dates 2022 : ಸಾಮಾನ್ಯ ಪ್ರವೇಶ ಪರೀಕ್ಷೆಯ ದಿನಾಂಕ ಪ್ರಕಟ

ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯ (K-CET) ದಿನಾಂಕಗಳನ್ನು ಪ್ರಕಟಿಸಲಾಗಿದೆ. ಈ ಭಾರಿ ಜೂನ್ 16, 17 ಮತ್ತು 18ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಸಿಇಟಿ ಪರೀಕ್ಷಾ ದಿನಾಂಕ ಘೋಷಣೆ

ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ ಪರೀಕ್ಷೆ ನಡೆಯಲಿದ್ದರೆ, ಜೂ.17ರಂದು ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಇನ್ನು ಜೂ.18ರಂದು ಹೊರನಾಡು ಗಡಿನಾಡು ಕನ್ನಡಿಗರಿಗೆ ಪರೀಕ್ಷೆಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಸಿಇಟಿ ಪರೀಕ್ಷೆಗೆ ಏಪ್ರಿಲ್ 5 ರಿಂದ 20ರ ವರೆಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಏಪ್ರಿಲ್ 22ರವರೆಗೆ ಶುಲ್ಕ ಪಾವತಿಗೆ ಅವಕಾಶ ಇರುತ್ತದೆ. ಮಾಹಿತಿ ಪರಿಷ್ಕರಣೆಗೆ ಮೇ 2 ರಿಂದ 6ರವರೆಗೆ ಅನುಮತಿ ನೀಡಲಾಗಿದೆ. ಮೇ 30 ರಿಂದ ಪ್ರವೇಶ ಪತ್ರಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್​. ಅಶ್ವತ್ಥ್​​ ನಾರಾಯಣ ಮಾಹಿತಿ ನೀಡಿದ್ದಾರೆ.

ಇತರ ರಾಜ್ಯಗಳಲ್ಲಿ ಈಗಾಗಲೇ ಪರೀಕ್ಷೆಯ ಸಂಭನೀಯ ದಿನಾಂಕಗಳು ಪ್ರಕಟವಾಗಿವೆ. ಅದರಂತೆ ರಾಜ್ಯದಲ್ಲಿಯೂ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದರು.

ಸಾಮಾನ್ಯ ಪ್ರವೇಶ ಪರೀಕ್ಷೆ 2022 : ಪ್ರಸ್ತಾವಿತ ವೇಳಾಪಟ್ಟಿ :

* 16/06/2022 - ಜೀವಶಾಸ್ತ್ರ, ಗಣಿತ
* 17/06/2022 - ಭೌತಶಾಸ್ತ್ರ, ರಸಾಯನಶಾಸ್ತ್ರ
* 18/06/2022 - ಕನ್ನಡ (ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ)

ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳು :

ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ: 05-04-2022
ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 20-04-2022 ರ ಸಂಜೆ 05-30 ರವರೆಗೆ.
ಆನ್‌ಲೈನ್‌ ಮೂಲಕ ಶುಲ್ಕವನ್ನು ಪಾವತಿ ಮಾಡಲು ಕೊನೆ ದಿನಾಂಕ: 22-04-2022
ಆನ್‌ಲೈನ್‌ ಮೂಲಕ ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿ ದಿನಾಂಕ: 02-05-2022 ರ ಬೆ.11 ಗಂಟೆಯಿಂದ 08-05-2022 ರ ಸಂಜೆ 05-30 ರವರೆಗೆ.
ಪ್ರವೇಶ ಪತ್ರ ಬಿಡುಗಡೆ ದಿನಾಂಕ: 30-05-2022 ರ ಬೆಳಿಗ್ಗೆ 11-00 ಗಂಟೆ

More News  

For Quick Alerts
ALLOW NOTIFICATIONS  
For Daily Alerts

English summary
KCET exam dates announced. Exam scheduled on june 16, 17 and 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+