PGCET 2021 : ಎಂಬಿಎ/ಎಂಸಿಎ/ಎಂಇ/ಎಂಟೆಕ್/ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

2021-22ನೇ ಶೈಕ್ಷಣಿಕ ಸಾಲಿನ ಮೊದಲ ವರ್ಷದ/1ನೇ ಸೆಮಿಸ್ಟರ್‌ಗಳ (ಪೂರ್ಣಾವಧಿ/ಅರೆಕಾಲಿಕ) ಎಂಬಿಎ/ಎಂಸಿಎ/ಎಂಇ/ಎಂ.ಟೆಕ್/ಎಂ.ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಪಿಜಿಸಿಇಟಿ -2021ಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪಿಜಿಸಿಇಟಿ 2021 ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ-2021ಗೆ ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 17,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕೇತರ ಅಭ್ಯರ್ಥಿಗಳನ್ನು ಎಂಬಿಎ ಮತ್ತು ಎಂಸಿಎ ಪ್ರವೇಶ ಕ್ಕೆ ಆಡಳಿತ ಮಂಡಳಿಯವರು ಸರ್ಕಾರಕ್ಕೆ ಬಿಟ್ಟುಕೊಡುವ ಸೀಟುಗಳಿಗೆ ಮಾತ್ರ ಆಯ್ಕೆಗೆ ಪರಿಗಣಿಸಲಾಗುವುದು.

ಗೇಟ್ ಅಭ್ಯರ್ಥಿಗಳಿಗೆ ಸೂಚನೆ:

ಗೇಟ್ ಪರೀಕ್ಷೆಯಲ್ಲಿ ಮಾನ್ಯತೆ ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳು ಎಂಇ/ಎಂ.ಟೆಕ್/ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕಾಗಿ, ಪಿಜಿಸಿಇಟಿ-2021ಗೆ ಹಾಜರಾಗಬೇಕಿಲ್ಲ. ಆದರೆ ಅಂತಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ ಶುಲ್ಕವನ್ನು ಪಾವತಿಸಿ ಪ್ರವೇಶಕ್ಕೆ ಅರ್ಹರಾಗಬಹುದು.

ವಿದ್ಯಾರ್ಹತೆ:

ಎಂಬಿಎ/ಎಂಸಿಎ/ಎಂಇ/ಎಂ.ಟೆಕ್/ಎಂ.ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕೆ ವಿವರವಾದ ವಿದ್ಯಾರ್ಹತೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪಡೆಯಬಹುದು.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳು ಪ್ರತಿ ಕೋರ್ಸಿಗೆ 650/-ರೂ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ಕ್ಕೆ ಸೇರಿದ ಕರ್ನಾಟಕದ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಪ್ರಮುಖ ದಿನಾಂಕಗಳು:

ಪಿಜಿಸಿಇಟಿ 2021 ಮಾಹಿತಿ ಪುಸ್ತಕ ಪ್ರಕಟಣೆ ದಿನಾಂಕ: ಸೆಪ್ಟೆಂಬರ್ 3,2021 ಮಧ್ಯಾಹ್ನ 4:00 ರ ನಂತರ
ಅರ್ಜಿಗಳನ್ನು ಆನ್‌ಲೈನ್ ನಲ್ಲಿ ದಾಖಲಿಸಲು ಆರಂಭ ದಿನಾಂಕ : ಸೆಪ್ಟೆಂಬರ್ 3,2021ರ ಸಂಜೆ 4:00 ರಿಂದ
ಅರ್ಜಿಗಳನ್ನು ದಾಖಲಿಸಲು ಕೊನೆಯ ದಿನಾಂಕ : ಸೆಪ್ಟೆಮಬರ್ 17,2021ರ ಸಂಜೆ 5:30ರ ವರೆಗೆ
ನಿಗದಿತ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 18,2021
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವ ದಿನಾಂಕ : ಅಕ್ಟೋಬರ್ 12,2021ರ ಸಂಜೆ 4 ಗಂಟೆ

ಪಿಜಿಸಿಇಟಿ -2021 ಪರೀಕ್ಷೆ:

ಪಿಜಿಸಿಇಟಿ ಪರೀಕ್ಷೆಯನ್ನು ಅಕ್ಟೋಬರ್ 22,2021ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12: ವರೆಗೆ ಮತ್ತು ಅಕ್ಟೋಬರ್ 23,2021ರಂದು ಎಸಿಎ ಕೋರ್ಸ್ ಗಳಿಗೆ ಬೆಳಿಗ್ಗೆ 10:30 ರಿಂದ 12:30ರ ವರೆಗೆ ಹಾಗೂ ಎಂಬಿಎ ಕೋರ್ಸ್ ಗಳಿಗೆ ಮಧ್ಯಾಹ್ನ 2:30 ರಿಂದ ಸಂಜೆ 4:30ರ ವರೆಗೆ ನಡೆಸಲಾಗುವುದು.

ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಪಡೆಯಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KEA invited applications to PGCET entrance test 2021 for admission to 1st semester/first year MBA/MCA/ME/M.TECH courses.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+