PGCET For M.Sc And MPT 2020: ಎಂ,ಎಸ್ಸಿ ಮತ್ತು ಎಂಪಿಟಿ ಕೋರ್ಸ್ ಗಳ ಪ್ರವೇಶ ಪರೀಕ್ಷೆಗೆ ನ.1ರೊಳಗೆ ಅರ್ಜಿ ಹ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2020-21ನೇ ಶೈಕ್ಷಣಿಕ ಸಾಲಿಗೆ ಎಂ.ಎಸ್.ಸಿ ನರ್ಸಿಂಗ್, ಮಾಸ್ಟರ್ ಆಫ್ ಪಿಜಿಯೋಥೆರಪಿ, ಎಂ.ಫಾರ್ಮ ಮತ್ತು ಫಾರ್ಮ-ಡಿ ಸ್ನಾತಕೋತ್ತರ ಕೋರ್ಸ್ ಗಳಿಗೆ ಸರ್ಕಾರಿ ಕಾಲೇಜುಗಳು ಮತ್ತು ಅನುದಾನಿತ /ಅನುದಾನರಹಿತ/ಮೈನಾರಿಟಿ ಮತ್ತು ನಾನ್ ಮೈನಾರಿಟಿ ಕಾಲೇಜುಗಳಲ್ಲಿನ ಸರ್ಕಾರಿ ಸೀಟುಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಪಿಜಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ.

ಎಂ.ಎಸ್ಸಿ ನರ್ಸಿಂಗ್ ಮತ್ತು ಎಂಪಿಟಿ ಕೋರ್ಸ್ ಗಳ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

 

ಪಿಜಿ ಪರೀಕ್ಷೆಗೆ ಅಭ್ಯರ್ಥಿಗಳು ಆಯಾ ಕೋರ್ಸ್ ಗಳಲ್ಲಿ ಪದವಿ ಪಡೆದು ಅರ್ಹರಿದ್ದಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನವೆಂಬರ್ 1,2020ರೊಳಗೆ ಆನ್‌ಲೈನ್ ಮೂಲಕ ನೊಂದಾಯಿಸಿಕೊಳ್ಳಬಹುದು.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 1,500/-ರೂ

ಪ.ಜಾ, ಪ.ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು 800/-ರೂ

ಪಿಜಿ ಪರೀಕ್ಷೆಯನ್ನು ನವೆಂಬರ್ 11,2020ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುವುದು.

ಎಂ.ಎಸ್ಸಿ ನರ್ಸಿಂಗ್, ಮಾಸ್ಟರ್ ಆಫ್ ಪಿಜಿಯೋಥೆರಪಿ, ಎ.ಎಸ್ಸಿ ಅಲ್ಲೈಡ್ ಹೆಲ್ತ್ ಸೈನ್ಸಸ್ ಕೋರ್ಸ್ ಗಳ ಪ್ರವೇಶಕ್ಕಾಗಿ ಅಭ್ಯರ್ಥಿಯು ಕನಿಷ್ಟ ಶೇ.40ರಷ್ಟು ಅಂಕಗಳನ್ನು ಪ್ರವೇಶ ಪರೀಕ್ಷೆಯಲ್ಲಿ ಪಡೆದಿರಬೇಕು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KEA invited applications to PG entrance test for admission to MSc nursing, MPT, M- pharm and pharm D courses .
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X