ರಾಜ್ಯದೆಲ್ಲೆಡೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮುಂದೂಡಿದೆ.

ದೇಶದೆಲ್ಲೆಡೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈಗಾಗಲೆ ಪಿಯುಸಿ, ಎಸ್‌ಎಸ್‌ಎಲ್‌ಸಿ ಸೇರಿದಂತೆ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಏಪ್ರಿಲ್ 14,2020ರ ಬಳಿಕವೇ ಪರೀಕ್ಷಾ ದಿನಾಂಕಗಳನ್ನು ನಿರ್ಧರಿಸಲಾಗುವುದು ಎಂದು ಶಿಕ್ಷಣ ಇಲಾಖೆಗಳು ತಿಳಿಸಿವೆ.
ಏಪ್ರಿಲ್ 22, 23 ಮತ್ತು 24 ರಂದು ಕೆಸಿಇಟಿ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು, ಆದರೆ ಕೊರೋನಾ ಭೀತಿಯಿಂದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಯನ್ನು ಮುಂದೂಡಿರುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.
ಅಭ್ಯರ್ಥಿಗಳು ಈ ಬಗ್ಗೆ ಹೆಚ್ಚಿನ ಮಾಹಿತಿತಾಗಿ ಕರ್ನಾಟಕ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
For Quick Alerts
For Daily Alerts


Click it and Unblock the Notifications











