ಕೆಪಿಎಸ್ಸಿ: ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಅರ್ಜಿ ಆಹ್ವಾನ

ಕೆಪಿಎಸ್ಸಿಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಮೇ ತಿಂಗಳಿನಲ್ಲಿ ನಡೆಯಲಿದ್ದು, ಕರ್ನಾಟಕ ನಾಗರಿಕ ಸೇವಾ ನಿಯಮಗಳಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) 2018 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಫೆ.3 ರಂದು ಕೆ ಎಲ್ ಇ ಸೊಸೈಟಿ ಬೃಹತ್ ಉದ್ಯೋಗ ಮೇಳಫೆ.3 ರಂದು ಕೆ ಎಲ್ ಇ ಸೊಸೈಟಿ ಬೃಹತ್ ಉದ್ಯೋಗ ಮೇಳ

ಮೇ ತಿಂಗಳಿನಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ನಾಗರಿಕ ಸೇವಾ ನಿಯಮಗಳಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಂದರೆ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೆ ಸೇರಿದ ಮಂಡಳಿ/ನಿಗಮ/ವಿಶ್ವವಿದ್ಯಾಲಯಗಳಲ್ಲಿ ಖಾಯಂ ಆಗಿ ಕಾರ್ಯನಿರ್ವಹಿಸುತ್ತಿರುವ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಬೆಂಗಳೂರಿನ ಹೆಚ್ಎಎಲ್ ನ್ಯೂ ಪಬ್ಲಿಕ್ ಸ್ಕೂಲ್ ನೇಮಕಾತಿಬೆಂಗಳೂರಿನ ಹೆಚ್ಎಎಲ್ ನ್ಯೂ ಪಬ್ಲಿಕ್ ಸ್ಕೂಲ್ ನೇಮಕಾತಿ

ಕೆಪಿಎಸ್ಸಿ ಇಲಾಖಾ ಪರೀಕ್ಷೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷಾ ವಿಧಾನ ಇಲಾಖಾ ಪರೀಕ್ಷೆಗೆ ಸಂಬಂಧಿಸಿದ ಕೆಲವು ವಿಷಯಗಳಿಗೆ/ಪತ್ರಿಕೆಗಳಿಗೆ ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಹಾಗೂ ಇನ್ನು ಕೆಲವು ವಿಷಯಗಳಿಗೆ/ಪತ್ರಿಕೆಗಳಿಗೆ ವಿವರಣಾತ್ಮಕ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.

ಕೆಪಿಎಸ್ಸಿ ಇಲಾಖಾ ಪರೀಕ್ಷೆ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-01-2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-02-2018
ಅಂಚೆ ಕಛೇರಿಯಲ್ಲಿ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕ: 28-02-2018

ಕೆಪಿಎಸ್ಸಿ ಇಲಾಖಾ ಪರೀಕ್ಷೆ

ಇಲಾಖಾ ಪರೀಕ್ಷೆಗಳನ್ನು ಮೂರು ಹಂತಗಳಲ್ಲಿ ನಡೆಸಲಾಗುವುದು

  • ಪ್ರಥಮ ಹಂತವಾಗಿ ಕೆಲವು ವಿಷಯಗಳ ಪರೀಕ್ಷೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ನವದೆಹಲಿ ಹಾಗೂ ಮಸ್ಸೂರಿ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು.
  • ದ್ವಿತೀಯ ಹಂತವಾಗಿ ಕೆಲವು ವಿಷಯಗಳ ಪರೀಕ್ಷೆಗಳನ್ನು ಆಯ್ದ 09 ಜಿಲ್ಲಾ ಕೇಂದ್ರಗಳಾದ ಬೆಂಗಳೂರು, ಮೈಸೂರು, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಮಂಗಳೂರು, ಗದಗ, ರಾಯಚೂರು, ವಿಜಯಪುರ ಮತ್ತು ನವದೆಹಲಿ ಹಾಗೂ ಮಸ್ಸೂರಿ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು.
  • ತೃತೀಯ ಹಾಗೂ ಅಂತಿಮ ಹಂತವಾಗಿ ಕೆಲವು ವಿಷಯಗಳ ಪರೀಕ್ಷೆಗಳನ್ನು ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುವುದು.
  • ಪರೀಕ್ಷೆಗೆ ಹಾಜರಾಗಬಯಸುವ ಅಭ್ಯರ್ಥಿಗಳು ಒಂದು ಅರ್ಜಿಯಲ್ಲಿ ಗರಿಷ್ಠ ಎಂಟು ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬಹುದು.
  • ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಅಭ್ಯರ್ಥಿಗಳು ಆಯ್ಕೆ ಮಾಡಿಕೊಳ್ಳುವ ವಿಷಯ ಮತ್ತು ವಿಷಯ ಸಂಕೇತಗಳನ್ನು ಬಹುಎಚ್ಚರಿಕೆಯಿಂದ ಭರ್ತಿ ಮಾಡಬೇಕು. ತಪ್ಪಾಗಿ ಆಯ್ಕೆ ಮಾಡಿಕೊಂಡು ಆನಂತರ ಬದಲಾವಣೆ ಮಾಡುವಂತೆ ಕೋರಿ ಸಲ್ಲಿಸಲಾಗುವ ಮನವಿಗಳನ್ನು ಅಭ್ಯರ್ಥಿಗಳೊಂದಿಗೆ ಯಾವುದೇ ಪತ್ರ ವ್ಯವಹಾರವಿಲ್ಲದೆ ನೇರವಾಗಿ ತಿರಸ್ಕರಿಸಲಾಗುವುದು.

ಸೂಚನೆಗಳು

ಸ್ಥಳೀಯ ಅಭ್ಯರ್ಥಿಗಳು, ಸ್ಟೈಪೆಂಡರಿ ಪದವೀಧರರು, ದೈನಿಕ ಮುಜರಾಯಿ ಮಾಸಿಕ ವೇತನದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಗಳು, ಕರಾರು ಆಧಾರದಲ್ಲಿ ಹಾಗೂ ಅನುದಾನಿತ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಗಳು ಮತ್ತು ಸರ್ಕಾರಿ ನೌಕರರಲ್ಲದ ವ್ಯಕ್ತಿಗಳು ಇಲಾಖಾ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗುವುದಿಲ್ಲ.

ತಾಂತ್ರಿಕ ತೊಂದರೆಗಳಿಗೆ ಸಹಾಯವಾಣಿ ಸಂಖ್ಯೆ: 8904985941/9986736594 ಅನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
KPSC invites online applications for the 2018 first session departmental examination. Only state government servants and servants of boards/corporations/Universities are eligible to apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X