ಕೆಪಿಎಸ್ಸಿ: ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೆ ಸೇರಿದ ಮಂಡಳಿ/ನಿಗಮ/ವಿಶ್ವವಿದ್ಯಾಲಯಗಳಲ್ಲಿ ಖಾಯಂ ಆಗಿ ಕಾರ್ಯನಿರ್ವಹಿಸುತ್ತಿರುವ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) 2017 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನವೆಂಬರ್ ತಿಂಗಳಿನಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ನಾಗರಿಕ ಸೇವಾ ನಿಯಮಗಳಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಂದರೆ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೆ ಸೇರಿದ ಮಂಡಳಿ/ನಿಗಮ/ವಿಶ್ವವಿದ್ಯಾಲಯಗಳಲ್ಲಿ ಖಾಯಂ ಆಗಿ ಕಾರ್ಯನಿರ್ವಹಿಸುತ್ತಿರುವ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಕೆಪಿಎಸ್ಸಿ ಇಲಾಖಾ ಪರೀಕ್ಷೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷಾ ವಿಧಾನ

ಇಲಾಖಾ ಪರೀಕ್ಷೆಗೆ ಸಂಬಂಧಿಸಿದ ಕೆಲವು ವಿಷಯಗಳಿಗೆ/ಪತ್ರಿಕೆಗಳಿಗೆ ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಹಾಗೂ ಇನ್ನು ಕೆಲವು ವಿಷಯಗಳಿಗೆ/ಪತ್ರಿಕೆಗಳಿಗೆ ವಿವರಣಾತ್ಮಕ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-10-2017
  • ಅಂಚೆ ಕಛೇರಿಯಲ್ಲಿ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕ: 09-10-2017
  • ದಾಖಲೆಗಳನ್ನು ಅಪ್ಲೋಡ್ ಮಾಡಲು, ಸಹಾಯ ಕೋರಿ ಮನವಿ ಸಲ್ಲಿಸಲು, ಪರೀಕ್ಷಾ ಕೇಂದ್ರ ಬದಲಾವಣೆಗೆ ಮನವಿ ಸಲ್ಲಿಸಲು ಕೊನೆಯ ದಿನಾಂಕ: 21-10-2017

ಕೆಪಿಎಸ್ಸಿ: ಪೂರ್ವಭಾವಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ

ಇಲಾಖಾ ಪರೀಕ್ಷೆಗಳನ್ನು ಮೂರು ಹಂತಗಳಲ್ಲಿ ನಡೆಸಲಾಗುವುದು.

  • ಪ್ರಥಮ ಹಂತವಾಗಿ ಕೆಲವು ವಿಷಯಗಳ ಪರೀಕ್ಷೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ನವದೆಹಲಿ ಹಾಗೂ ಮಸ್ಸೂರಿ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು.
  • ದ್ವಿತೀಯ ಹಂತವಾಗಿ ಕೆಲವು ವಿಷಯಗಳ ಪರೀಕ್ಷೆಗಳನ್ನು ಆಯ್ದ 09 ಜಿಲ್ಲಾ ಕೇಂದ್ರಗಳಾದ ಬೆಂಗಳೂರು, ಮೈಸೂರು, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಮಂಗಳೂರು, ಗದಗ, ರಾಯಚೂರು, ವಿಜಯಪುರ ಮತ್ತು ನವದೆಹಲಿ ಹಾಗೂ ಮಸ್ಸೂರಿ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು.
  • ತೃತೀಯ ಹಾಗೂ ಅಂತಿಮ ಹಂತವಾಗಿ ಕೆಲವು ವಿಷಯಗಳ ಪರೀಕ್ಷೆಗಳನ್ನು ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KPSC invites online application for departmental exam-second session-2017. only state government servants and servants of boards/corporation/universities of the state government are eligible to apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+