ಕರ್ನಾಟಕ ಲೋಕ ಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್-2015 ರ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆಯೋಗದ ವೆಬ್ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
2015 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಗಳನ್ನು ದಿನಾಂಕ 20 -08 -2017 ರಂದು ನಡೆಸಲಾಗುವುದು.

ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ
- ಅರ್ಹ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ ಗೆ ಭೇಟಿ ನೀಡಿ
- ಮುಖ ಪುಟದಲ್ಲಿ ಕಾಣುವ '-Admission Ticket Download' ಲಿಂಕ್ ಮೇಲೆ ಕ್ಲಿಕ್ ಮಾಡಿ
- CLICK HERE TO DOWNLOAD ADMISSION TICKET FOR GAZETTED PROBATIONERS -2015 ಪ್ರೆಲಿಮ್ಸ್ ಲಿಂಕ್ ಕ್ಲಿಕ್ ಮಾಡಿ
- ನೋಂದಣಿ ಸಂಖ್ಯೆ ಮತ್ತು ಜನ್ಮದಿನಾಂಕ ನಮೂದಿಸಿ
ಪರದೆಯಲ್ಲಿ ಮೂಡುವ ಮಾಹಿತಿಯನ್ನು ಖಚಿತಪಡಿಸಿಕೊಂಡು ಹಾಗೂ ನೀಡಿರುವ ಸೂಚನೆಗಳನ್ನು ಓದಿ ದೃಢ ಪಡಿಸಿಕೊಂಡು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಿ.
ಅಭ್ಯರ್ಥಿಗಳು ಪರೀಕ್ಷಾ ಉಪ ಕೇಂದ್ರಗಳಿಗೆ ಪ್ರವೇಶ ಪತ್ರ ಹಾಗೂ ಅವರ ಅರ್ಜಿಯೊಂದಿಗೆ ಅಪ್ಲೋಡ್ ಮಾಡಿದ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಹಾಜರುಪಡಿಸುವುದು ಕಡ್ಡಾಯವಾಗಿದೆ.
ಆಧಾರ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿ ಆಧಾರ್ ಕಾರ್ಡ್ ಸ್ವೀಕೃತಿಯಾಗದ ಅಭ್ಯರ್ಥಿಗಳು ಫೋಟೋ ಇರುವ ಮತ್ತೊಂದು ಗುರುತಿನ ಚೀಟಿಯನ್ನು (ಡ್ರೈವಿಂಗ್ ಲೈಸೆನ್ಸ್/ಚುನಾವಣಾ ಐಡಿ/ಪಾಸ್ಪೋರ್ಟ್/ಪ್ಯಾನ್ ಕಾರ್ಡ್/ಸರ್ಕಾರಿ ನೌಕರರ ಐಡಿ) ಕಡ್ಡಾಯವಾಗಿ ಹಾಜರುಪಡಿಸಬೇಕು.
ಗುರುತಿನ ಚೀಟಿ ಹಾಜರುಪಡಿಸದ ಅಭ್ಯರ್ಥಿಗಳಿಗೆ ಪ್ರವೇಶವನ್ನು ನಿರಾಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ www.kpsc.kar.nic.in ಗಮನಿಸಿ


Click it and Unblock the Notifications











