ಕೆಪಿಎಸ್ಸಿ ಮುಖ್ಯ ಪರೀಕ್ಷೆ: ಲಿಖಿತ ಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ವಿವರಗಳು

ಮುಖ್ಯ ಪರೀಕ್ಷೆಯು ಅರ್ಹತಾದಾಯಕ ಮತ್ತು ಕಡ್ಡಾಯ ಪತ್ರಿಕೆಗಳನ್ನು ಒಳಗೊಂಡಿರುತ್ತದೆ. 300 ಅಂಕಗಳ ಅರ್ಹತಾದಾಯಕ ಪತ್ರಿಕೆಗಳು ಮತ್ತು 1750 ಅಂಕಗಳ ಕಡ್ಡಾಯ ಪತ್ರಿಕೆಗಳಿಗೆ ಅಭ್ಯರ್ಥಿಯು ಉತ್ತರಿಸಬೇಕಾಗುತ್ತದೆ.

ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಗೆ ನಡೆಯುವ ಮುಖ್ಯ ಪರೀಕ್ಷೆಯು ವಿವರಣಾತ್ಮಕ ಮಾದರಿಯಲ್ಲಿದ್ದು, ಎಲ್ಲಾ ಪತ್ರಿಕೆಗಳು ಕಡ್ಡಾಯವಾಗಿರುತ್ತದೆ.

ಮುಖ್ಯ ಪರೀಕ್ಷೆಯು ಅರ್ಹತಾದಾಯಕ ಮತ್ತು ಕಡ್ಡಾಯ ಪತ್ರಿಕೆಗಳನ್ನು ಒಳಗೊಂಡಿರುತ್ತದೆ. 300 ಅಂಕಗಳ ಅರ್ಹತಾದಾಯಕ ಪತ್ರಿಕೆಗಳು ಮತ್ತು 1750 ಅಂಕಗಳ ಕಡ್ಡಾಯ ಪತ್ರಿಕೆಗಳಿಗೆ ಅಭ್ಯರ್ಥಿಯು ಉತ್ತರಿಸಬೇಕಾಗುತ್ತದೆ.

ಕೆಪಿಎಸ್ಸಿ: ಮುಖ್ಯ ಪರೀಕ್ಷೆ ಅರ್ಜಿ ಸಲ್ಲಿಕೆ ಪ್ರಾರಂಭಕೆಪಿಎಸ್ಸಿ: ಮುಖ್ಯ ಪರೀಕ್ಷೆ ಅರ್ಜಿ ಸಲ್ಲಿಕೆ ಪ್ರಾರಂಭ

ಕೆಪಿಎಸ್ಸಿ: ಲಿಖಿತ ಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ವಿವರಗಳು

ಕಡ್ಡಾಯ ಕನ್ನಡ ಮತ್ತು ಕಡ್ಡಾಯ ಇಂಗ್ಲಿಷ್ ಪತ್ರಿಕೆಗಳಲ್ಲಿ ಪಡೆಎದ ಅಂಕಗಳು ಅರ್ಹತಾದಾಯಕ ಸ್ವರೂಪದ್ದಾಗಿರುತ್ತದೆ. ಅರ್ಹತೆ ಪಡೆಯಲು ಈ ಪತ್ರಿಯೊಂದು ಪತ್ರಿಕೆಯಲ್ಲಿ ಕನಿಷ್ಠ ಶೇ.35 ಅಂಕಗಳು, ಅಂದರೆ 52.5 ಅಂಕಗಳನ್ನು ನಿಗದಿಪಡಿಸಲಾಗಿರುತ್ತದೆ.

ಈ ಎರಡೂ ಪತ್ರಿಕೆಗಳಲ್ಲಿ ಗಳಿಸಿದ ಅಂಕಗಳನ್ನು ಅಭ್ಯರ್ಥಿಗಳ ಆಯ್ಕೆಯ ಅರ್ಹತೆಯನ್ನು ನಿಗದಿಪಡಿಸುವಲ್ಲಿ ಪರಿಗಣಿಸಲಾಗುವುದಿಲ್ಲ.

ಕೆಎಎಸ್ ಮುಖ್ಯ ಪರೀಕ್ಷೆಯ ವಿವರಗಳುಕೆಎಎಸ್ ಮುಖ್ಯ ಪರೀಕ್ಷೆಯ ವಿವರಗಳು

ಈ ಎರಡೂ ಪತ್ರಿಕೆಗಳಲ್ಲಿ ನಿಗದಿತ ಅಂಕಗಳನ್ನು ಗಳಿಸದ ಅಭ್ಯರ್ಥಿಗಳು ಇತರೆ ಪತ್ರಿಕೆಗಳಲ್ಲಿ ಎಷ್ಟೇ ಹೆಚ್ಚು ಅಂಕಗಳನ್ನು ಗಳಿಸಿದ್ದರೂ ವ್ಯಕ್ತಿತ್ವ ಪರೀಕ್ಷೆಗೆ ಮತ್ತು ಆಯ್ಕೆಗೆ ಅರ್ಹರಾಗುವುದಿಲ್ಲ ಹಾಗೂ ಇಂತಹ ಅಭ್ಯರ್ಥಿಗಳ ಇತರೆ ವಿಷಯಗಳಲ್ಲಿ ಪಡೆದ ಅಂಕಗಳನ್ನು ಪ್ರಕಟಿಸಲಾಗುವುದಿಲ್ಲ.

ಮುಖ್ಯ ಪರೀಕ್ಷೆಯ ಕಡ್ಡಾಯ ಕನ್ನಡ ಪತ್ರಿಕೆ ಮತ್ತು ಕಡ್ಡಾಯ ಇಂಗ್ಲಿಷ್ ಪತ್ರಿಕೆ ಎಸ್ ಎಸ್ ಎಲ್ ಸಿ ಯ ಪ್ರಥಮ ಭಾಷೆಯ ಮಟ್ಟದ್ದಾಗಿರುತ್ತದೆ. ಮುಖ್ಯ ಪತ್ರಿಕೆಯ ಇನ್ನಿತರ ವಿಷಯಗಳ ಪತ್ರಿಕೆಗಳು ಪದವಿ ಮಟ್ಟದ್ದಾಗಿರುತ್ತದೆ.

ಪ್ರಶ್ನೆಪತ್ರಿಕೆಗಳು ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲೂ ಮುದ್ರಿಸಲಾಗಿರುತ್ತದೆ. ಅಭ್ಯರ್ಥಿಗಳು ಪತ್ರಿಕೆಯ ಉತ್ತರಗಳನ್ನು ಸಂಪೂರ್ಣವಾಗಿ ಕನ್ನಡ ಅಥವಾ ಆಂಗ್ಲಭಾಷಾ ಮಾಧ್ಯಮದಲ್ಲಿ ಉತ್ತರಿಸತಕ್ಕದ್ದು. (ಅರ್ಜಿಯಲ್ಲಿ ಆಯ್ಕೆ ಮಾಡಿಕೊಂಡ ಭಾಷೆಯಲ್ಲೇ ಉತ್ತರಿಸತಕ್ಕದ್ದು)

ಕನ್ನಡ ಭಾಷೆಯಲ್ಲಿರುವ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರು ಅಸ್ಪಷ್ಟತೆ ಇದ್ದಲ್ಲಿ ಆಂಗ್ಲ ಭಾಷೆಯಲ್ಲಿರುವ ಪ್ರಶ್ನೆಗಳನ್ನು ನೋಡುವುದು. ಎಲ್ಲಾ ವಿಷಯಗಳಲ್ಲಿ ಆಂಗ್ಲ ಭಾಷೆಯ ಪ್ರಶ್ನೆಗಳು ಅಂತಿಮವಾಗಿರುತ್ತದೆ.

ಆಯ್ಕೆ ಮಾಡಿಕೊಂಡ ಮಾಧ್ಯಮವನ್ನು ಬದಲಾಯಿಸಿದಲ್ಲಿ ಅಥವಾ ಅರ್ಧ ಕನ್ನಡ ಹಾಗೂ ಅರ್ಧ ಆಂಗ್ಲ ಮಾಧ್ಯಮದಲ್ಲಿ ಉತ್ತರಿಸಿದಲ್ಲಿ ಅಂತಹ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಗೊಳಿಸುವುದಿಲ್ಲ.

ಮುಖ್ಯ ಪರೀಕ್ಷೆಯನ್ನು ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುತ್ತದೆ.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka Public Service Commission (KPSC) mains written exam question paper details. Main exam is descriptive and consists of compulsory papers.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X