
ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್ 'ಸಿ' ತಾಂತ್ರಿಕೇತರ ಹುದ್ದೆಗಳ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು ಇಲ್ಲಿ ವೀಕ್ಷಿಸಬಹುದು.
ಪದವಿ ಮಟ್ಟದ ವಿದ್ಯಾರ್ಹತೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಡಿಸೆಂಬರ್ 4,2021 ರಂದು ಹಾಗೂ ಪದವಿಗಿಂತ ಕೆಳಮಟ್ಟದ ವಿದ್ಯಾರ್ಹತೆಯ ಪರೀಕ್ಷೆಯನ್ನು ಡಿಸೆಂಬರ್ 19,2021ರಂದು ಹಾಗೂ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಡಿಸೆಂಬರ್ 5,2021ರಂದು ನಡೆಸಲು ದಿನಾಂಕ ನಿಗದಿಪಡಿಸಿದೆ.
ಕೆಪಿಎಸ್ಸಿ ಒಟ್ಟು 523 ಗ್ರೂಪ್ ಸಿ (ತಾಂತ್ರಿಕೇತರ) ಹುದ್ದೆಗಳನ್ನು ಭರ್ತಿ ಮಾಡಲು ಸೆಪ್ಟೆಂಬರ್ 19,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಇದೀಗ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts


Click it and Unblock the Notifications











