
ಕರ್ನಾಟಕ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮುಖ್ಯ ಪರೀಕ್ಷೆಯನ್ನು ಜನವರಿ 27,2021 ರಿಂದ ಜನವರಿ 30,2021ರ ವರೆಗೆ ನಡೆಸಲಾಗುತ್ತದೆ. ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 23,2020ರೊಳಗೆ ಅರ್ಜಿ ಸಲ್ಲಿಸಬೇಕಿರುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: ಡಿಸೆಂಬರ್ 9,2020
ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 23,2020
ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಡಿಸೆಂಬರ್ 24,2020
ಪರೀಕ್ಷಾ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳು 300/-ರೂ ಹಾಗೂ ಇತರೆ ಅಭ್ಯರ್ಥಿಗಳು 500/-ರೂ ಜೊತೆಗೆ 35/-ರೂ ಪ್ರಕ್ರಿಯೆ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ ಮೂಲಕ ಅಥವಾ ಸಿಎಸ್‌ಸಿ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕೆಪಿಎಸ್ಸಿ ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಡಿಸೆಂಬರ್ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಅರ್ಜಿಯ ಪ್ರಿವ್ಯೂವನ್ನು ಡೌನ್‌ಲೋಡ್ ಮಾಡಿಕೊಂಡು ತಮ್ಮ ಸಹಿಯೊಂದಿಗೆ ಸ್ವಯಂ ದೃಢೀಕರಿಸಿದ ಎಲ್ಲಾ ಪ್ರಮಾಣ ಪತ್ರಗಳ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಡಿಸೆಂಬರ್ 29,2020ರೊಳಗಾಗಿ ಆಯೋಗಕ್ಕೆ ಖುದ್ದಾಗಿ ಸಲ್ಲಿಸತಕ್ಕದ್ದು ಅಥವಾ ಸ್ಪೀಡ್ ಪೋಸ್ಟ್ ಮೂಲಕ "ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು -560001 ಇಲ್ಲಿಗೆ ತಲುಪಿಸಬೇಕಿರುತ್ತದೆ.
ಕೆಪಿಎಸ್ಸಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಮುಖ್ಯ ಪರೀಕ್ಷೆಯ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











