NTSE Exam 2020: ಎನ್‌ಟಿಎಸ್ಇ ಪರೀಕ್ಷೆಗೆ ನವೆಂಬರ್ 30ರೊಳಗೆ ಅರ್ಜಿ ಹಾಕಿ

2020-21ನೇ ಸಾಲಿನಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಗೆ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.kseeb.kar.nic.in/index.asp ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಗೆ ಅರ್ಜಿ ಆಹ್ವಾನ

ಎನ್‌ಸಿಇಆರ್ಟಿ ನವದೆಹಲಿ ರವರ ಮಾರ್ಗದರ್ಶನದಂತೆ 2020-21ನೇ ಸಾಲಿನಲ್ಲಿ ಸರ್ಕಾರಿ, ಸ್ಥಳೀಯ ಸಂಸ್ಥೆಗಳ ಶಾಲೆಗಳು, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಹಾಗೂ ದೂರ ಶಿಕ್ಷಣದಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ನಿರತ ಹಾಗೂ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕೆ.ಎಸ್‌.ಕ್ಯು.ಎ.ಎ.ಸಿ ವತಿಯಿಂದ ಎನ್‌ಟಿಎಸ್ ನ ಮೊದಲನೇ ಹಂತದ ಪರೀಕ್ಷೆಯನ್ನು ಜನವರಿ 24,2021 ರಂದು ನಡೆಸಲಾಗುವುದು.

ವಿದ್ಯಾರ್ಥಿ ವೇತನ: ದ್ವಿತೀಯ ಹಂತದ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಅಂತಿಮವಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ಹಂತದಲ್ಲಿ ಪ್ರತಿ ತಿಂಗಳು ರೂ.1,250/- ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ರೂ.2000/-ರೂ ಹಾಗೂ ಉನ್ನತ ಶಿಕ್ಷಣ ವ್ಯಾಸಂಗದ ಹಂತದಲ್ಲಿ ಯು.ಜಿ.ಸಿ ನಿಯಮಾನುಸಾರ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.

ಅಭ್ಯರ್ಥಿಗಳು ಪರೀಕ್ಷೆ ಬಗೆಗಿನ ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KSEEB invited application for NTSE examination 2020. Interested candidates can apply before November 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X