ಕೆ-ಸೆಟ್‌ ಪರೀಕ್ಷೆ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಈ ಹಿಂದೆ ಅರ್ಜಿ ಸಲ್ಲಿಸಲು ನವೆಂಬರ್ 7 ಕಡೆಯ ದಿನವಾಗಿತ್ತು . ಹೊಸ ಅಧಿಸೂಚನೆಯಂತೆ ನವೆಂಬರ್ 13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ರೂ.150/- ದಂಡ ಶುಲ್ಕ ದೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್‌) ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ನವೆಂಬರ್ 7 ಕಡೆಯ ದಿನವಾಗಿತ್ತು . ಹೊಸ ಅಧಿಸೂಚನೆಯಂತೆ ನವೆಂಬರ್ 13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅಭ್ಯರ್ಥಿಗಳು ರೂ.150/- ದಂಡ ಶುಲ್ಕ ದೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಫೆಲೋಶಿಪ್ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಫೆಲೋಶಿಪ್

ಕೆ-ಸೆಟ್‌ ಪರೀಕ್ಷೆ: ದಿನಾಂಕ ವಿಸ್ತರಣೆ

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (ದಂಡ ಶುಲ್ಕದೊಂದಿಗೆ): 13-11-2017
  • ಅರ್ಜಿಗಳನ್ನು ಆನ್ಲೈನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಲು ಕೊನೆಯ ದಿನಾಂಕ: 15-11-2017
  • ಬ್ಯಾಂಕ್ ಚಲನ್‌ ಸೇರಿ ಅಗತ್ಯ ದಾಖಲೆಗಳೊಂದಿಗೆ ಮೂಲಪ್ರತಿಗಳನ್ನು ನೋಡಲ್ ಕೇಂದ್ರಗಳಿಗೆ ತಲುಪಿಸಲು ಅಂತಿಮ ದಿನಾಂಕ: 20-11-2017
  • ಅರ್ಹತಾ ಪರೀಕ್ಷೆ ನಡೆಯುವ ದಿನಾಂಕ: 31-12-2017

ಈ ಬಾರಿ 39 ವಿಷಯಗಳಿಗೆ ಸಂಬಂಧಿಸಿದಂತೆ ಉಪನ್ಯಾಸಕರ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಹತಾ ಪರೀಕ್ಷೆ ನಡೆಸಲಾಗುತ್ತಿದ್ದು, ಡಿಸೆಂಬರ್ 31ರಂದು ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಸಲು ಅರ್ಹತೆ

  • ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ 55ರಷ್ಟು ಅಂಕ ಗಳಿಸಿರಬೇಕು.
  • ಪರಿಶಿಷ್ಟ ಜಾತಿ, ಪಂಗಡ, ವಿವಿಧ ಹಿಂದುಳಿದ ವರ್ಗ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶೇ 50 ಅಂಕ ನಿಗದಿಪಡಿಸಲಾಗಿದೆ.

ಪರೀಕ್ಷಾ ಕೇಂದ್ರಗಳು

ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಕೆ-ಸೆಟ್ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷಾ ಕ್ರಮ

ಸಿಬಿಎಸ್ಇ /ಯುಜಿಸಿ ನಡೆಸುವ ನೆಟ್ ಪರೀಕ್ಷೆಗಳಂತೆ ಕೆ-ಸೆಟ್ ಪರೀಕ್ಷೆ ಕೂಡ ಬಹು ಆಯ್ಕೆಯ ಪ್ರಶ್ನಾಪತ್ರಿಕೆಯಾಗಿದ್ದು ಮೂರು ಪ್ರಶ್ನೆಪತ್ರಿಕೆಗಳನ್ನು ಒಳಗೊಂಡಿರುತ್ತದೆ.

  • ಪ್ರಶ್ನೆಪತ್ರಿಕೆ-1 : ಸಾಮಾನ್ಯ ಪತ್ರಿಕೆ (100 ಅಂಕಗಳು)
  • ಪ್ರಶ್ನೆಪತ್ರಿಕೆ-2 : ವಿಷಯ ಪತ್ರಿಕೆ (100 ಅಂಕಗಳು)
  • ಪ್ರಶ್ನೆಪತ್ರಿಕೆ -3: ವಿಷಯ ಪತ್ರಿಕೆ (150 ಅಂಕಗಳು)

ತೇರ್ಗಡೆ ವಿಧಾನ ಯುಜಿಸಿ ನಿಯಮಾವಳಿಯಂತೆ ಶೇಕಡವಾರಿನ (ಕಟ್ ಆಫ್ ಪರ್ಸೆಂಟೇಜ್) ಮೂಲಕ ಅಭ್ಯರ್ಥಿಗಳ ಫಲಿತಾಂಶ ಘೋಷಿಸಲಾಗುತ್ತದೆ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ kset.uni-mysore.ac.in ನೋಡಬಹುದು.

For Quick Alerts
ALLOW NOTIFICATIONS  
For Daily Alerts

English summary
KSET-2017 Submission of On-line Application Dates has been extended. As per new notification last date for filing application is November 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X