ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಿರುವ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗಳನ್ನು ಮುಂದೂಡಲಾಗಿದೆ.
"ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಿರುವುದರಿಂದ ದೇಶದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿರುವ ಕಾರಣ ರಾಜ್ಯವ್ಯಾಪ್ತಿ ಸೆಕ್ಷನ್ 144 ರಡಿ ನಿಷೇದಾಜ್ಞೆ ಜಾರಿಗೊಳಿಸಲಾಗಿರುತ್ತದೆ. ಆದ್ದರಿಂದ ದಿನಾಂಕ 20, 21, 23 ಮತ್ತು 24 ರಂದು ನಿಗದಿಪಡಿಸಲಾಗಿದ್ದ ಇಟಿ-ಪಿಎಸ್‌ಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.
KSP: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಇಟಿ- ಪಿಎಸ್‌ಟಿ ಪ್ರವೇಶ ಪತ್ರ ಬಿಡುಗಡೆ
ಇಲ್ಲಿ ತಿಳಿಸಲಾಗಿರುವ ದಿನಾಂಕಗಳನ್ನು ಹೊರತುಪಡಿಸಿ ಇತರೆ ಯಾವ ಕೇಂದ್ರಗಳಲ್ಲಿ, ಯಾವ ದಿನಾಂಕಗಳಂದು ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ನಡೆಸಲಾಗುತ್ತದೆ ಎಂಬುದನ್ನು ಕೆಳಗೆ ನೀಡಲಾಗಿರುತ್ತದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕಳೆದ ಅಕ್ಟೋಬರ್ ನಲ್ಲಿ 300 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪುರುಷ ಮತ್ತು ಮಹಿಳಾ) (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷೆಗಳ ದಿನಾಂಕವನ್ನು ಮುಂದೂಡಲಾಗಿರುತ್ತದೆ.