ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ನಡೆಸಿದ ಸಾಮಾನ್ಯ ಅರ್ಹತಾ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರವನ್ನು ಚೆಕ್ ಮಾಡಿಕೊಳ್ಳಬಹುದು.
ಇಲಾಖೆಯು ಫೆಬ್ರವರಿ 2,2020 ರಂದು ಸಿಎಟಿ (ಸಾಮಾನ್ಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ನಡೆಸಿದ್ದು, ಇದೀಗ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಾವು ಪರೀಕ್ಷೆ ಬರೆದ ಪ್ರಶ್ನೆ ಪತ್ರಿಕೆ ಸೀರೀಸ್ ಪ್ರಕಾರ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.
ಅಭ್ಯರ್ಥಿಯು ತಾತ್ಕಾಲಿಕ ಕೀ ಉತ್ತರಕ್ಕೆ ಸಂಬಂಧಿಸಿದಂತೆ ಯಾವುದೇ ಉತ್ತರಗಳಿಗೆ ಆಕ್ಷೇಪಣೆ ಇದ್ದಲ್ಲಿ ಇಂದು ಸಂಜೆ 5:30ರೊಳಗಾಗಿ keauthority-ka@nic.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಆಕ್ಷೇಪಣೆ ಸಲ್ಲಿಸಬಹುದು.
ಅಭ್ಯರ್ಥಿಗಳು ಸಿಎಟಿ ಪರೀಕ್ಷೆಯ ತಾತ್ಕಾಲಿಕ ಕೀ-ಉತ್ತರವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
For Daily Alerts