ನೀಟ್‌ 2018: ದೇಶಾದ್ಯಂತ ಒಂದೇ ಮಾದರಿಯ ಪ್ರಶ್ನೆ ಪತ್ರಿಕೆ

Posted By:

2018 ರ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಗೆ ಒಂದೇ ಮಾದರಿಯ ಪ್ರಶ್ನೆ ಪತ್ರಿಕೆ ಅಳವಡಿಸಲಾಗುವುದು ಎಂದು ಸಿಬಿಎಸ್ಇ ತಿಳಿಸಿದೆ.

ಎಂಬಿಬಿಎಸ್‌ ಮತ್ತು ಬಿಡಿಎಸ್‌ ಪ್ರವೇಶಕ್ಕೆ ನಡೆಸಲಾಗುವ ಈ ಪರೀಕ್ಷೆಗೆ ಕನ್ನಡ, ಇಂಗ್ಲಿಷ್‌, ಹಿಂದಿ ಸೇರಿದಂತೆ ಹತ್ತು ಭಾಷೆಗಳಲ್ಲಿ ನೀಟ್‌ ನಡೆಯುತ್ತದೆ. 2017 ರ ನೀಟ್ ಪರೀಕ್ಷೆಯಲ್ಲಿ ಸ್ಥಳೀಯ ಭಾಷೆಯಲ್ಲಿದ್ದ ಪ್ರಶೆಪತ್ರಿಕೆಗಳು ಕ್ಲಿಷ್ಟಕರವಾಗಿತ್ತು, ಹೀಗಾಗಿ ಗುಜರಾತ್ ಮತ್ತು ತಮಿಳುನಾಡಿನಲ್ಲಿ ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲೇರಿದ್ದರು.

ನೀಟ್‌ 2018 ಒಂದೇ ಮಾದರಿ ಪ್ರಶ್ನೆ ಪತ್ರಿಕೆ

ನೀಟ್‌ ಪರೀಕ್ಷೆಗೆ ಒಂದೇ ಸೆಟ್‌ ಪ್ರಶ್ನೆಪತ್ರಿಕೆ ಸಿದ್ಧಪಡಿಸುವಂತೆ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ)ಗೆ ನಿರ್ದೇಶನ ನೀಡಬೇಕೆಂದು ಕೋರಿ ಸಂಕಲ್ಪ ಚಾರಿಟೆಬಲ್‌ ಟ್ರಸ್ಟ್‌ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು.

''ಪರೀಕ್ಷೆಯ ಬೌದ್ಧಿಕ ಮಟ್ಟ ಒಂದೇ ಆಗಿರುವುದರಿಂದ ಬೇರೆ ಬೇರೆ ಪ್ರಶ್ನೆಪತ್ರಿಕೆ ತಯಾರಿಸುವುದು ತಪ್ಪಲ್ಲ' ಎಂಬ ಸಿಬಿಎಸ್‌ಇಯ ವಾದವನ್ನು ನ್ಯಾಯಾಲಯ ಒಪ್ಪಲಿಲ್ಲ. ಬದಲಿಗೆ, ''ಬೇರೆ ಬೇರೆ ಭಾಷೆಗಳಲ್ಲಿ ಬರೆಯುವ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಪ್ರಶ್ನೆಗಳನ್ನು ಕೇಳುವುದು ಸಮಂಜಸವಲ್ಲ. ಪ್ರಶ್ನೆಗಳು ವಿಭಿನ್ನವಾಗಿರುವಾಗ ವಿದ್ಯಾರ್ಥಿಗಳ ಸಾಮರ್ಥ್ಯ‌ ಮೌಲ್ಯಮಾಪನ ಮಾಡುವುದು ಬಹಳ ಕಷ್ಟವಾಗುತ್ತದೆ,'' ಎಂದು ಅಭಿಪ್ರಾಯಪಟ್ಟಿತು.

ಈ ಸಲಹೆಯನ್ನು ಒಪ್ಪಿಕೊಳ್ಳುವುದಾಗಿ ಸಿಬಿಎಸ್‌ಇ ಗುರುವಾರ ವಿಚಾರಣೆ ವೇಳೆ ಸ್ಪಷ್ಟಪಡಿಸಿತು. ಇದೇ ಶೈಕ್ಷಣಿಕ ವರ್ಷದಿಂದಲೇ ಒಂದು ಸೆಟ್‌ ಪ್ರಶ್ನೆಪತ್ರಿಕೆ ತಯಾರಿಸಿ, ಅದನ್ನೇ ಎಲ್ಲ ಭಾಷೆಗಳಿಗೂ ತರ್ಜುಮೆ ಮಾಡಲಾಗುವುದು ಎಂದು ತಿಳಿಸಿತು.

ನೀಟ್‌ 2018 ಒಂದೇ ಮಾದರಿ ಪ್ರಶ್ನೆ ಪತ್ರಿಕೆ

ಎಂಬಿಬಿಎಸ್, ಬಿಡಿಎಸ್, ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಕಡ್ಡಾಯಗೊಳಿಸಿರುವ " ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ , ಈ ಹಿಂದೆ ಯಾವ ಪಠ್ಯಕ್ರಮವಿತ್ತೋ ಅದನ್ನೇ ಈ ವರ್ಷವೂ ಮುಂದುವರೆಸಲಾಗುವುದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಮೇ 6 ರಂದು ಪರೀಕ್ಷೆ

ಸಿಬಿಎಸ್ಇ ನೀಟ್ 2018 ರ ಪರೀಕ್ಷೆಯು ಮೇ 6 ರಂದು (ಭಾನುವಾರ) ನಡೆಯುವ ಸಾಧ್ಯತೆ ಇದೆ. ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿ ಬಿ ಎಸ್ ಇ )ಯು ಈ ಪರೀಕ್ಷೆಯನ್ನು ಆಯೋಜಿಸಲಿದ್ದು ಈ ಬಾರಿ ದೇಶಾದ್ಯಂತ ಸುಮಾರು 10 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಕೂರುವ ಸಾಧ್ಯತೆ ಇದೆ.

ಪರೀಕ್ಷಾ ವಿಷಯಗಳು

ಫಿಸಿಕ್ಸ್, ಕೆಮಿಸ್ಟ್ರಿ, ಬಯಾಲಜಿ (ಬಾಟನಿ ಮತ್ತು ಜಿಯೋಲಾಜಿ) ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳನ್ನ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಹಿಂದಿ ಮತ್ತು ಕನ್ನಡಲ್ಲಿ ಪ್ರಶ್ನೆ ಪತ್ರಿಕೆ ಇರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
From this year onwards, only one set of question paper will be set for the National Eligibility-cum-Entrance Test (NEET), as per the Central Board of Secondary Education’s (CBSE’s) decision.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia