ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು (ಎನ್‌ಟಿಎ) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET UG Exam 2021) ಯ ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡ ಆಭ್ಯರ್ಥಿಗಳು ಇದೀಗ ಪರೀಕ್ಷಾ ಕೇಂದ್ರದ ವಿವರವನ್ನು ಚೆಕ್ ಮಾಡಿಕೊಳ್ಳಬಹುದು.

ನೀಟ್ ಪರೀಕ್ಷೆಯನ್ನು ಸೆ. 12ರಂದು ನಿಗದಿ ಮಾಡಲಾಗಿದ್ದು, ಈ ವರ್ಷ ಸುಮಾರು 16 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡುವಾಗ ತಾವು ಆಯ್ಕೆ ಮಾಡಿಕೊಂಡಂತರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಅವಕಾಶ ನೀಡಲಾಗಿರುತ್ತದೆ ಎಂಬುದನ್ನು ಗಮನಿಸಬೇಕು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಭಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.
ನೀಟ್ ಪರೀಕ್ಷಾ ಕೇಂದ್ರ 2021 ಪಟ್ಟಿಯನ್ನು ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಅನುಸರಿಸಿ :
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ನೀಟ್‌ನ ಅಧಿಕೃತ ವೆಬ್‌ಸೈಟ್ https://neet.nta.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ View advance information for allotment of Centre City- Link 1 ಅಥವಾ View advance information for allotment of Centre City- Link 2 ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ, ಜನ್ಮ ದಿನಾಂಕ ಮತ್ತು ಸೆಕ್ಯುರಿಟಿ ಪಿನ್ ಅನ್ನು ನೀಡಿ ಸಬ್‌ಮಿಟ್ ಮಾಡಿ
ಸ್ಟೆಪ್ 4: ನಿಮ್ಮ ಮಾಹಿತಿ ಆಧರಿಸಿ ನಿಮ್ಮ ಪರೀಕ್ಷಾ ಕೇಂದ್ರದ ವಿವರ ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 5: ತದನಂತರ ಅಭ್ಯರ್ಥಿಗಳು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.
ಅಭ್ಯರ್ಥಿಗಳು ನೇರವಾಗಿ ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಎಂಬಿಬಿಎಸ್. ಬಿಡಿಎಸ್, ಬಿಎಎಂಎಸ್, ಬಿಯುಎಂಎಸ್, ಬಿಎಚ್ಎಂಎಸ್ ಕೋರ್ಸ್ಗಳ ಪ್ರವೇಶಾತಿಗೆ ನೀಟ್ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಪೇಪರ್ ಮತ್ತು ಪೆನ್ ಮೋಡ್ ನ ಪರೀಕ್ಷೆ ಇದಾಗಿದ್ದು, ಈ ಭಾರಿ ನೀಟ್ ಪರೀಕ್ಷೆಯನ್ನು ಇಂಗ್ಲಿಷ್, ಕನ್ನಡ, ಹಿಂದಿ, ಅಸ್ಸಾಮೀಸ್, ಬೆಂಗಾಲಿ, ಗುಜರಾತಿ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಒಟ್ಟು 13 ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ವಿಶೇಷವಾಗಿ ಈ ಬಾರಿ ಕುವೈತ್ ಹಾಗೂ ದುಬೈನಲ್ಲಿ ಕೂಡ ನೀಟ್ ಯುಜಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಒಟ್ಟಾರೆ 198 ಕೇಂದ್ರಗಳಲ್ಲಿ ಈ ಬಾರಿ ನೀಟ್ ಪರೀಕ್ಷೆಗಳು ನಡೆಯಲಿದೆ.


Click it and Unblock the Notifications











