NEET UG 2022 Application : ನೀಟ್ ಯುಜಿ 2022 ಅರ್ಜಿ ಸಲ್ಲಿಕೆ ಅವಧಿ ಮೇ 15ರ ವರೆಗೆ ವಿಸ್ತರಣೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ನೀಟ್‌ ಯುಜಿ 2022 ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮೇ 15,2022ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನೀಟ್ ಯುಜಿ 2022 ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಎನ್‌ಟಿಎ ಈ ಮುಂಚೆ ಆನ್‌ಲೈನ್ ಮೂಲಕ ಮೇ 6,2022ರೊಳಗೆ ಅರ್ಜಿಯನ್ನು ಆಹ್ವಾನಿಸಿತ್ತು. ಆದರೆ ಈಗ ಕಾರಣಾಂತರಗಳಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ಮುಂದೂಡಿದೆ. ಅಭ್ಯರ್ಥಿಗಳು ಮೇ 15ರೊಳಗೆ ಅರ್ಜಿಯನ್ನು ಹಾಕಬಹುದು ಜೊತೆಗೆ ಮೇ 15ರೊಳಗೆ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್ ಯುಜಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಪರೀಕ್ಷೆಯನ್ನು ಜುಲೈ 17,2022 ರಂದು ನಿಗದಿಪಡಿಸಲಾಗಿದೆ. ನೀಟ್ ಯುಜಿ 2022 ಅನ್ನು ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಮತ್ತು ಇಂಗ್ಲಿಷ್ ಸೇರಿದಂತೆ 13 ಭಾಷೆಗಳಲ್ಲಿ ನಡೆಸಲಾಗುತ್ತಿದೆ.

ನೀಟ್ ಯುಜಿ 2022 ಪರೀಕ್ಷೆಯು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರದಿಂದ (ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ) 180 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಮೂರು ವಿಷಯಗಳಲ್ಲಿ ಪ್ರತಿಯೊಂದು ಪತ್ರಿಕೆಯೂ ಎರಡು ವಿಭಾಗಗಳನ್ನು ಹೊಂದಿರುತ್ತದೆ. ವಿಭಾಗ A ಕಡ್ಡಾಯವಾಗಿರುತ್ತದೆ ಮತ್ತು 35 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ, ವಿಭಾಗ B 15 ಪ್ರಶ್ನೆಗಳನ್ನು ಹೊಂದಿರುತ್ತದೆ. ಅದರಲ್ಲಿ ಅಭ್ಯರ್ಥಿಗಳು 10 ಕ್ಕೆ ಮಾತ್ರ ಉತ್ತರಿಸಬೇಕಾಗುತ್ತದೆ. ಕಳೆದ ವರ್ಷ ಅನುಸರಿಸಿದ NEET ಮಾರ್ಕಿಂಗ್ ಯೋಜನೆಯ ಪ್ರಕಾರ ಅರ್ಜಿದಾರರು NEET ನಲ್ಲಿ ಪ್ರತಿ ಸರಿಯಾದ ಉತ್ತರಕ್ಕೆ ನಾಲ್ಕು ಅಂಕಗಳನ್ನು ಗಳಿಸುತ್ತಾರೆ ಮತ್ತು ಪ್ರತಿ ತಪ್ಪು ಉತ್ತರಕ್ಕೆ ಒಂದು ಅಂಕವನ್ನು ಕಡಿತಗೊಳಿಸಲಾಗುತ್ತದೆ. ಆದಾಗ್ಯೂ ಪ್ರಯತ್ನಿಸದ ಪ್ರಶ್ನೆಗಳಿಗೆ ಯಾವುದೇ ನಕಾರಾತ್ಮಕ ಅಂಕಗಳನ್ನು ಕಡಿತಗೊಳಿಸಲಾಗುವುದಿಲ್ಲ. ಅಭ್ಯರ್ಥಿಗಳು ಪರೀಕ್ಷೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ nta.ac.in, neet.nta.nic.in. ಗೆ ಭೇಟಿ ನೀಡತಕ್ಕದ್ದು. ನೀಟ್ ಯುಜಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಾಮಾನ್ಯ ವರ್ಗಕ್ಕೆ ಸೇರಿದ ಭಾರತೀಯ ಅಭ್ಯರ್ಥಿಗಳು ನೋಂದಣಿ ಶುಲ್ಕ 1,600/- ರೂ ಅನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು ಮತ್ತು ಇತರೆ ಮೀಸಲಾತಿ ವರ್ಗಗಳಿಗೆ ಅರ್ಜಿ ಶುಲ್ಕ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ನೀಟ್ ಯುಜಿ 2022 ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ನೀಟ್ ಯುಜಿ 2022 ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೆಳಗಿನ ಸ್ಟೆಪ್ಸ್ ಅನುಸರಿಸಿ :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://neet.nta.nic.in/ ಗೆ ಭೇಟಿ ನೀಡಿ.

ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮತ್ತು ಅರ್ಜಿ ಶುಲ್ಕ ಪಾವತಿಸಿ

ಸ್ಟೆಪ್ 4: ನಂತರ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5: ಅರ್ಜಿ ಸಲ್ಲಿಕೆಯ ಬಳಿಕ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
National testing agency extended neet ug 2022 application date to may 15. Interested candidates can apply now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X