NEET UG 2022 Registration : ನೀಟ್ ಯುಜಿ ಪರೀಕ್ಷೆಗೆ ಅರ್ಹತಾ ಮಾನದಂಡ, ಪರೀಕ್ಷಾ ಮಾದರಿ ಮತ್ತು ಅರ್ಜಿ ಸಲ್ಲಿಕೆ ವಿವರ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ನೀಟ್‌ ಯುಜಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಆರಂಭ ಮಾಡಿದ್ದು, ಆಸಕ್ತರು ಆನ್‌ಲೈನ್ ಮೂಲಕ ಮೇ 6,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ನೀಟ್ ಯುಜಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ?

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್ ಯುಜಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಪರೀಕ್ಷೆಯನ್ನು ಜುಲೈ 17,2022 ರಂದು ನಿಗದಿಪಡಿಸಲಾಗಿದೆ. ನೀಟ್ ಯುಜಿ 2022 ಅನ್ನು ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಮತ್ತು ಇಂಗ್ಲಿಷ್ ಸೇರಿದಂತೆ 13 ಭಾಷೆಗಳಲ್ಲಿ ನಡೆಸಲಾಗುತ್ತಿದೆ. ನೀಟ್ ಯುಜಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತಾ ಮಾನದಂಡ, ಪರೀಕ್ಷೆಯ ಮಾದರಿ, ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂದು ಇಲ್ಲಿ ತಿಳಿಯೋಣ.

ನೀಟ್ ಯುಜಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ?

ನೀಟ್ ಯುಜಿ 2022 ಪರೀಕ್ಷೆ :

ನೀಟ್ ಯುಜಿ 2022 ಅನ್ನು ಪೆನ್-ಪೇಪರ್ ಆಧಾರಿತ ಪರೀಕ್ಷೆಯಾಗಿ ನಡೆಸಲಾಗುತ್ತದೆ. ಪ್ರಶ್ನೆ ಪತ್ರಿಕೆಯು 200 ಪ್ರಶ್ನೆಗಳನ್ನು ಒಳಗೊಂಡಿರುವುದರ ಜೊತೆಗೆ 200 ನಿಮಿಷಗಳ ಅವಧಿಯ ಪರೀಕ್ಷೆಯಿದಾಗಿದೆ.

ನೀಟ್ ಯುಜಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ?

NEET 2022 ಪರೀಕ್ಷೆಗೆ ಅರ್ಹತಾ ಮಾನದಂಡ :

ನೀಟ್ ಯುಜಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ಅರ್ಹತಾ ಮಾನದಂಡಗಳನ್ನು ಇಲ್ಲಿ ನೀಡಲಾಗಿರುತ್ತದೆ ಓದಿ ತಿಳೀಯಿರಿ.

* ಅರ್ಜಿದಾರರು ಪರೀಕ್ಷೆಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ 17 ವರ್ಷ ವಯೋಮಿತಿಯನ್ನು ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಕೆಗೆ ಯಾವುದೇ ಗರಿಷ್ಠ ವಯಸ್ಸಿನ ಮಿತಿ ಇಲ್ಲ.

* ವಿದೇಶಿ ವೈದ್ಯಕೀಯ ಅಥವಾ ಡೆಂಟಲ್ ಇನ್‌ಸ್ಟಿಟ್ಯೂಟ್‌ನಿಂದ ಯುಜಿ ವೈದ್ಯಕೀಯ ಕೋರ್ಸ್‌ಗಳನ್ನು ಮುಂದುವರಿಸಲು ಉದ್ದೇಶಿಸಿರುವ ಭಾರತೀಯ ನಾಗರಿಕರು ಮತ್ತು ಭಾರತದ ಸಾಗರೋತ್ತರ ನಾಗರಿಕರು ಸಹ ನೀಟ್ ಯುಜಿ ಗೆ ಅರ್ಹತೆ ಪಡೆಯುವ ಅಗತ್ಯವಿದೆ.

* ಅರ್ಜಿದಾರರು ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿ ಅಥವಾ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಅಥವಾ ಜೈವಿಕ ತಂತ್ರಜ್ಞಾನ ಮತ್ತು ಇಂಗ್ಲಿಷ್ ಅನ್ನು ಕೋರ್ ವಿಷಯಗಳಾಗಿ ಅಧ್ಯಯನ ಮಾಡಿ ತತ್ಸಮಾನ ಹೊಂದಿರುವ ಅಭ್ಯರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ.

* ಈ ವರ್ಷ 12 ನೇ ತರಗತಿ ಅಥವಾ ತತ್ಸಮಾನ ಬೋರ್ಡ್ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳು ಸಹ ನೀಟ್ ಯುಜಿ ಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

* ನೀಟ್ ಗೆ ಹಾಜರಾಗಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು 12 ನೇ ತರಗತಿಯಲ್ಲಿ ಶೇಕಡಾ 50 ರಷ್ಟು ಅಂಕಗಳನ್ನು ಪಡೆದಿರಬೇಕು. ಆದಾಗ್ಯೂ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ಶೇಕಡಾವಾರು ಸಡಿಲಿಕೆಗಳನ್ನು ನೀಡಲಾಗಿರುತ್ತದೆ.

ನೀಟ್ ಯುಜಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ?

NEET 2022 ಪರೀಕ್ಷೆಯ ಮಾದರಿ :

ನೀಟ್ ಯುಜಿ 2022 ಪರೀಕ್ಷೆಯು ನಾಲ್ಕು ವಿಷಯಗಳನ್ನು ಒಳಗೊಂಡಿರುತ್ತದೆ, ಅವುಗಳೆಂದರೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ. ಪ್ರತಿಯೊಂದು ವಿಷಯವು ಎರಡು ವಿಭಾಗಗಳನ್ನು ಒಳಗೊಂಡಿರುತ್ತದೆ, ಸೆಕ್ಷನ್ ಎ 35 ಪ್ರಶ್ನೆಗಳನ್ನು ಮತ್ತು ಸೆಕ್ಷನ್ ಬಿ ಕೇವಲ 15 ಪ್ರಶ್ನೆಗಳನ್ನು ಹೊಂದಿರುತ್ತದೆ. ವಿಭಾಗ ಬಿ ಯಿಂದ 15 ಪ್ರಶ್ನೆಗಳಲ್ಲಿ ಅಭ್ಯರ್ಥಿಗಳು ಯಾವುದೇ 10 ಪ್ರಶ್ನೆಗಳನ್ನು ಉತ್ತರಿಸಲು ಆಯ್ಕೆ ಮಾಡಬಹುದು. ಆದ್ದರಿಂದ ಒಟ್ಟು ಪ್ರಶ್ನೆಗಳ ಸಂಖ್ಯೆ ಮತ್ತು ಸಮಯದ ಬಳಕೆ ಒಂದೇ ಆಗಿರುತ್ತದೆ ಎಂದು ನೀಟ್ 2022 ಮಾಹಿತಿ ಬುಲೆಟಿನ್ ಹೇಳಿದೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಸೇರಿದಂತೆ ವಿವಿಧ ಶಾಲಾ ಶಿಕ್ಷಣ ಮಂಡಳಿಗಳಿಂದ ಪಠ್ಯಕ್ರಮದಲ್ಲಿ ಕಡಿತದ ನಿರ್ಧಾರವನ್ನು ತರ್ಕಬದ್ಧಗೊಳಿಸಲು NTA ಪ್ರತಿಯೊಂದು 4 (ನಾಲ್ಕು) ವಿಷಯಗಳಿಗೆ ವಿಭಾಗ "B" ನಲ್ಲಿ ಆಯ್ಕೆಯನ್ನು ಒದಗಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.

ನೀಟ್ ಯುಜಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ?

ಅರ್ಜಿ ಶುಲ್ಕ :

ನೀಟ್ ಯುಜಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಾಮಾನ್ಯ ವರ್ಗಕ್ಕೆ ಸೇರಿದ ಭಾರತೀಯ ಅಭ್ಯರ್ಥಿಗಳು ನೋಂದಣಿ ಶುಲ್ಕ 1,600/- ರೂ ಅನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು ಮತ್ತು ಇತರೆ ಮೀಸಲಾತಿ ವರ್ಗಗಳಿಗೆ ಅರ್ಜಿ ಶುಲ್ಕ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ನೀಟ್ ಯುಜಿ 2022 ಪರೀಕ್ಷೆಗೆ ಅರ್ಜಿ ಸಲ್ಲಿಕೆ :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://neet.nta.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮತ್ತು ಅರ್ಜಿ ಶುಲ್ಕ ಪಾವತಿಸಿ
ಸ್ಟೆಪ್ 4: ನಂತರ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅರ್ಜಿ ಸಲ್ಲಿಕೆಯ ಬಳಿಕ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
NEET UG 2022 registration process begins, here is eligibility criteria, exam pattern, application fee and how to apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X