KPSC: ಲಾಕ್ಡೌನ್ ಎಫೆಕ್ಟ್ನಿಂದ ಪರೀಕ್ಷೆಗಳು ಮುಂದೂಡಿಕೆ

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ. 2019-20ನೇ ಸಾಲಿನಲ್ಲಿ ವಿವಿಧ ವೃಂದದ ಹುದ್ದೆಗಳಿಗೆ ಮೇ ಮತ್ತು ಜೂನ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ.

ಕೆಪಿಎಸ್ಸಿ ಪರೀಕ್ಷೆಗಳು ಮುಂದೂಡಿಕೆ !

ಆಯೋಗವು ಹುದ್ದೆಗಳ ನೇಮಕಾತಿಗೆ ಮೇ ಮತ್ತು ಜೂನ್ ತಿಂಗಳಿನಲ್ಲಿ ಪ್ರವೇಶ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸದರಿ ಅಧಿಸೂಚನೆಗಳಲ್ಲಿ ನಿಗದಿಪಡಿಸಲಾದ ಪರೀಕ್ಷಾ ದಿನಾಂಕಗಳನ್ನು ಮುಂದೂಡಲಾಗಿದೆ. ಲಾಕ್‌ಡೌನ್ ಮುಗಿದ ನಂತರವೇ ಪರೀಕ್ಷಾ ದಿನಾಂಕಗಳನ್ನು ನಿಗದಿಪಡಿಸಲಾಗುವುದು ಮತ್ತು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳತಕ್ಕದ್ದು ಎಂದು ಹೇಳಿದೆ.

ಈ ಕೆಳಗಿನ ವಿವಿಧ ಹುದ್ದೆಗಳಿಗೆ ಪರೀಕ್ಷೆಗಳನ್ನು ಮುಂದೂಡಲಾಗಿದೆ.

1. ರಾಜ್ಯದ ವಿವಿಧ ಇಲಾಖೆಗಳಲ್ಲಿನ ಸಹಾಯಕರು/ಪ್ರಥಮ ದರ್ಜೆ ಸಹಾಯಕರು ಹುದ್ದೆಗಳು

2. ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಹುದ್ದೆಗಳು

3. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ ಸಮೂಹ 'ಎ' ವೃಂದದ 'ಸಹಾಯಕ ನಿಯಂತ್ರಕರು' ಹುದ್ದೆಗಳು

4. ರಾಜ್ಯದ ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳು

ಅಭ್ಯರ್ಥಿಗಳು ಪ್ರಕಟಣೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KPSC postponed recruitment exams due to coronavirus fear.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X