UGC NET Exam 2021: ಎನ್‌ಇಟಿ ಮೇ ಪರೀಕ್ಷೆಗೆ ಮಾರ್ಚ್ 2ರೊಳಗೆ ಅರ್ಜಿ ಹಾಕಿ

ಯುಜಿಸಿ ಎನ್‌ಇಟಿ 2021 ಪರೀಕ್ಷೆಯ ಅಧಿಸೂಚನೆ ಪ್ರಕಟ

ಯುಜಿಸಿ ಎನ್‌ಇಟಿ ಮೇ 2021ರ ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಎನ್‌ಟಿಎ ಪ್ರಕಟ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 2,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಯುಜಿಸಿ-ಎನ್ಇಟಿ ಪರೀಕ್ಷೆಯು ಮೇ 2,3,4,5,6,7,10,11,12,14 ಮತ್ತು 17,2021ರಂದು ನಡೆಯಲಿದೆ. ಅರ್ಜಿ ಸಲ್ಲಿಸಲು ಕೇಳಲಾಗಿರುವ ಅರ್ಹತೆ, ವಯೋಮಿತಿ, ಪರೀಕ್ಷಾ ದಿನಾಂಕಗಳು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿ ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:

ಯುಜಿಸಿ ಎನ್ಇಟಿ ಪರೀಕ್ಷೆ ತೆಗೆದುಕೊಳ್ಳಲು ಇಚ್ಚಿಸುವ ಅಭ್ಯರ್ಥಿಗಳು ಶೇ.55%ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಲ್ಲಿ ಪೂರೈಸಿರಬೇಕು. ಸ್ನಾತಕೋತ್ತರ ಪದವಿಯನ್ನು ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳು ಹಾಗೂ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಕೂಡ ಈ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.

ವಯೋಮಿತಿ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಮಾರ್ಚ್ 1,2021ರ ಅನ್ವಯ ಗರಿಷ್ಟ 31 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ,ಓಬಿಸಿ,ಮಹಿಳಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಗೆ ಯಾವುದೇ ಗರಿಷ್ಟ ವಯೋಮಿತಿಯನ್ನು ನಿಗದಿಪಡಿಸಲಾಗಿರುವುದಿಲ್ಲ.

ಅರ್ಜಿ ಶುಲ್ಕದ ವಿವರ:

ಸಾಮಾನ್ಯ ಅಭ್ಯರ್ಥಿಗಳು 1000/-ರೂ, ಸಾಮಾನ್ಯ-ಆರ್ಥಿಕವಾಗಿ ಹಿಂದುಳಿದ/ಓಬಿಸಿ -ಎನ್‌ಸಿಎಲ್ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾರ್ಚ್ 3,2021ರೊಳಗೆ ಪಾವತಿಸಬೇಕಿರುತ್ತದೆ.

ಪರೀಕ್ಷೆಯ ವಿವರ:

ಪರೀಕ್ಷಾ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ಪರೀಕ್ಷೆಯ ಒಟ್ಟು ಅಂಕಗಳು : 300
ಪತ್ರಿಕೆ : 2 ಪ್ರಶ್ನೆ ಪತ್ರಿಕೆಗಳು
ಸಮಯ : ಒಟ್ಟು 3 ಗಂಟೆಗಳ ಅವಧಿ

ಎನ್ಇಟಿ ಮೇ 2021ರ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಫೆಬ್ರವರಿ 2,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 2,2021
ಅರ್ಜಿ ಶುಲ್ಕ ಆನ್‌ಲೈನ್ ಮೂಲಕ ಪಾವತಿಸಲು ಕೊನೆಯ ದಿನಾಂಕ: ಮಾರ್ಚ್ 3,2021

ಈ ಕೆಳಗಿನ ಸ್ಟೆಪ್ಸ್ ಮೂಲಕ ಎನ್‌ಇಟಿ ಮೇ 2021ರ ಪರೀಕ್ಷೆಗೆ ಅರ್ಜಿ ಸಲ್ಲಿಸಿ:

ಸ್ಟೆಪ್ 1: ಯುಜಿಸಿ ಎನ್‌ಇಟಿ ಅಧಿಕೃತ ವೆಬ್‌ಸೈಟ್‌ https://ugcnet.nta.nic.in/webinfo/Page/Page?PageId=1&LangId=P ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ ಆನ್‌ಲೈನ್‌ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಂತರ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 5: ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
NTA released UGC NET may exam 2021 notification. Aspirants can apply before march 2,2021.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+