ಪೊಲೀಸ್ ಇಲಾಖೆ ನೇಮಕಾತಿ ಪರೀಕ್ಷೆ: ಪ್ರಶ್ನೆ ಪತ್ರಿಕೆ ಮತ್ತು ಸಿಲಬಸ್ ವಿವರ

ಕರ್ನಾಟಕ ಪೊಲೀಸ್ ಇಲಾಖೆಯ ಸಿವಿಲ್ ಮತ್ತು ಗುಪ್ತಚರ ವಿಭಾಗದ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯು ಸೆಪ್ಟೆಂಬರ್ 17 ರಂದು ನಡೆಯಲಿದೆ. ಒಟ್ಟು 200 ಅಂಕಗಳ ಲಿಖಿತ ಪರೀಕ್ಷೆಯು ಪದವಿ ಮಟ್ಟದ ಎರಡು ಪತ್ರಿಕೆಗಳನ್ನೊಳಗೊಂಡಿರುತ್ತದೆ.

ಕರ್ನಾಟಕ ಪೊಲೀಸ್ ಇಲಾಖೆಯ ಸಿವಿಲ್ ಮತ್ತು ಗುಪ್ತಚರ ವಿಭಾಗದ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯು ಸೆಪ್ಟೆಂಬರ್ 17 ರಂದು ನಡೆಯಲಿದೆ.

ಒಟ್ಟು 200 ಅಂಕಗಳ ಲಿಖಿತ ಪರೀಕ್ಷೆಯು ಪದವಿ ಮಟ್ಟದ ಎರಡು ಪತ್ರಿಕೆಗಳನ್ನೊಳಗೊಂಡಿರುತ್ತದೆ. ಪರೀಕ್ಷಾರ್ಥಿಗಳು ಕರೆಪತ್ರ ಮತ್ತು ಸೂಕ್ತ ದಾಖಲಾತಿಗಳೊಂದಿಗೆ ಪರೀಕ್ಷೆಗೆ ಹಾಜರಾಗಲು ಕೋರಿದೆ.

ಪೊಲೀಸ್ ನೇಮಕಾತಿ ಪರೀಕ್ಷೆ: ಕರೆಪತ್ರ ಡೌನ್ಲೋಡ್ ಗೆ ಲಭ್ಯಪೊಲೀಸ್ ನೇಮಕಾತಿ ಪರೀಕ್ಷೆ: ಕರೆಪತ್ರ ಡೌನ್ಲೋಡ್ ಗೆ ಲಭ್ಯ

ಪೊಲೀಸ್ ಇಲಾಖೆ ನೇಮಕಾತಿ ಪರೀಕ್ಷೆ

ಲಿಖಿತ ಪರೀಕ್ಷೆಗೆ ತರಬೇಕಾದ ದಾಖಲಾತಿಗಳು

  1. ಲಿಖಿತ ಪರೀಕ್ಷೆ ಕರೆಪತ್ರ
  2. ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಯ ಫಲಿತಾಂಶ ಹಾಳೆ
  3. ಗುರುತಿನ ಚೀಟಿ
  4. ಆನ್-ಲೈನ್ ಅರ್ಜಿಯ ಜೆರಾಕ್ಸ್ ಪ್ರತಿ

ಮೇಲೆ ತಿಳಿಸಿದ ದಾಖಲಾತಿಗಳನ್ನು ತರದ್ದಿದ್ದಲ್ಲಿ ಲಿಖಿತ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ.

ಪ್ರಶ್ನೆಪತ್ರಿಕೆ ವಿವರ

ಪತ್ರಿಕೆ-1

  • ಈ ಪ್ರಶ್ನೆಪತ್ರಿಕೆಯಲ್ಲಿ ಪ್ರಬಂಧ ಬರಹ, ಸಾರಾಂಶ ಬರಹ, ಭಾಷಾಂತರ ಪ್ರಶ್ನೆಗಳು ಇರುತ್ತವೆ.
  • ಪ್ರಬಂಧ ಬರಹದಲ್ಲಿ 600 ಶಬ್ದಗಳ ಮಿತಿಯನ್ನು ಮೀರಬಾರದು. ಪ್ರಬಂಧದ ಜೊತೆ ಸಾರಾಂಶ ಬರಹ (Precis) ಪ್ರಶ್ನೆಯನ್ನೂ ಕೊಡಲಾಗುವುದು.
  • ಅಭ್ಯರ್ಥಿಗಳು ಕೊಡಲಾಗಿರುವ ಉತ್ತರ ಪತ್ರಿಕೆಯಲ್ಲಿ ಉತ್ತರಿಸತಕ್ಕದ್ದು ಹಾಗೂ ಅತಿರಿಕ್ತ ಉತ್ತರ ಪತ್ರಿಕೆಗಳನ್ನು ಕೊಡಲಾಗುವುದಿಲ್ಲ.
  • ಈ ಪರೀಕ್ಷೆಯ ಅವಧಿ ಒಂದು ಗಂಟೆ ಮೂವತ್ತು ನಿಮಿಷಗಳಾಗಿದ್ದು, 50 ಅಂಕಗಳನ್ನು ಹೊಂದಿರುತ್ತದೆ.

(20 ಅಂಕಗಳು ಪ್ರಬಂಧಕ್ಕೆ, 10 ಅಂಕಗಳು ಸಾರಾಂಶ ಬರಹಕ್ಕೆ ಹಾಗೂ 20 ಅಂಕಗಳು ಕನ್ನಡದಿಂದ ಇಂಗ್ಲೀಷ್‍ಗೆ ಮತ್ತು ಇಂಗ್ಲೀಷ್‍ನಿಂದ ಕನ್ನಡ ಭಾಷಾಂತರಕ್ಕೆ) ಇದರಲ್ಲಿ ಕನಿಷ್ಟ ಅಂಕಗಳು ಇರುವುದಿಲ್ಲ.

ಅಭ್ಯರ್ಥಿಗಳು ಪತ್ರಿಕೆ-1 ರಲ್ಲಿನ ಪ್ರಬಂಧ ಬರಹವನ್ನು ಇಂಗ್ಲೀಷ್ ಅಥವಾ ಕನ್ನಡದಲ್ಲಿ ಉತ್ತರಿಸಬಹುದು

ಪತ್ರಿಕೆ-2

  • ಈ ಪ್ರಶ್ನೆಪತ್ರಿಕೆಯು ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿದ್ದು, 150 ಅಂಕಗಳಿಗೆ ವಸ್ತುನಿಷ್ಟ (ಆಬ್ಜೆಕ್ಟೀವ್) ಮಾದರಿಯದಾಗಿದ್ದು, ಬಹುವಿಧ ಆಯ್ಕೆ (Multiple Choice) ಉತ್ತರಗಳ ಲಿಖಿತ ಪರೀಕ್ಷೆ ಇರುತ್ತದೆ.
  • ಇವುಗಳನ್ನು ಉತ್ತರಿಸಲು ಒಂದು ಗಂಟೆ ಮೂವತ್ತು ನಿಮಿಷ ಸಮಯ ನೀಡಲಾಗುತ್ತದೆ. ಈ ಪ್ರಶ್ನೆ ಪತ್ರಿಕೆಯಲ್ಲಿ ಅಭ್ಯರ್ಥಿಯ ಮಾನಸಿಕ ಸಾಮಥ್ರ್ಯವನ್ನು ಅಳೆಯಲಾಗುವುದು.
  • ಪ್ರಶ್ನೆ ಪತ್ತಿಕೆಯಲ್ಲಿ ಪ್ರಚಲಿತ ವಿದ್ಯಮಾನಗಳು, ಸಾಮಾನ್ಯ ಜ್ಞಾನವನ್ನೊಳಗೊಂಡ ಸಾಮಾನ್ಯ ಅಧ್ಯಯನ, ಭಾರತದ ಸ್ವಾತಂತ್ರ್ಯ ಸಂಗ್ರಾಮ, ಭಾರತೀಯ ಸಂವಿಧಾನ, ಇತಿಹಾಸ, ಭೂಗೋಳ, ವಿಜ್ಞಾನ, ಕಲೆ, ಸಾಹಿತ್ಯ, ಮಾನಸಿಕ ಸಾಮಥ್ರ್ಯ ಮತ್ತು ನೀತಿ ಶಿಕ್ಷಣ ಇತ್ಯಾದಿಗಳ ಬಗ್ಗೆ ಪ್ರಶ್ನೆಗಳು ಇರುತ್ತವೆ.
  • ಪ್ರತಿ ತಪ್ಪು ಉತ್ತರಕ್ಕೆ ಅಂತಹುದೇ ಪ್ರಶ್ನೆಯ ಸರಿ ಉತ್ತರದ 25% (.375) ರಷ್ಟು ಅಂಕಗಳನ್ನು ಕಳೆಯಲಾಗುವುದು.

ಸೂಚನೆ

ಅಭ್ಯರ್ಥಿಗಳು ಎರಡು ಪತ್ರಿಕೆಗಳಿಗೂ ಹಾಜರಾಗುವುದು ಕಡ್ಡಾಯವಾಗಿರುತ್ತದೆ. ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಆಧಾರದ ಮೇಲೆ ಮುಂದಿನ ಹಂತದ ಮೌಖಿಕ ಪರೀಕ್ಷೆಗೆ ಪಟ್ಟಿ ಸಿದ್ದ ಪಡಿಸಿ ಪ್ರಕಟಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka state Police recruitment examination on September 17. It consists of two papers for 200 marks. Candidates should attend both papers.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X